HOME » NEWS » District » LET THE STATE GOVERNMENT CREATE AUTHORITY FOR THE TIGALA COMMUNITY DEVELOPMENT LEADERS REQUEST THE GOVERNMENT ATVR MAK

ರಾಜ್ಯ ಸರ್ಕಾರ ತಿಗಳ ಸಮುದಾಯದ ಅಭಿವೃದ್ಧಿಗೂ ಪ್ರಾಧಿಕಾರ ರಚಿಸಲಿ; ತಿಗಳರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಸಿಎಂ ಯಡಿಯೂರಪ್ಪ ನವರು ಬಡವರ ಪರವಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ಅವರಿಗೆ ಬಡವರ ಬಗ್ಗೆ ಕಾಳಜಿಯಿದೆ. ಹಾಗಾಗಿ ಅವರು ನಮ್ಮ ಸಮುದಾಯಕ್ಕೆ ಪ್ರಾಧಿಕಾರ ರಚನೆ ಮಾಡ್ತಾರೆಂಬ ನಂಬಿಕೆಯಿದೆ ಎಂದು ಅಖಿಲ ಕರ್ನಾಟಕ ತಿಗಳರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎ.ಎಚ್. ಬಸವರಾಜ್ ಭರವಸೆ ವ್ಯಕ್ತಪಡಿಸಿದ್ದಾರೆ.

news18-kannada
Updated:December 4, 2020, 9:45 PM IST
ರಾಜ್ಯ ಸರ್ಕಾರ ತಿಗಳ ಸಮುದಾಯದ ಅಭಿವೃದ್ಧಿಗೂ ಪ್ರಾಧಿಕಾರ ರಚಿಸಲಿ; ತಿಗಳರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ
ಪತ್ರಿಕಾಗೋಷ್ಠಿಯಲ್ಲಿ ತಿಗಳ ಸಮುದಾಯದ ನಾಯಕರು.
  • Share this:
ರಾಮನಗರ: ರಾಜ್ಯ ಬಿಜೆಪಿ ಸರ್ಕಾರ ಮರಾಠ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲು ಮುಂದಾದ ಬೆನ್ನಿಗೆ ತಿಗಳರ ಸಮುದಾಯವೂ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಒತ್ತಾಯಿಸಿದೆ. ತಿಗಳ ಸಮುದಾಯದ ಮುಖಂಡರು ಇಂದು ಸುದ್ದಿಗೋಷ್ಟಿ ನಡೆಸಿ ಆಗ್ರಹಿಸಿದ್ದಾರೆ. ರಾಮನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಮುದಾಯದ ಮುಖಂಡರು "ಸಿಎಂ ಯಡಿಯೂರಪ್ಪನವರ ಲಿಂಗಾಯಿತ ಸಮುದಾಯಕ್ಕೆ ರಾಜ್ಯ ಸರ್ಕಾರ ಪ್ರಾಧಿಕಾರ ರಚನೆ ಮಾಡಿ ನಿರ್ದೇಶಕರನ್ನು ನೇಮಿಸಿ ಆದೇಶ ಮಾಡಿದೆ. ಒಕ್ಕಲಿಗ ಸಮುದಾಯದ ಮುಖಂಡರು ಈ ಬಗ್ಗೆ ಸರ್ಕಾರಕ್ಕೆ ಒತ್ತಾಯಿಸಿ ನಮ್ಮ ಸಮುದಾಯಕ್ಕೂ ಪ್ರಾಧಿಕಾರ ರಚನೆ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ. ಆದರೆ ನಮ್ಮ ಸಮುದಾಯದ ಜನರು ಕರ್ನಾಟಕ ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಜನರು ಇದ್ದೇವೆ. ಹಾಗೆಯೇ ತಿಗಳ ಸಮುದಾಯದಲ್ಲಿಯೂ ಸಹ ಕಡುಬಡವರು, ನಿರ್ಗತಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಸರ್ಕಾರ ನಮ್ಮ ಸಮುದಾಯದ ಬಗ್ಗೆ ಗಮನಹರಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಅಖಿಲ ಕರ್ನಾಟಕ ತಿಗಳರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎ.ಎಚ್. ಬಸವರಾಜ್ ಮಾತನಾಡಿ, "ರಾಜ್ಯ ಸರ್ಕಾರ ನಮ್ಮ ಸಮುದಾಯಕ್ಕೆ ಪ್ರಾಧಿಕಾರ ರಚನೆ ಮಾಡುವ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ನವರು ಬಡವರ ಪರವಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ಅವರಿಗೆ ಬಡವರ ಬಗ್ಗೆ ಕಾಳಜಿಯಿದೆ. ಹಾಗಾಗಿ ಅವರು ನಮ್ಮ ಸಮುದಾಯಕ್ಕೆ ಪ್ರಾಧಿಕಾರ ರಚನೆ ಮಾಡ್ತಾರೆಂಬ ನಂಬಿಕೆಯಿದೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಡ್ರಗ್ಸ್​ ಕೇಸ್​; ನಟಿ ರಾಗಿಣಿ ದ್ವಿವೇದಿಗೆ ಹೊಸ ವರ್ಷಕ್ಕೂ ಇಲ್ಲ ಬಿಡುಗಡೆ ಭಾಗ್ಯ !

"ತಿಗಳರ ಜನಾಂಗದಲ್ಲಿ ವಿದ್ಯಾರ್ಥಿಗಳು ಕಷ್ಟದಲ್ಲಿದ್ದಾರೆ. ಅವರ ವಿದ್ಯಾಭ್ಯಾಸಕ್ಕೂ ಸಂಕಷ್ಟವಾಗಿ. ಈ ಕಾರಣ ರಾಜ್ಯ ಸರ್ಕಾರ ಪ್ರಾಧಿಕಾರ ರಚನೆ ಮಾಡಿದರೆ ಬಡವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ಹಿಂದೆ ಆಡಳಿತ ನಡೆಸಿದ ರಾಜಕೀಯ ಪಕ್ಷಗಳು ಕೇವಲ ನಮ್ಮನ್ನ ಮತಕ್ಕಾಗಿ ಬಳಸಿಕೊಂಡಿದ್ದಾರೆ. ನಮ್ಮ ಸಮುದಾಯದ ಯಾವುದೇ ಕಷ್ಟಸುಖಗಳನ್ನ ಕೇಳಿಲ್ಲ. ಹಾಗಾಗಿ ಈಗಿನ ರಾಜ್ಯ ಸರ್ಕಾರ ನಮ್ಮ ಜನಾಂಗದ ಬಗ್ಗೆ ಹೆಚ್ಚಿನ ಗಮನಹರಿಸಬೇಕು" ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.
Youtube Video

ರಾಜ್ಯ ಸರ್ಕಾರ ಮರಾಠ ಸಮುದಾಯಕ್ಕೆ ಪ್ರಾಧಿಕಾರ ಘೋಷಣೆ ಮಾಡಿದ ಬೆನ್ನಿಗೆ ಇದೀಗ ಅನೇಕ ಸಮುದಾಯದವರು ತಮಗೂ ಪ್ರಾಧಿಕಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಅಲ್ಲದೆ, ಲಿಂಗಾಯತ ಸಮುದಾಯ ತಮಗೆ ಶೇ.17 ರಷ್ಟು ಮೀಸಲಾತಿ ನೀಡುವಂತೆ ಪಟ್ಟು ಹಿಡಿದಿದೆ. ಇನ್ನೂ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದ್ದನ್ನು ಖಂಡಿಸಿ ನಾಳೆ ಅಂದರೆ ಡಿಸೆಂಬರ್​ 05 ರಂದು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ.

(ವರದಿ - ಎ.ಟಿ. ವೆಂಕಟೇಶ್)
Published by: MAshok Kumar
First published: December 4, 2020, 9:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories