HOME » NEWS » District » MEDICAL STAFF CALL TO MYSURU DC AND TELL YOU HAVE CORONA POSITIVE RH

ಹಲೋ ಸರ್ ನಿಮಗೆ ಪಾಸಿಟಿವ್ ಇದೆ ಎಲ್ಲಿದ್ದೀರಿ ? ಹೀಗಂತ ಡಿಸಿಗೆ ಫೋನ್ ಮಾಡಿದ ಸಿಬ್ಬಂದಿ; ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕಿತಾಪತಿ ಮಾಡಿದ ಸೋಂಕಿತ

ಮಾಹಿತಿ ಸಂಗ್ರಹಿಸುವ ವೇಳೆ ಆ ವ್ಯಕ್ತಿ ನನ್ನ ನಂಬರ್ ಕೊಟ್ಟಿರುವುದಾಗಿ ವೈದ್ಯಕೀಯ ಸಿಬ್ಬಂದಿ ತಿಳಿಸಿದರು. ಕ್ವಾರಂಟೈನ್​ಗೆ ಒಳಗಾಗುವುದು ಮತ್ತು ಆಸ್ಪತ್ರೆಗೆ ದಾಖಲಾಗುವುದರಿಂದ ತಪ್ಪಿಸಿಕೊಳ್ಳಲು ಕೆಲವರು ಏನೆಲ್ಲ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಅರಿತು ಒಂದು ಕ್ಷಣ ನನಗೆ ಅಚ್ಚರಿಯಾಯಿತು. ಜೊತೆಗೆ ನಗು ಬಂತುʼ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಹೇಳಿದ್ದಾರೆ.

news18-kannada
Updated:July 25, 2020, 5:46 PM IST
ಹಲೋ ಸರ್ ನಿಮಗೆ ಪಾಸಿಟಿವ್ ಇದೆ ಎಲ್ಲಿದ್ದೀರಿ ? ಹೀಗಂತ ಡಿಸಿಗೆ ಫೋನ್ ಮಾಡಿದ ಸಿಬ್ಬಂದಿ; ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕಿತಾಪತಿ ಮಾಡಿದ ಸೋಂಕಿತ
ಜಿಲ್ಲಾಧಿಕಾರಿ ಅಭಿರಾಮ್​​​ ಜಿ ಶಂಕರ್​​
  • Share this:
ಮೈಸೂರು; ಮೈಸೂರು ಜಿಲ್ಲಾಡಳಿತದ ಕಂಟ್ರೋಲ್ ರೂಂನಿಂದ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಬ್ಬಂದಿಗಳು, "ನಿಮಗೆ ಪಾಸಿಟಿವ್ ಬಂದಿದೆ, ಎಲ್ಲಿದ್ದೀರಾ? ಎಂದು ಕೇಳಿದ್ದಾರೆ. ಇದನ್ನು ಕೇಳಿ ಅಚ್ಚರಿಗೊಂಡ ಜಿಲ್ಲಾಧಿಕಾರಿ, "ನನಗೆ ಪಾಸಿಟಿವ್ ಇದ್ಯಾ? ನಾನೇ ರೀ ಜಿಲ್ಲಾಧಿಕಾರಿ ಮಾತಾಡ್ತಾ ಇದ್ದೀನಿ," ಎಂದಿದ್ದಾರೆ. ಡಿಸಿ ಅಭಿರಾಮ್ ಜಿ.ಶಂಕರ್ ಮಾತು ಕೇಳಿ ತಬ್ಬಿಬ್ಬಾದ ಕಂಟ್ರೋಲ್ ರೂಂ ಸಿಬ್ಬಂದಿಗಳು ಒಂದು ಕ್ಷಣ ಅವಾಕ್‌ ಆಗಿದ್ದಾರೆ.

ಹೌದು, ಕೋವಿಡ್ ಪರೀಕ್ಷೆ ವೇಳೆ ಮಾಹಿತಿಗಾಗಿ ತನ್ನ ಫೋನ್ ನಂಬರ್ ಬದಲು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೋವಿಡ್ ಸೋಂಕಿತನೊಬ್ಬ ಅಧಿಕಾರಿಗಳನ್ನು ಯಾಮಾರಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.  ಹೆಬ್ಬಾಳದ ನಿವಾಸಿಯೊಬ್ಬ ಮೂಗು ಮತ್ತು ಗಂಟಲು ದ್ರವ ಸಂಗ್ರಹ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ವ್ಯಕ್ತಿಯ ವಿಳಾಸ, ಮೊಬೈಲ್ ನಂಬರ್ ಇನ್ನಿತರೆ ಮಾಹಿತಿ ಕಲೆ ಹಾಕುವ ವೇಳೆ ತನ್ನ ನಂಬರ್ ಬದಲಿಗೆ ಜಿಲ್ಲಾಧಿಕಾರಿ ನಂಬರ್ ಕೊಟ್ಟಿದ್ದಾರೆ. ಈತನ ಪರೀಕ್ಷೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರಿಂದ ಆತ ಕೊಟ್ಟಿದ್ದ ನಂಬರ್​ಗೆ ಸಿಬ್ಬಂದಿ ಕರೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳು ಮಾತನಾಡಿದ ನಂತರವೇ ಅಧಿಕಾರಿಗಳಿಗೆ ನಿಜಾಂಶ ತಿಳಿದು ಅಚ್ಚರಿಗೆ ಒಳಗಾಗಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಪ್ರತಿಕ್ರಿಯಿಸಿ, "ಕಂಟ್ರೋಲ್ ರೂಂ ನಿಂದ ಕರೆ ಮಾಡಿ ʻಸರ್ ನಿಮಗೆ ಕೋವಿಡ್ ಪಾಸಿಟಿವ್ ಬಂದಿದೆ. ಕ್ವಾರಂಟೈನ್ಗೆ ಒಳಗಾಗಿʼ ಎಂದು ಹೇಳಿದ್ದನ್ನು ಕೇಳಿ ನನಗೆ ಆಶ್ಚರ್ಯ ಆಯಿತು. ನಾನು ಜಿಲ್ಲಾಧಿಕಾರಿ ಮಾತನಾಡುತ್ತಿರುವುದು ಎಂದು ತಿಳಿಸಿದೆ. ಮಾಹಿತಿ ಸಂಗ್ರಹಿಸುವ ವೇಳೆ ಆ ವ್ಯಕ್ತಿ ನನ್ನ ನಂಬರ್ ಕೊಟ್ಟಿರುವುದಾಗಿ ವೈದ್ಯಕೀಯ ಸಿಬ್ಬಂದಿ ತಿಳಿಸಿದರು. ಕ್ವಾರಂಟೈನ್​ಗೆ ಒಳಗಾಗುವುದು ಮತ್ತು ಆಸ್ಪತ್ರೆಗೆ ದಾಖಲಾಗುವುದರಿಂದ ತಪ್ಪಿಸಿಕೊಳ್ಳಲು ಕೆಲವರು ಏನೆಲ್ಲ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಅರಿತು ಒಂದು ಕ್ಷಣ ನನಗೆ ಅಚ್ಚರಿಯಾಯಿತು. ಜೊತೆಗೆ ನಗು ಬಂತು," ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಹೇಳಿದ್ದಾರೆ.

ಇದನ್ನು ಓದಿ: ಕೋವಿಡ್ ವಕ್ಕರಿಸಿದ ಆರಂಭದಲ್ಲಿ ಭಾರತ ಮಾಡಿದ ತಪ್ಪೇನು? ಜ್ವರಲಕ್ಷಣದ ಹಿಂದೆ ಬಿದ್ದದ್ದು ಯಡವಟ್ಟಾಯಿತಾ?

"ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಜನರು ಸಹಕರಿಸಬೇಕು, ಸೂಕ್ತ ಮಾಹಿತಿ ನೀಡಬೇಕು," ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. "ಒಂದು ವೇಳೆ ಸಂಪರ್ಕಿಸುವ ಮಾಹಿತಿ ತಪ್ಪಿದ್ದರೆ ಕೊರೋನಾ ಸೋಂಕಿತರು ಮತ್ತು ಅವರ ಪ್ರಾಥಮಿಕ, ಸೆಕೆಂಡರಿ ಸಂಪರ್ಕದಲ್ಲಿದ್ದವರನ್ನು ಗುರುತಿಸುವುದು ತುಂಬಾ ಕಷ್ಟ. ದಾರಿ ತಪ್ಪಿಸುವ ಕೆಲಸ ಬಿಟ್ಟು ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತಕ್ಕೆ ಜನತೆಯ ಸಹಕಾರ ಅಗತ್ಯ," ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.
Published by: HR Ramesh
First published: July 25, 2020, 5:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading