ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕಾಗಿ ಘಟಾನುಘಟಿಗಳ ಪೈಪೋಟಿ; ರಮೇಶ್ ಕತ್ತಿ ತೀವ್ರ ಲಾಭಿ
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಇದೇ ನವೆಂಬರ್ 14ರಂದು ನಡೆಯಲಿದೆ. ಇದಕ್ಕಾಗಿ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಕೊನೆ ಘಳಿಗೆಯಲ್ಲಿ ಚುನಾವಣೆ ಯಾವೆಲ್ಲ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
news18-kannada Updated:November 12, 2020, 8:19 PM IST

ರಮೇಶ್ ಕತ್ತಿ
- News18 Kannada
- Last Updated: November 12, 2020, 8:19 PM IST
ಬೆಳಗಾವಿ (ನವೆಂಬರ್ 12); ಪ್ರತಿಷ್ಠಿತ ಕಣವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. 16 ನಿರ್ದೇಶಕ ಸ್ಥಾನಗಳ ಪೈಕಿ 13 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂಳಿದ ಮೂರು ನಿರ್ದೇಶಕರು ಚುನಾವಣೆಯಲ್ಲಿ ಗೆದ್ದಿದ್ದಾರೆ. ಇದೀಗ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಪ್ರಭಾವಿಗಳು ಲಾಭಿ ನಡೆಸಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಇದೇ ನವೆಂಬರ್ 14 ರಂದು ನಡೆಯಲಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಂಸದ ರಮೇಶ ಕತ್ತಿ ತೀವ್ರ ಲಾಭಿ ಆರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ಅಥಣಿಗೆ ತೆರಳಿ ಡಿಸಿಎಂ ಲಕ್ಷ್ಮಣ ಸವದಿ, ಚಿಕ್ಕೋಡಿ ಸಂಸದ ಅಣ್ಣಾಸಾಬ್ ಜೊಲ್ಲೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನ ಸಂಜೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಉಮೇಶ ಕತ್ತಿ ಸಹ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಟಿಕೆಟ್, ಸಚಿವ ಸ್ಥಾನದಿಂದ ವಂಚಿತರಾಗಿರುವ ಕತ್ತಿ ಸಹೋದರರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಇಟ್ಟಿದ್ದಾರೆ. ಮಾಜಿ ಸಂಸದ ರಮೇಶ ಕತ್ತಿ ಈಗಾಗಲೇ ಹುಕ್ಕೇರಿಯಿಂದ ನಿರ್ದೇಶಕರಾಗಿ ಆಯ್ಕೆಯಾಗಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜತೆಗೆ ಸವದಿ ಹಾಗೂ ಜಾರಕಿಹೊಳಿ ಜತೆಗೆ ಗುರುಸಿಕೊಂಡಿರುವ ಅನೇಕ ನಿರ್ದೇಶಕರು ಸಹ ಅಧ್ಯಕ್ಷ ಸ್ಥಾನಕ್ಕಾಗಿ ತೆರೆ ಮರೆಯಲ್ಲಿ ಲಾಭಿ ನಡೆಸುತ್ತಿದ್ದಾರೆ.
ಇದನ್ನು ಓದಿ: ಆರ್ಆರ್ ನಗರ, ಶಿರಾ ನಂತರ ಎಲ್ಲರ ಗಮನ ಈಗ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯತ್ತ!
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ಡಿಸಿಸಿ ಬ್ಯಾಂಕ್ ಗೆ ರಮೇಶ ಕತ್ತಿ ಅಧ್ಯಕ್ಷರಾಗಬೇಕು. ಈ ಬಗ್ಗೆ ಮೊದಲೇ ನಾವು ಮಾತುಕೊಟ್ಟಿದ್ದೇವೆ. ರಮೇಶ ಕತ್ತಿ ನನ್ನ ಬಾಲ್ಯದ ಸ್ನೇಹಿತ ಎನ್ನುವ ಮೂಲಕ ರಮೇಶ ಕತ್ತಿ ಪರ ಬ್ಯಾಟ್ ಮಾಡಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಉಮೇಶ ಕತ್ತಿ ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಇಬ್ಬರು ನಮ್ಮ ಪಕ್ಷದ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಅಷ್ಟೇ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಇದೇ ನವೆಂಬರ್ 14ರಂದು ನಡೆಯಲಿದೆ. ಇದಕ್ಕಾಗಿ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಕೊನೆ ಘಳಿಗೆಯಲ್ಲಿ ಚುನಾವಣೆ ಯಾವೆಲ್ಲ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಇದೇ ನವೆಂಬರ್ 14 ರಂದು ನಡೆಯಲಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಂಸದ ರಮೇಶ ಕತ್ತಿ ತೀವ್ರ ಲಾಭಿ ಆರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ಅಥಣಿಗೆ ತೆರಳಿ ಡಿಸಿಎಂ ಲಕ್ಷ್ಮಣ ಸವದಿ, ಚಿಕ್ಕೋಡಿ ಸಂಸದ ಅಣ್ಣಾಸಾಬ್ ಜೊಲ್ಲೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನ ಸಂಜೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಉಮೇಶ ಕತ್ತಿ ಸಹ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.