Drug Peddler: ರಾಜಧಾನಿಯಂತೆ ಡ್ರಗ್ಸ್ ಸೇವನೆಯಲ್ಲಿ ಹೈಟೆಕ್ ಆಯ್ತಾ ಮಂಡ್ಯ?; ಸಕ್ಕರೆನಾಡಿನಲ್ಲಿ ಇಬ್ಬರು ಡ್ರಗ್ ಪೆಡ್ಲರ್ಸ್ ಬಂಧನ

ಪೊಲೀಸರು ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದಾರೆ. ಈ ವೇಳೆ ಈ ಇಬ್ಬರು ಹೆರಾಯಿನ್ ಹಾಗೂ ಅಫೀಮು ಪೆಡ್ಲರ್‌ಗಳು ಎಂದು ತಿಳಿದು ಬಂದಿದೆ.

ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿರುವ ಪೊಲೀಸರು.

ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿರುವ ಪೊಲೀಸರು.

 • Share this:
  ಮಂಡ್ಯ: ಮಂಡ್ಯ ಪೊಲೀಸರು (Mandya Police) ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಡ್ರಗ್ ಪೆಡ್ಲರ್ಸ್ ಗಳನ್ನ (Arrest Two Drug Peddler) ಬಂಧಿಸಿದ್ದಾರೆ. ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್, ಅಫೀಮುಗಳನ್ನ ಇವರು ಮಾರಾಟ ಮಾಡುತಿರುವುದು ಪತ್ತೆಯಾಗಿದೆ. ಇನ್ನು ಬಂಧಿತರು ಬೆಂಗಳೂರು ಮೂಲದವರಾಗಿದ್ದು, ಬೆಂಗಳೂರು ಪೊಲೀಸರು ಅಲರ್ಟ್ ಆದ ಬಳಿಕ ಇವರು ಮಂಡ್ಯ ಕಡೆ ಮುಖ ಮಾಡಿದ್ರಾ ಅನ್ನೋ ಅನುಮಾನ ವ್ಯಕ್ತವಾಗಿದೆ.

  ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣ ಹೆಚ್ಚಾದ ಹಿನ್ನೆಲೆ ಬೆಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿ ಸಿನಿಮಾದ ಅನೇಕ ನಟ, ನಟಿಯರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇದರ ಜೊತೆಗೆ ಡ್ರಗ್ಸ್ ಜಾಲದ ಅನೇಕ ಡ್ರಗ್ಸ್ ಪೆಡ್ಲರ್ಸ್ ಗಳನ್ನ ಕೂಡ ಬಂಧಿಸಲಾಗಿತ್ತು. ಹಿಗಾಗಿ ಒಂದಷ್ಟು ಡ್ರಗ್ ಪೆಡ್ಲರ್ಸ್ ಗಳು ಬೆಂಗಳೂರು ಪೊಲೀಸರಿಗೆ ಹೆದರಿ ಪಕ್ಕದ ಮಂಡ್ಯ ಜಿಲ್ಲೆಯತ್ತ ಮಾದಕವಸ್ತುಗಳ ಮಾರಾಟಕ್ಕೆ ಮುಖ ಮಾಡಿದ್ದಾರೆ. ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದು, ಇದರಿಂದ ಮಂಡ್ಯದ ಯುವ ಪೀಳಿಗೆ ಮಾದಕವಸ್ತುಗಳ ವ್ಯಸನಿಗಳಾಗುವ ಆತಂಕ ಎದುರಾಗಿದೆ. ಅದರಲ್ಲೂ ವಿದ್ಯಾರ್ಥಿಗಳನ್ನೆ ಇವರು ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದದ್ದು, ಈಗ ಮಂಡ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಈ ಬಗ್ಗೆ ಸಾರ್ವಜನಿಕರಿಂದ ಎಸ್‌ಪಿ ಕಚೇರಿಗೆ ಹಾಗೂ ಪೊಲೀಸ್ ಠಾಣೆಗಳಿಗೆ ಪದೇ ಪದೇ ದೂರುಗಳು ಬರುತ್ತಿದ್ದವು.

  ಈ ಹಿನ್ನೆಲೆ‌ ಮಂಡ್ಯ ಪೊಲೀಸರು ಹೆರಾಯಿನ್, ಅಫೀಮು ಮಾರಾಟ ಮಾಡುವವರನ್ನು ಬಂಧಿಸಲು ಬಲೆ ಬೀಸಿದ್ದರು. ಇತ್ತೀಚೆಗೆ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಬಳಿಯ ಚರ್ಚ್ ರಸ್ತೆ ಹತ್ತಿರ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಇದನ್ನು ಕಂಡ ಪೊಲೀಸರು ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದಾರೆ. ಈ ವೇಳೆ ಈ ಇಬ್ಬರು ಹೆರಾಯಿನ್ ಹಾಗೂ ಅಫೀಮು ಪೆಡ್ಲರ್‌ಗಳು ಎಂದು ತಿಳಿದು ಬಂದಿದೆ.

  ಇದನ್ನು ಓದಿ: Kukke Shri Subramanya Temple: ಕುಕ್ಕೆ ಸುಬ್ರಹ್ಮಣ್ಯ ರಥ ಯಾವುದರಲ್ಲಿ ಕಟ್ಟುತ್ತಾರೆ? ಇದರ ವೈಶಿಷ್ಟ್ಯವೇನು ಗೊತ್ತಾ?

  ವಿದ್ಯಾರ್ಥಿಗಳೆ ಇವರ ಮೈನ್ ಟಾರ್ಗೆಟ್!

  ಇನ್ನೂ ಮಂಡ್ಯ ಪೊಲೀಸರು ತೀವ್ರ ತರವಾದ ವಿಚಾರಣೆ ಮಾಡಿದ ವೇಳೆ, ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್ ಹಾಗೂ ಅಫೀಮು‌ನ್ನು ಮಾರಾಟ ಮಾಡುತ್ತಿದ್ದೇವೆ ಎಂದು ಬಾಯಿ ಬಿಟ್ಟಿದ್ದಾರೆ. ಅಲ್ಲದೇ ಈ ಬಂಧಿತರಿಂದ 6 ಲಕ್ಷ ಮೌಲದ ಹೆರಾಯಿನ್, 75 ಸಾವಿರ ಮೌಲ್ಯದ ಅಫೀಮುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ 7 ಸಾವಿರ ನಗದು ಮತ್ತು ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಈ ಮಾದಕವಸ್ತುಗಳ ಮಾರಾಟಗಾರರು ಇನ್ನೂ ಇರಬಹುದಾ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ಅವರ ಸೆರೆಗೂ ಸಹ ಬಲೆ ಬೀಸಿದ್ದಾರೆ. ಅಲ್ಲದೆ ಬಂಧಿತರಿಂದ ಮತ್ತಷ್ಟು ವಿಚಾರ ಬಾಯಿ ಬಿಡಿಸುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದು, ಮೊಬೈಲ್ ಕರೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

  ವರದಿ - ಸನೀಲ್ ಗೌಡ, ಮಂಡ್ಯ
  Published by:HR Ramesh
  First published: