ಹುಬ್ಬಳ್ಳಿ: ಧಾರವಾಡದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೀರಾವರಿ ನಿಗಮದ ಕಚೇರಿಗೆ ಕೂಡಲೆ ಜಾಗ ಮಂಜೂರು ಮಾಡುವಂತೆ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್ ಸೊಬರದಮಠ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸಚಿವ ಜಗದೀಶ್ ಶೆಟ್ಟರ್‌ರನ್ನು ಭೇಟಿಯಾದ ಅವರು, ನೀರಾವರಿ ನಿಗಮಕ್ಕೆ ಹೊಸದಾಗಿ ಮಂಜುರಾದ ಜಾಗದ ಬಗ್ಗೆ ಇದುವರೆಗೂ ಸ್ಪಷ್ಟತೆ ಸಿಕ್ಕಿಲ್ಲ. ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸುತ್ತಿಲ್ಲ. ಕೂಡಲೆ ಸೂಕ್ತ ಕ್ರಮ ತೆಗದುಕೊಳ್ಳುವಂತೆ ಸಂಬಂಧ ಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಸಚಿವ ಜಗದೀಶ್ ಶೆಟ್ಟರ್‌ಗೆ ಆಗ್ರಹಿಸಿದ್ದಾರೆ. ನವಲಗುಂದ ಪೊಲೀಸ್ ಇನ್ಸ್‌ಪೆಕ್ಟರ್ ಅಕ್ರಮ ದಂಧೆಗಳನ್ನು ನಿಯಂತ್ರಿಸಲು ವಿಫಲರಾಗಿದ್ದಾರೆ. ನವಲಗುಂದ ತಾಲ್ಲೂಕಿನಲ್ಲಿ ಅಕ್ರಮ ಸಾರಾಯಿ ಮಾರಾಟ ದಂಧೆ ಮತ್ತು ಇಸ್ಪೀಟ್ ಜೂಜಾಟ ಅವ್ಯಾಹತವಾಗಿದೆ. ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ದಕ್ಷ ಅಧಿಕಾರಿಯನ್ನು ಇನ್ಸ್‌ಪೆಕ್ಟರ್ ಆಗಿ ನೇಮಿಸಬೇಕೆಂದು ವೀರೇಶ್ ಸೊಬರದಮಠ ಆಗ್ರಹಿಸಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್ ಅವರಿಂದ ಹೊಲಿಗೆ ಯಂತ್ರಗಳ ವಿತರಣೆ:
ಚರ್ಮ ಉತ್ಪನ್ನಗಳ ತಯಾರಿಕಾ ತರಬೇತಿ ಪಡೆದ 29 ಮಹಿಳಾ ಫಲಾನುಭವಿಗಳಿಗೆ ಮಧುರಾ ಕಾಲೋನಿಯ ಗೃಹ ಕಚೇರಿಯಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೊಲಿಗೆ ಯಂತ್ರ, ಸಲಕರಣೆ ಪೆಟ್ಟಿಗೆ ಹಾಗೂ ಅರ್ಹತಾ ಪತ್ರಗಳನ್ನು ವಿತರಿಸಿದರು.
ಇದನ್ನೂ ಓದಿ: ಕುಮಾರಸ್ವಾಮಿ ಯಾವ ಸೀಮೆ ಲೀಡರ್? ಜೆಡಿಎಸ್ ಪಕ್ಷ ಸತ್ತು ತುಂಬಾ ದಿನಗಳಾಗಿವೆ; ಜಮೀರ್ ಅಹಮದ್ ವಾಗ್ದಾಳಿ
ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ರಾಮನಗರದ 29 ಮಹಿಳೆಯರಿಗೆ ಒಟ್ಟು 10.5 ಲಕ್ಷ ವೆಚ್ಚದಲಿ 60 ದಿನಗಳ ಚರ್ಮ ತಯಾರಿಕಾ ತರಬೇತಿಯನ್ನು ಆಯೋಜಿಸಲಾಗಿತ್ತು. ಪ್ರತಿ ಫಲಾನುಭವಿಗೆ ತರಬೇತಿ ಅವಧಿಯಲ್ಲಿ ರೂ. 6000 ಭತ್ಯೆಯನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ತರಬೇತಿ ನಂತರ ರೂ. 17500 ಮೌಲ್ಯದ ಹೊಲಿಗೆ ಯಂತ್ರ ಹಾಗೂ ಸಲಕರಣೆ ಪೆಟ್ಟಿಗೆಯನ್ನು ನೀಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ