• Home
 • »
 • News
 • »
 • district
 • »
 • ಕೊರೋನಾ ನಿಯಂತ್ರಣಕ್ಕೆ ಕಲಬುರ್ಗಿಯಲ್ಲಿ ಮೂರು ದಿನ ಸಂಪೂರ್ಣ ಲಾಕ್​ಡೌನ್: ಜಿಲ್ಲಾಧಿಕಾರಿ

ಕೊರೋನಾ ನಿಯಂತ್ರಣಕ್ಕೆ ಕಲಬುರ್ಗಿಯಲ್ಲಿ ಮೂರು ದಿನ ಸಂಪೂರ್ಣ ಲಾಕ್​ಡೌನ್: ಜಿಲ್ಲಾಧಿಕಾರಿ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ರಾಜ್ಯದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿದ ಬಳಿಕ ನೆನ್ನೆ ಕೊರೋನಾ ಆರ್ಭಟ ತಗ್ಗಿದೆ. ಆದರೆ, ಸಾವಿನ ಸಂಖ್ಯೆಯಲ್ಲಿ ಮಾತ್ರ ಏರಿಕೆ ಮುಂದುವರಿದಿದೆ. ಸೋಮವಾರ ರಾಜ್ಯದಲ್ಲಿ ಒಟ್ಟು 25 ಸಾವಿರ ಕೊರೊನಾ ಕೇಸ್​ಗಳು ವರಿಯಾಗಿವೆ. 25,311 ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ ಬರೋಬ್ಬರಿ 529 ಜನ ಕೊರೋನಾಗೆ ಬಲಿಯಾಗಿದ್ದಾರೆ.

ಮುಂದೆ ಓದಿ ...
 • Share this:

  ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಹಾವಳಿ ಮೇ ತಿಂಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಹರಡಲು ಆರಂಭಿಸಿದ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಈ ಮೊದಲು 14 ದಿನಗಳ ಕಾಲ ಲಾಕ್​ಡೌನ್​ ಘೋಷಿಸಿತು. ಲಾಕ್​ಡೌನ್​ ಹೇರಿಕೆ ಬಳಿಕ ಕೊರೋನಾ ಸೋಂಕಿತರ ಪ್ರಕರಣ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗುತ್ತಾ ಬರುತ್ತಿರುವ ಕಾರಣಕ್ಕೆ ಮತ್ತೆ 14 ದಿನಗಳ ಕಾಲ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಅದರಂತೆ ಮುಂದಿನ ತಿಂಗಳು 7ರವರೆಗೆ ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರೆಯಲಿದೆ.


  ರಾಜ್ಯ ಸರ್ಕಾರ ಲಾಕ್​ಡೌನ್​ನಲ್ಲಿ ಹಲವು ವಿನಾಯಿತಿ ನೀಡಿದೆ. ಬೆಳಗ್ಗೆ 10 ಗಂಟೆಯವರೆಗೆ ಎಲ್ಲ ಸೇವೆಗಳು, ಓಡಾಟಕ್ಕೆ ಅನುಮತಿ ನೀಡಲಾಗಿದೆ. 10 ಗಂಟೆಯ ಬಳಿಕ ಅಗತ್ಯ ಸೇವೆಗಳಾದ ಮೆಡಿಕಲ್, ಹಾಲಿನ ಕೇಂದ್ರಗಳು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ನಿರ್ಬಂಧಿಸಿದೆ. ಏತನ್ಮಧ್ಯೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಾರದಲ್ಲಿ ಮೂರು ದಿನ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಮೂರು ದಿನಗಳು ಸಂಪೂರ್ಣ ಲಾಕ್​ಡೌನ್ ಇರಲಿದ್ದು, ಉಳಿದ ದಿನ 10 ಗಂಟೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಕೊಡಗು, ಹಾಸನ, ಬಳ್ಳಾರಿ ಬಳಿಕ ಇದೀಗ ಕೋವಿಡ್ ಪ್ರಕರಣಗಳು ಹೆಚ್ಚಿರುವ ಕಲಬುರ್ಗಿಯಲ್ಲೂ ಮೂರು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗಿದೆ.


  ಕರ್ನಾಟಕ ಸರ್ಕಾರ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಕಠಿಣ ಲಾಕ್​ಡೌನ್​ ಜಾರಿ ಮಾಡಿದೆ. ಮೇ 27ರ ಬೆಳಗ್ಗೆ 6ಗಂಟೆಯಿಂದ ಮೇ 30ರ ಬೆಳಗ್ಗೆ 6 ಗಂಟೆಯವರೆಗೆ ಈ ಕಠಿಣ ಲಾಕ್​ಡೌನ್​ ಜಾರಿಯಲ್ಲಿ ಇರಲಿದೆ. ಈ ಸಮಯದಲ್ಲಿ ಅಗತ್ಯ ಸರಕು ಮತ್ತು ಸೇವಾ ಸಾಗಣಿಗೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳನ್ನು ನಿರ್ಬಂಧಿಸಲಾಗಿದೆ ಎಂದು ಕಲಬುರ್ಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  ರಾಜ್ಯದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿದ ಬಳಿಕ ನೆನ್ನೆ ಕೊರೋನಾ ಆರ್ಭಟ ತಗ್ಗಿದೆ. ಆದರೆ, ಸಾವಿನ ಸಂಖ್ಯೆಯಲ್ಲಿ ಮಾತ್ರ ಏರಿಕೆ ಮುಂದುವರಿದಿದೆ. ಸೋಮವಾರ ರಾಜ್ಯದಲ್ಲಿ ಒಟ್ಟು 25 ಸಾವಿರ ಕೊರೊನಾ ಕೇಸ್​ಗಳು ವರಿಯಾಗಿವೆ. 25,311 ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ ಬರೋಬ್ಬರಿ 529 ಜನ ಕೊರೋನಾಗೆ ಬಲಿಯಾಗಿದ್ದಾರೆ. ಸೋಮವಾರ ಒಂದೇ ದಿನದಲ್ಲಿ 57,333 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 5 ಸಾವಿರ ಕೊರೋನಾ ಕೇಸ್ ದಾಟಿದೆ. ಬೆಂಗಳೂರಿನಲ್ಲಿ 5,701 ಕೊರೋನಾ ಕೇಸ್ ಪತ್ತೆಯಾಗಿದ್ದರೆ, ಬರೋಬ್ಬರಿ 297 ಮಂದಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. 34,378 ಮಂದಿ ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,26,868 ಸಕ್ರಿಯ ಕೊರೋನಾ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


  ಇದನ್ನು ಓದಿ: ಜಾರಕಿಹೊಳಿ ಅಂದು ಹೇಳಿದ್ದನ್ನು ಮಾಧ್ಯಮದ ಮುಂದೆ ಹೇಳಿದ್ದೆ, ಅವರ ವೈಯಕ್ತಿಕ ವಿಚಾರಕ್ಕೂ ನಮಗೂ ಸಂಬಂಧವಿಲ್ಲ; ರಮೇಶ್ ಆಪ್ತ ನಾಗರಾಜು


  ರಾಜ್ಯದಂತೆ ದೇಶದಲ್ಲೂ ಕೊರೋನಾ ಅಬ್ಬರ ತುಸು ತಗ್ಗಿದೆ. ಕಳೆದ 41 ದಿನಗಳಲ್ಲಿ ಮೊದಲ ಬಾರಿಗೆ ದೇಶದ ಕೊರೋನಾ ಪೀಡಿತರ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಆಗಿದೆ. ಅಷ್ಟೇಯಲ್ಲ, ತೀವ್ರ ಆತಂಕ ಮೂಡಿಸಿದ್ದ ಕೊರೋನಾದಿಂದ ಸಾಯುವವರ ಸಂಖ್ಯೆ ಕೂಡ ಕಡಿಮೆ ಆಗಿದೆ. ಸೋಮವಾರ 3,511 ಜನ ಕೊರೋನಾದಿಂದ ಸಾವನ್ನಪ್ಪಿದ್ದು ಇದು ಕಳೆದ 21 ದಿನಗಳಲ್ಲಿ ಕಂಡುಬಂದ ಅತಿ ಕಡಿಮೆ ಸಾವಿನ ಸಂಖ್ಯೆಯಾಗಿದೆ.


  ಒಂದು ಹಂತದಲ್ಲಿ ದೇಶದ ಕೊರೋನಾ ಪೀಡಿತರ ಸಂಖ್ಯೆ ನಾಲ್ಕು ಲಕ್ಷಕ್ಕೂ ಹೆಚ್ಚಾಗಿತ್ತು. ಏಪ್ರಿಲ್ 30ರಿಂದಲೇ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಮೇ 6ರಂದು 4,14,188 ಪ್ರಕರಣಗಳು ಕಂಡುಬಂದಿದ್ದು ದಾಖಲೆಯಾಗಿತ್ತು. ಸಹಜವಾಗಿ ಆತಂಕವನ್ನೂ ಸೃಷ್ಟಿಸಿತ್ತು. ಮೇ ಕಡೆಯಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖ ಆಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದರು.‌ ಅದೇ ರೀತಿ ಈಗ ದೇಶದಲ್ಲಿ ಕೊರೋನಾ ಎರಡನೇ ಅಲೆ ತಳಮುಖಿಯಾಗಿ ಸಾಗುತ್ತಿದೆ.

  Published by:HR Ramesh
  First published: