HOME » NEWS » District » MADIGA COMMUNITY REQUEST FOR IMPLEMENTATION OF AJ SADASHIVA COMMISSION REPORT PTH MAK

ಹುಬ್ಬಳ್ಳಿಯಲ್ಲಿ ಮಾದಿಗರ ವಿರಾಟ್ ಶಕ್ತಿ ಪ್ರದರ್ಶನ; ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯ

ರಾಜ್ಯದ ಉದ್ದಗಲಕ್ಕೂ ಮಾದಿಗ ಸಮುದಾಯದಿಂದ ಜನಾಂದೋಲನ ರೂಪಿಸಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರು ಮಾದಿಗರ ಹೋರಾಟಕ್ಕೆ ಸ್ಪಂದಿಸಬೇಕು‌ ಎಂದು ಮುಖಂಡರು ಆಗ್ರಹಿಸಿದ್ದಾರೆ.

news18-kannada
Updated:February 5, 2021, 7:43 AM IST
ಹುಬ್ಬಳ್ಳಿಯಲ್ಲಿ ಮಾದಿಗರ ವಿರಾಟ್ ಶಕ್ತಿ ಪ್ರದರ್ಶನ; ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯ
ಮಾದಿಗ ಸಮುದಾಯದ ಶಕ್ತಿ ಪ್ರದರ್ಶನ.
  • Share this:
ಹುಬ್ಬಳ್ಳಿ; ಮಾದಿಗರ ವಿರಾಟ್ ಶಕ್ತಿ ಪ್ರದರ್ಶನ ಚೈತನ್ಯ ರಥಯಾತ್ರೆಯನ್ನು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಾದಿಗ ಸಮಾಜದ ಮುಖಂಡರು ಗಬ್ಬೂರ್ ಕ್ರಾಸ್‌ನಲ್ಲಿ  ವಾದ್ಯಮೇಳ ಗಳೊಂದಿಗೆ ರಥಯಾತ್ರೆಗೆ ಭವ್ಯ ಸ್ವಾಗತ ಕೋರಿದ್ರು‌. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನ ಹೋರಾಟ ಸಮಿತಿಯಿಂದ ನಡೆಯುಯುತ್ತಿರುವ‌ ರಥಯಾತ್ರೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಕರ್ನಾಟಕ ರಾಜ್ಯದ ದಲಿತರಲ್ಲಿ ಬಹುಸಂಖ್ಯಾತರಾದ ಮಾದಿಗ ಸಮುದಾಯ ಕಳೆದ ಮೂವತ್ತು ವರ್ಷಗಳಿಂದ ಒಳಮೀಸಲಾತಿ ವರ್ಗೀಕರಣಕ್ಕಾಗಿ ನಿರಂತರವಾದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸುತ್ತಿದೆ.

ಅದರ ಮುಂದುವರಿದ ಭಾಗವಾಗಿ ರಾಜ್ಯಾದ್ಯಂತ  ಚೈತನ್ಯ ಯಾತ್ರೆ ನಡೆಯುತ್ತಿದೆ. ರಾಜ್ಯದ ಉದ್ದಗಲಕ್ಕೂ ಮಾದಿಗ ಸಮುದಾಯದಿಂದ ಜನಾಂದೋಲನ ರೂಪಿಸಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರು ಮಾದಿಗರ ಹೋರಾಟಕ್ಕೆ ಸ್ಪಂದಿಸಬೇಕು‌ ಎಂದು ಮುಖಂಡರು ಆಗ್ರಹಿಸಿದ್ದಾರೆ.

ಪರೀಕ್ಷಾರ್ಥಿಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ;

ಹುಬ್ಬಳ್ಳಿ-ಧಾರವಾಡದಲ್ಲಿ ಫೆ. 7ರಂದು ರವಿವಾರ ನಡೆಯಲಿರುವ ಕೇಂದ್ರ ಲೋಕಸೇವಾ ಆಯೋಗವು ಅಯೋಜಿಸಿರುವ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಮತ್ತು ಅಖಿಲ ಭಾರತ ಸೈನಿಕ ಶಾಲೆ ಪ್ರವೇಶಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ  ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ಮುಗಿದ ನಂತರ  ಅಭ್ಯರ್ಥಿಗಳು ತಮ್ಮ ಊರುಗಳಿಗೆ ತೆರಳಲು  ಮಧ್ಯಾಹ್ನದಿಂದ ಹೆಚ್ಚಿನ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಇದನ್ನೂ ಓದಿ: Farmers Protest: ಫೆ.6ರಂದು ದೇಶಾದ್ಯಂತ ಚಕ್ಕಾ ಜಾಮ್; ದಟ್ಟಣೆಯಲ್ಲಿ ಸಿಲುಕುವ ನಾಗರಿಕರಿಗೆ ನೀರು, ಆಹಾರ ಒದಗಿಸಲು ಮುಂದಾದ ರೈತರು

ಗದಗ,ಕೊಪ್ಪಳ,ರಾಯಚೂರು, ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಬಸ್ಸುಗಳು ಹೊಸೂರು ಪ್ರಾದೇಶಿಕ  ಬಸ್ ನಿಲ್ದಾಣದಿಂದ ಹೊರಡುತ್ತವೆ. ಬೆಳಗಾವಿ, ಶಿರಸಿ, ಯಲ್ಲಾಪುರ, ಕಾರವಾರ, ದಾವಣಗೆರೆ, ಶಿವಮೊಗ್ಗ ಕಡೆಗೆ ಹೋಗುವ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ.

ಶಿರಹಟ್ಟಿ,ನವಲಗುಂದ,ಅಣ್ಣಿಗೇರಿ, ಕಲಘಟಗಿ, ಕುಂದಗೋಳ,ತಡಸ ಮತ್ತಿತರ ಗ್ರಾಮೀಣ ಪ್ರದೇಶಗಳ ಬಸ್ಸುಗಳು ಹಳೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ .
Published by: MAshok Kumar
First published: February 5, 2021, 7:16 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories