ಸಾಮಾಜಿಕ ಅಂತರ ಕಾಯ್ದುಕೊಳ್ಳಿ 'ನಮ್ಮ ಆರೋಗ್ಯ ನಮ್ಮ ಕೈನಲ್ಲಿ'; ಸಚಿವ ಸಿ.ಸಿ. ಪಾಟೀಲ್

ನಾವು ಕೊರೋನಾವನ್ನು ಮಣಿಸಲೇಬೇಕಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು ಎಂದು ಸಚಿವ ಸಿ.ಸಿ. ಪಾಟೀಲ್ ಜನರಿಗೆ ಸಲಹೆ ನೀಡಿದ್ದಾರೆ.

ಸಿ.ಸಿ.ಪಾಟೀಲ್​

ಸಿ.ಸಿ.ಪಾಟೀಲ್​

  • Share this:
ಗದಗ: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜತೆಗೆ ಮಾಸ್ಕ್‌ ಧರಿಸಬೇಕು "ನಮ್ಮ ಆರೋಗ್ಯ ನಮ್ಮ ಕೈಲಿ" ಎಂದು ಸಾರ್ವಜನಿಕರಿಗೆ ಗಣಿ‌ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ ಪಾಟೀಲ್‌ ಸಲಹೆ ನೀಡಿದ್ದಾರೆ.

ಗಣಿ‌ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಿ.ಸಿ ಪಾಟೀಲ್‌ ಇಂದು ಹಾವೇರಿಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿರುವ ಅವರು, "ದೇಶ ಮತ್ತು ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ.

ಹೀಗಾಗಿ ನಾವು ಕೊರೋನಾವನ್ನು ಮಣಿಸಲೇಬೇಕಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು" ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಜುಲೈ ತಿಂಗಳ ಮೊದಲ ದಿನವೇ ರಾಜ್ಯದಲ್ಲಿ 1,272 ಪ್ರಕರಣ; ಒಟ್ಟು ಸಂಖ್ಯೆ 16,514 ಕ್ಕೇರಿಕೆ

ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯಾದ್ಯಂತ 1,272 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಏಳು ಮಂದಿ ಸಾವನ್ನಪ್ಪಿದ್ಧಾರೆ. ಸಾವಿನ ಸಂಖ್ಯೆ 253ಕ್ಕೆ ಏರಿದೆ. ಈವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 16,514 ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
First published: