ಪುತ್ತೂರು(ಅಕ್ಟೋಬರ್ 30): ರಾಜ್ಯದ ಶ್ರೀಮಂತ ದೇಗುಲವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಇನ್ನು ಮುಂದೆ ಅಭಿವೃದ್ಧಿ ಸಮಿತಿ ಅಥವಾ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ತರಬೇಕೇ ಎನ್ನುವ ವಿಚಾರ ಇದೀಗ ತೆರೆ ಬಿದ್ದಿದೆ. ರಾಜ್ಯ ಸರಕಾರ ರಾಜ್ಯ ಧಾರ್ಮಿಕ ಧತ್ತಿ ಇಲಾಖೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಅಭಿವೃದ್ಧಿ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದೆ. ರಾಜ್ಯದ ಶ್ರೀಮಂತ ಕ್ಷೇತ್ರ ಎಂದು ಗುರುತಿಸಿಕೊಂಡಿರುವ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದು ಒಂದು ವರ್ಷ ಪೂರ್ಣಗೊಂಡಿತ್ತು. ದೇಗುಲದಲ್ಲಿ ನೂತನ ಆಡಳಿತ ಸಮಿತಿ ನೇಮಕಾತಿ ವಿಚಾರ ಆಗಾಗ್ಗೆ ಪ್ರಸ್ತಾಪವಾಗುತ್ತಾದರೂ ಸರಕಾರ ಮಾತ್ರ ಈ ಬಗ್ಗೆ ಸಮರ್ಪಕವಾದ ತೀರ್ಮಾನ ಈವರಗೂ ತೆಗೆದುಕೊಂಡಿರಲಿಲ್ಲ. ಈ ವಿಳಂಬಕ್ಕೆ ಕಾರಣ ಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿ ಬದಲಿಗೆ ಅಭಿವೃದ್ಧಿ ಸಮಿತಿ ಅಥವಾ ಪ್ರಾಧಿಕಾರ ರಚಿಸಲು ಸರಕಾರ ನಿರ್ಧರಿಸಿದೆ ಎನ್ನುವ ಸೂಚನೆಯನ್ನು ಸರಕಾರ ಈ ಹಿಂದೆಯೇ ನೀಡಿತ್ತು.
ಈ ಕಾರಣದಿಂದಲೇ ದೇವಸ್ಥಾನದಲ್ಲಿ ಪ್ರಸ್ತುತ ವ್ಯವಸ್ಥಾಪನ ಸಮಿತಿಯ ಆಯ್ಕೆಯ ಪ್ರಕ್ರಿಯೆಗಳು ಸ್ಥಗಿತಗೊಂಡಿತ್ತು. ಆದುದರಿಂದ ಕುಕ್ಕೆಗೆ ಮುಂದೆ ಅಭಿವೃದ್ಧಿ ಸಮಿತಿಯೋ ಅಥವಾ ಪ್ರಾಧಿಕಾರವೋ ಎನ್ನುವ ಕ್ಷೇತ್ರದ ಭಕ್ತರ ಮುಂದಿದ್ದ ಗೊಂದಲಕ್ಕೆ ಸರಕಾರ ಇದೀಗ ಸ್ಪಷ್ಟತೆ ನೀಡಿದೆ.
ಸುಬ್ರಹ್ಮಣ್ಯ ಕ್ಷೇತ್ರವನ್ನು ಪ್ರಾಧಿಕಾರ ಮಾಡಬೇಕೆಂಬ ಚಿಂತನೆಯ ಬಗ್ಗೆ ಇಲಾಖೆ, ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದರ ಮುಂದುವರೆದ ಭಾಗವಾಗಿ ಸದ್ಯ ಪ್ರಾಧಿಕಾರ ರಚಿಸದೆ ಅಭಿವೃದ್ಧಿ ಸಮಿತಿ ರಚಿಸಲು ಸರಕಾರ ನಿರ್ಧರಿಸಿತ್ತು. ದೇವಸ್ಥಾನದ ಆಡಳಿತ ನೋಡಿಕೊಳ್ಳುವ ದೃಷ್ಠ್ಠಿಯಿಂದ ಇಲಾಖೆ ವತಿಯಿಂದ ಸಾರ್ವಜನಿಕವಾಗಿ ಅರ್ಜಿ ಕರೆದು, ಬಳಿಕ ಅವುಗಳ ಪರಿಶೀಲನೆ ನಡೆಸಿ, 8 ಮಂದಿ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನ ಸಮಿತಿಯು ರಾಜ್ಯ ಸರಕಾರದ ಧಾರ್ಮಿಕದತ್ತಿ ಇಲಾಖೆಯ ಮುಖಾಂತರ ರಚನೆಯಾಗುತ್ತಿತ್ತು. ಆ ಬಳಿಕದಲ್ಲಿ ಕ್ಷೇತ್ರದ ಅಭಿವೃದ್ಧಿ, ಚಟುವಟಿಕೆಗಳು ವ್ಯವಸ್ಥಾಪನ ಸಮಿತಿ ಸದಸ್ಯರ, ಸಮಿತಿಯ ನಿರ್ಣಯದಂತೆ ನಡೆಯುತ್ತದೆ. ಆದರೆ, ಸರಕಾರ ಈವರೆಗೆ ವ್ಯವಸ್ಥಾಪನಾ ಸಮಿತಿ ರಚನೆಯ ಬಗ್ಗೆ ಯಾವುದೇ ಸೂಚನೆ ನೀಡದಿರುವ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ
ಇದನ್ನೂ ಓದಿ : ಕಾಂಗ್ರೆಸ್ ತಾಯಿಗೆ ಚೂರಿ ಹಾಕಿದ ನಿನ್ನನ್ನು ಜನ ನಂಬ್ತಾರಾ?; ಮುನಿರತ್ನ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸರಕಾರ ಅಭಿವೃದ್ಧಿ ಪ್ರಾಧಿಕಾರ ರಚಿಸುತ್ತದೆ ಎಂದಾದಲ್ಲಿ ಪ್ರಾಧಿಕಾರ ರಚನೆ ಆಗುವಲ್ಲಿವರೆಗೆ ಸರಕಾರ ಅಭಿವೃದ್ಧಿ ಸಮಿತಿ ರಚಿಸುತ್ತದೆ. ಇದರಲ್ಲಿ ಐವರು ಸದಸ್ಯರನ್ನು ಒಳಗೊಳ್ಳಲಿದ್ದು, ಪ್ರಾಧಿಕಾರ ರಚನೆ ಆಗುವಲ್ಲಿ ವರೆಗೆ ಕ್ಷೇತ್ರದ ಆಡಳಿತ, ಅಭಿವೃದ್ಧಿ ಕೆಲಸಗಳ ಬಗ್ಗೆ ಈ ಸಮಿತಿ ಜವಬ್ದಾರಿ ವಹಿಸಿಕೊಳ್ಳಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ