HOME » NEWS » District » MANJUNATH BADRASHETTY GETS GRAND WELCOME IN HUBLI PTH SNVS

ಆಂಧ್ರದ ಕಾಂಚನಪಲ್ಲಿಯಿಂದ ಮಹಾರಾಷ್ಟ್ರದ ಕಾಗಲ್​ವರೆಗೆ ಬದ್ರಶೆಟ್ಟಿ ಪಾದಯಾತ್ರೆ; ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ

ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನ ಮುಂದಿಟ್ಟು ಆಂಧ್ರದ ಕಾಂಚನಪಲ್ಲಿಯಿಂದ ಮಹಾರಾಷ್ಟ್ರದ ಕಾಗಲ್​ವರೆಗೆ ಪಾದಯಾತ್ರೆ ಮಾಡುತ್ತಿರುವ ಮಂಜುನಾಥ ಬದ್ರಶೆಟ್ಟಿ ಅವರಿಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.

news18-kannada
Updated:November 17, 2020, 7:50 AM IST
ಆಂಧ್ರದ ಕಾಂಚನಪಲ್ಲಿಯಿಂದ ಮಹಾರಾಷ್ಟ್ರದ ಕಾಗಲ್​ವರೆಗೆ ಬದ್ರಶೆಟ್ಟಿ ಪಾದಯಾತ್ರೆ; ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ
ಮಂಜುನಾಥ ಬದ್ರಶೆಟ್ಟಿ
  • Share this:
ಹುಬ್ಬಳ್ಳಿ: ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಜುನಾಥ ಬದ್ರಶೆಟ್ಟಿ ಎಂಬುವವರು ನಡೆಸುತ್ತಿರುವ ಪಾದಯಾತ್ರೆಗೆ ಹುಬ್ಬಳ್ಳಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ವಿವಿಧ ಸಂಘಟನೆಗಳ ಮುಖಂಡರು ಮಂಜುನಾಥ ಬದ್ರಶೆಟ್ಟಿಯವರಿಗೆ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಸನ್ಮಾನಿಸಿದ್ರು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದದವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಕರ್ನಾಟಕದಲ್ಲಿರುವ ಖಾಸಗಿ ಕಂಪನಿಗಳು ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಗಡಿ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸಬೇಕು ಮತ್ತು ಪ್ರತಿ ತಾಲ್ಲೂಕಿನಲ್ಲಿ ತಾಯಿ ಭುವನೇಶ್ವರಿ ಮಂದಿರವನ್ನು ನಿರ್ಮಾಣ ಮಾಡಬೇಕೆನ್ನುವ ಬೇಡಿಕೆ ಇಟ್ಟುಕೊಂಡು ಪಾದಯಾತ್ರೆ ನಡೆಯುತ್ತಿದೆ. ಆಂಧ್ರ ಪ್ರದೇಶದ ಕಾಂಚನಪಲ್ಲಿಯಿಂದ ಮಹಾರಾಷ್ಟ್ರದ ಕಾಗಲ್ ‌ವರೆಗೂ ಪಾದಯಾತ್ರೆ ನಡೆಯಲಿದೆ. ಶಿಗ್ಗಾಂವ ತಾಲ್ಲೂಕಿನ ಮುಗಳಿ ಗ್ರಾಮದ ಮಂಜುನಾಥ ಬದ್ರಶೆಟ್ಟಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಕನ್ನಡಿಗನ ಸ್ವಾಭಿಮಾನದ ಪಾದಯಾತ್ರೆಯನ್ನು ಹುಬ್ಬಳ್ಳಿಯ ಕನ್ನಡಪರ ಸಂಘಟನೆಗಳು ಪ್ರೀತಿಯಿಂದ ಸ್ವಾಗತಿಸಿದರು. ಯಶಸ್ಸು ಸಿಗಲಿ ಎಂದು ಶುಭಕೋರಿ ಬೀಳ್ಕೊಟ್ಟರು.

ಇದನ್ನೂ ಓದಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಓಪನ್; ಕೋವಿಡ್ ಮಾರ್ಗಸೂಚಿ ಪ್ರಕಾರ ತರಗತಿಗಳು ಹೇಗೆ ನಡೆಯಲಿವೆ ಗೊತ್ತಾ?

ಮಕ್ಕಳ ದಿನಾಚರಣೆ ಅಂಗವಾಗಿ 'ಕಾನೂನು ಅರಿವು - ನೆರವು' ಕಾರ್ಯಕ್ರಮ:
ಹುಬ್ಬಳ್ಳಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಬಾಲಕಿಯರ ಬಾಲ ಮಂದಿರ ಹಾಗೂ ವಾರ್ತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇಂದು ನೂತನ ನ್ಯಾಯಾಲಯದ ಸಭಾ ಭವನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆನ್​ಲೈನ್ ಮೂಲಕ “ಕಾನೂನು ಅರಿವು – ನೆರವು” ಕಾರ್ಯಕ್ರಮ ಆಯೋಜಿಸಲಾಗಿತ್ತು.ಪ್ರಧಾನ ಕಾರ್ಮಿಕ ನ್ಯಾಯಾಲಯದ ಅಧ್ಯಕ್ಷಾಧಿಕಾರಿ ಹಾಗೂ ಜಿಲ್ಲಾ ನ್ಯಾಯಾಧೀಶ ಹೆಚ್.ಸಿ. ಶಾಮ್‌ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಜೆ.ಎಂ.ಎಫ್.ಸಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ನಾಗರಾಜಪ್ಪ.ಎ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಾದೇಶ್.ವಿ ವಕೀಲರ ಸಂಘ ಅಧ್ಯಕ್ಷ ಅಶೋಕ ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಎಫ್ ಹಿರೇಮಠ, ಬಾಲ ಮಂದಿರ ಅಧೀಕ್ಷಕಿ ಆತಿಕಾ.ಎಮ್.ಸಿದ್ದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: DJ Halli Riot Case - ಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಕಾಲೇಜುಗಳ ಪ್ರಾರಂಭಕ್ಕೆ ಸಂಪೂರ್ಣ ಸಿದ್ಧತೆ:ನಾಳೆಯಿಂದ ಕಾಲೇಜುಗಳ ಪ್ರಾರಂಭಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿರುವುದಾಗಿ ಹುಬ್ಬಳ್ಳಿಯ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಿಂಗರಾಜ್ ಅಂಗಡಿ ತಿಳಿಸಿದ್ದಾರೆ. ಸರ್ಕಾರದ ನಿರ್ದೇಶನದಂತೆ ಪದವಿ ಅಂತಿಮ ವರ್ಷದ ತರಗತಿಗಳನ್ನು ಪ್ರಾರಂಭಿಸಲಾಗುವುದು. ಈಗಾಗಲೆ ಕಾಲೇಜನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಸಿಬ್ಬಂದಿಗಳ ಕೊವಿಡ್ ಟೆಸ್ಟ್ ಮಾಡಲಾಗಿದೆ. ಸಂಪೂರ್ಣ ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳು ನಡೆಯಲಿವೆ ಎಂದವರು ತಿಳಿಸಿದ್ದಾರೆ.

ವರದಿ: ಪರಶುರಾಮ ತಹಶೀಲ್ದಾರ
Published by: Vijayasarthy SN
First published: November 17, 2020, 7:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories