ಕುವೆಂಪು ವಿವಿ ಘಟಿಕೋತ್ಸವಕ್ಕೆ ರಾಜ್ಯಪಾಲರ ಸಮ್ಮತಿ; ಜುಲೈ 28 ಅಥವಾ 29ರಂದು ಆಯೋಜನೆ ಸಾಧ್ಯತೆ

ಜಿಲ್ಲಾಧಿಕಾರಿಗಳು ಅನುಮತಿ ನೀಡಿದಲ್ಲಿ ಘಟಿಕೋತ್ಸವವನ್ನು ಒಳಾಂಗಣ ಕಟ್ಟಡದಲ್ಲಿ ನಡೆಸಲು ಚಿಂತನೆ ಮಾಡಲಾಗಿದೆ. ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ಹೊಸ ಸಭಾಂಗಣದಲ್ಲಿ ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವ ನಡೆಸುವ ಉದ್ದೇಶವಿದೆ.

ಕುವೆಂಪು ವಿಶ್ವವಿದ್ಯಾಲಯ

ಕುವೆಂಪು ವಿಶ್ವವಿದ್ಯಾಲಯ

  • Share this:
ಶಿವಮೊಗ್ಗ(ಜುಲೈ 10): ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದರೆ ಇದೇ ತಿಂಗಳು ಜುಲೈ 28 ಅಥವಾ 29 ರಂದು ಆಂತರಿಕವಾಗಿ ಘಟಿಕೋತ್ಸವ ಕಾರ್ಯಕ್ರಮ ನಡೆಸಲು ವಿವಿಯ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.  

ಕುವೆಂಪು ವಿವಿಯ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವರ್ಷದ ಫೆಬ್ರವರಿ ಇಲ್ಲವೇ ಮಾರ್ಚ್ ತಿಂಗಳಲ್ಲಿ ಘಟಿಕೋತ್ಸವ ನಡೆಯಬೇಕಿತ್ತು. ಅದರೆ ಕೋವಿಡ್-19 ರ ಹಿನ್ನೆಲೆಯಲ್ಲಿ ಘಟಿಕೋತ್ಸವ ನಡೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಕುವೆಂಪು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಘಟಿಕೋತ್ಸನ ನಡೆಸಲು ಸಮ್ಮತಿ ನೀಡಿದ್ದಾರೆ. ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ವಿವಿಯ ಸಿಂಡಿಕೇಟ್ ಸದಸ್ಯರು ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಡಿಗ್ರಿ, ಎಂಜಿನಿಯರಿಂಗ್, ಡಿಪ್ಲೊಮೊ ಸೇರಿ ವಿವಿಧ ಕೋರ್ಸ್​ಗಳ ಅಂತಿಮ ಸೆಮಿಸ್ಟರ್​ಗಷ್ಟೇ ಪರೀಕ್ಷೆ; ಉಳಿದವರು ನೇರ ಉತ್ತೀರ್ಣ

ಕಾರ್ಯಕ್ರಮ ಆಯೋಜಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡುವಂತೆ ಕೋರಿ ಈಗಾಗಲೇ ಪತ್ರ ಬರೆಯಲಾಗಿದೆ. ಜಿಲ್ಲಾಧಿಕಾರಿಗಳು ಅನುಮತಿ ನೀಡಿದ ಪಕ್ಷದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಒಳಾಂಗಣ ಕಟ್ಟಡದಲ್ಲಿ (ಆಂತರಿಕವಾಗಿ) ನಡೆಸಲು ಚಿಂತನೆ ಮಾಡಲಾಗಿದೆ. ಸುಮಾರು ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವವನ್ನು ನಡೆಸಲು ಚಿಂತನೆ ನಡೆದಿದೆ.

ರ್ಯಾಂಕ್ ವಿಜೇತರು, ಪಿಎಚ್ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಈ ಘಟಿಕೋತ್ಸವದಲ್ಲಿ ಭಾಗವಹಿಸಬಹುದಾಗಿದೆ. ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ವಿವಿಯ ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಸ್ಥಾನಕ್ಕೂ ಆಪರೇಷನ್ ಕಮಲನಿನ್ನೆ (ಜುಲೈ 9) ನಡೆದ ಈ ಸಭೆಯಲ್ಲಿ ಇನ್ನೂ ಕೆಲವು ನಿರ್ಧಾರಗಳನ್ನ ಕೈಗೊಂಡಿರುವುದು ತಿಳಿದು ಬಂದಿದೆ. ವಿಶ್ವ ವಿದ್ಯಾಲಯದ ಬೋಧಕೇತರ ಸಿಬ್ಬಂದಿಯ (ನಾನ್ ಟೀಚಿಂಗ್ ಸ್ಟಾಫ್) ಸೀನಿಯಾರಿಟಿ ಲಿಸ್ಟ್ (ಜ್ಯೇಷ್ಠತಾ ಪಟ್ಟಿ) ಅನ್ನು ಜಾರಿಗೆ ತರಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಹಳ ಕಾಲದಿಂದ ಈ ಪಟ್ಟಿ ಅನುಷ್ಠಾನಕ್ಕೆ ಬರದೆ ನೆನೆಗುದಿಯಲ್ಲಿ ಬಿದ್ದಿತ್ತು.
Published by:Vijayasarthy SN
First published: