• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಹುಬ್ಬಳ್ಳಿಯ ಛಬ್ಬಿಯಲ್ಲಿ 2ನೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ಸಚಿವ ಆರ್.ಅಶೋಕ; ಸಿದ್ಧತೆಗೆ ಬಿಜಿಯಾದ ಜಿಲ್ಲಾಡಳಿತ

ಹುಬ್ಬಳ್ಳಿಯ ಛಬ್ಬಿಯಲ್ಲಿ 2ನೇ ಗ್ರಾಮ ವಾಸ್ತವ್ಯಕ್ಕೆ ಮುಂದಾದ ಸಚಿವ ಆರ್.ಅಶೋಕ; ಸಿದ್ಧತೆಗೆ ಬಿಜಿಯಾದ ಜಿಲ್ಲಾಡಳಿತ

ಸಚಿವ ಆರ್​.ಅಶೋಕ್

ಸಚಿವ ಆರ್​.ಅಶೋಕ್

ಗ್ರಾಮ ವಾಸ್ತವ್ಯ ಒಂದರಿಂದಲೇ ಎಲ್ಲ ಸಮಸ್ಯೆ ಬಗೆಹರಿಯಲ್ಲ. ನಾವೇ ಎಲ್ಲ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗೋದಿಲ್ಲ. ಒಂದು ವರ್ಷದೊಳಗೆ ಧಾರವಾಡ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ವಾಸ್ತವ್ಯ ಮಾಡುವ ಗುರಿ ಹೊಂದಿದ್ಧೇವೆ. ಗ್ರಾಮ ಲೆಕ್ಕಾಧಿಕಾರಿಗಳಿಗೂ ಗ್ರಾಮ ವಾಸ್ತವ್ಯ ಮಾಡಲು ಸೂಚಿಸಿದ್ದೇವೆ. ನಮ್ಮ ಗಮನಕ್ಕೆ ಬಂದ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಡಿಸಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

ಹುಬ್ಬಳ್ಳಿ : ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಕಳೆದ ತಿಂಗಳು ರಾಜ್ಯಾದ್ಯಂತ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್ ಅಶೋಕ್ ರ ಈ ಬಾರಿಯ ಗ್ರಾಮ ವಾಸ್ತವ್ಯ ಛಬ್ಬಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ ಬರೋ ಛಬ್ಬಿ ಗ್ರಾಮ, ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಗ್ರಾಮದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಕಂದಾಯ ಸಚಿವರ ಗ್ರಾಮ ವಾಸ್ತವ್ಯವನ್ನು ಛಬ್ಬಿಯಲ್ಲಿ ಹಮ್ಮಿಕೊಂಡಿರೋದಾಗಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಟೇಲ್ ಮಾಹಿತಿ ನೀಡಿದ್ದಾರೆ. 5 ಸಾವಿರ ಜನಸಂಖ್ಯೆ ಹೊಂದಿರೋ ಛಬ್ಬಿ ಗ್ರಾಮವನ್ನು ವಾಸ್ತವ್ಯಕ್ಕಾಗಿ ಕಂದಾಯ ಸಚಿವರೇ ಆಯ್ಕೆ ಮಾಡಿಕೊಂಡಿದ್ದಾರೆ. ಮಾರ್ಚ್ 20 ರಂದು ಶನಿವಾರ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.


ವಿಮಾನದ ಮೂಲಕ ಆಗಮಿಸಲಿರೋ ಸಚಿವರು ಮೊದಲು ಸಿದ್ಧಾರೂಢ ಮಠಕ್ಕೆ ಭೇಟಿ ಕೊಡಲಿದ್ದಾರೆ. ನಂತರ ದಲಿತರ ಕೇರಿಗೆ ಹೋಗಿ, ಅಲ್ಲಿನ ಸ್ಥಿತಿಗತಿ ಅರಿಯಲಿದ್ದಾರೆ. ನಂತರ ನಾಡ ಕಚೇರಿ ಉದ್ಘಾಟನೆ, ರಸ್ತೆ ನಿರ್ಮಾಣ ಕಾಮಗಾರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4 ರಿಂದ 5 ಗಂಟೆ ವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಂದಾಯ, ಆರೋಗ್ಯ, ಪಶು ಸಂಗೋಪನೆ, ಶಿಕ್ಷಣ, ಕೃಷಿ ಸೇರಿ ಎಲ್ಲ ಇಲಾಖೆಗಳ ಸರ್ಕಾರಿ ಸೌಲಭ್ಯಗಳ ವಿತರಣೆ ಮಾಡಲಿದ್ದಾರೆ. ಮಾರ್ಚ್ 01 ರಿಂದಲೇ ಜಿಲ್ಲಾಡಳಿತದಿಂದ ಅರ್ಜಿ ಸ್ವೀಕಾರ ನಡೆದಿದೆ. ಇದುವರೆಗೆ 266 ಅರ್ಜಿ ಬಂದಿದ್ದು, ಈ ಪೈಕಿ 119 ಅರ್ಜಿಗಳ ವಿಲೇವರಿ ಮಾಡಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.


ಗ್ರಾಮ ವಾಸ್ತವ್ಯ ಒಂದರಿಂದಲೇ ಎಲ್ಲ ಸಮಸ್ಯೆ ಬಗೆಹರಿಯಲ್ಲ. ನಾವೇ ಎಲ್ಲ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗೋದಿಲ್ಲ. ಒಂದು ವರ್ಷದೊಳಗೆ ಧಾರವಾಡ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ವಾಸ್ತವ್ಯ ಮಾಡುವ ಗುರಿ ಹೊಂದಿದ್ಧೇವೆ. ಗ್ರಾಮ ಲೆಕ್ಕಾಧಿಕಾರಿಗಳಿಗೂ ಗ್ರಾಮ ವಾಸ್ತವ್ಯ ಮಾಡಲು ಸೂಚಿಸಿದ್ದೇವೆ. ನಮ್ಮ ಗಮನಕ್ಕೆ ಬಂದ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಡಿಸಿ ನಿತೇಶ್ ಪಾಟೀಲ ತಿಳಿಸಿದ್ದಾರೆ.


ಇದನ್ನು ಓದಿ: Maski By Election | ಮಸ್ಕಿ ವಿಧಾನಸಭೆ ಉಪಚುನಾವಣೆ; ಅಭ್ಯರ್ಥಿಗಳಿಗೆ ಕಾಲುವೆ ಹೋರಾಟದ ಬಿಸಿ


ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ


ಕೋವಿಡ್ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರೋದಾಗಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಂದಂಕಿಯಲ್ಲಿದ್ದ ಸೋಂಕಿತರ ಸಂಖ್ಯೆ ಎರಡಂಕಿಗೆ ಏರಿದೆ. ಎರಡನೇ ಅಲೆ ವ್ಯಾಪಿಸುವ ಆತಂಕ ಎದುರಾಗಿದೆ. ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮಾಸ್ಕ್ ಹಾಕಿಕೊಳ್ಳದವರ ಮೇಲೆ 2 - 3 ಪಟ್ಟು ದಂಡ ವಸೂಲಿಗೆ ಸೂಚನೆ ನೀಡಲಾಗಿದೆ. ಎಲ್ಲರಿಗೂ ವ್ಯಾಕ್ಸಿನ್ ಹಾಕುವಂತಹ ಪ್ರಯತ್ನ ನಡೆದಿದೆ. ಈವರೆಗೆ ಜಿಲ್ಲೆಯಲ್ಲಿ 54,862 ಕೊರೋನಾ ವ್ಯಾಕ್ಸಿನ್ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ದಿನ ಹತ್ತು ಸಾವಿರಕ್ಕೂ ಹೆಚ್ಚು ಡೋಸ್ ಹಾಕೋ ಗುರಿ ಹೊಂದಲಾಗಿದೆ ಎಂದು ಡಿಸಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.


ರಸ್ತೆ ಅತಿಕ್ರಮಿಸಿದವರ ವಿರುದ್ಧ ಕ್ರಮ


ಪಾರ್ಕಿಂಗ್ ಜಾಗ ತೋರಿಸಿ ಅದನ್ನು ಬಾಡಿಗೆ ಕೊಟ್ಟವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳೋದಾಗಿ  ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಇಂಥವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಹುಬ್ಬಳ್ಳಿ ನಗರವೊಂದರಲ್ಲೇ ಈ ರೀತಿಯ 321 ಕಟ್ಟಡಗಳಿವೆ. ಪಾರ್ಕಿಂಗ್ ಗೆ ಎಂದು ಬಿಟ್ಟ ಸ್ಥಳವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಲಾಗುತ್ತಿದೆ. 15 ದಿನಗಳೊಳಗಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಪಾಲಿಕೆ ಆಸ್ತಿ ಎಲ್ಲೆಲ್ಲಿದೆ ಎನ್ನುವುದರ ಸರ್ವೆಯೂ ನಡೆದಿದೆ. ಲೀಜ್ ಅವಧಿ ಮುಗಿದವರೆಗೆ ಖಾಲಿ ಮಾಡುವಂತೆ ಈಗಾಗಲೇ ನೋಟಿಸ್ ನೀಡಲಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಡಿಸಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.


  • ವರದಿ - ಶಿವರಾಮ ಅಸುಂಡಿ 

First published: