ಮೆಗಾ ಇ-ಲೋಕ ಅದಾಲತ್ ಮೂಲಕ ಪ್ರಕರಣಗಳ ಇತ್ಯರ್ಥದಲ್ಲಿ ದಾಖಲೆ: ರಾಜ್ಯದಲ್ಲಿಯೇ 3ನೇ ಸ್ಥಾನದಲ್ಲಿ ವಿಜಯಪುರ

ವಿಜಯಪುರ ಜಿಲ್ಲೆಯಲ್ಲಿ ಈ ಹಿಂದೆ ನಡೆದ ಬೃಹತ್ ಲೋಕ ಅದಾಲತ್‍ಗಿಂತ ಹೆಚ್ಚಿನ ಪ್ರಕರಣಗಳು ಈಗ ಇತ್ಯರ್ಥವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ. ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

news18-kannada
Updated:September 22, 2020, 10:49 PM IST
ಮೆಗಾ ಇ-ಲೋಕ ಅದಾಲತ್ ಮೂಲಕ ಪ್ರಕರಣಗಳ ಇತ್ಯರ್ಥದಲ್ಲಿ ದಾಖಲೆ: ರಾಜ್ಯದಲ್ಲಿಯೇ 3ನೇ ಸ್ಥಾನದಲ್ಲಿ ವಿಜಯಪುರ
ಮೆಗಾ ಇ- ಲೋಕ ಅದಾಲತ್ ನಡೆಸಿದ ನ್ಯಾಯಾಧೀಶರು
  • Share this:
ವಿಜಯಪುರ(ಸೆಪ್ಟೆಂಬರ್​. 22): ಲೋಕ ಅದಾಲತ್ ಇತಿಹಾಸದಲ್ಲೇ ಇ-ಲೋಕ ಅದಾಲತ್ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಸೆಪ್ಟೆಂಬರ್​ 19 ರಂದು ಇದೇ ಮೊದಲ ಬಾರಿಗೆ ಮೆಗಾ ಇ-ಅದಾಲತ್ ನಲ್ಲಿ ವಿಜಯಪುರ ಜಿಲ್ಲೆ ವಿನೂತನ ಸಾಧನೆ ಮಾಡಿದೆ. ಇ-ಲೋಕ್ ಅದಾಲತ್‍ಗಾಗಿ ಗುರುತಿಸಿದ್ದ ಒಟ್ಟು 10,395 ಪ್ರಕರಣಗಳ ಪೈಕಿ 8,921 ಪ್ರಕರಣಗಳನ್ನು ಇ-ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ವೆಂಕಣ್ಣ.ಬಿ. ಹೊಸಮನಿ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆದ 30 ಜಿಲ್ಲೆಗಳ ಇ-ಲೋಕ ಅದಾಲತ್ ಕಾರ್ಯಕ್ರಮಗಳನ್ನು ಅವಲೋಕಿಸಿದಾಗ ಈ ಅಂಶಗಳು ಬೆಳಕಿಗೆ ಬಂದಿವೆ. ವಿಜಯಪುರ ಜಿಲ್ಲೆ ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿದವರ ಪೈಕಿ ಮೊದಲ 3ನೇ ಸ್ಥಾನದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಇ-ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ

ಇ-ಲೋಕ ಅದಾಲತ್ ನಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರಾಜಿಗೆ ಒಳಪಡಿಸಬಹುದಾದ ಎಲ್ಲಾ ಅಪರಾಧ ಪ್ರಕರಣಗಳನ್ನು ವರ್ಗಾವಣೆಗಳ ಮೂಲಕ ಲಿಖಿತ ಕಾಯ್ದೆಯ ಪ್ರಕರಣಗಳು, ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ಕೋರಿರುವ ಪ್ರಕರಣಗಳು, ವಿಚ್ಛೇದನವನ್ನು ಹೊರತುಪಡಿಸಿ ಇರುವ ಕೌಟುಂಬಿಕ ವ್ಯಾಜ್ಯಗಳು ವಿಭಾಗ ಕೋರಿರುವ ದಾವೆಗಳು ಹಾಗೂ ಇತರೆ ಸಿವಿಲ್ ವ್ಯಾಜ್ಯಗಳನ್ನು ರಾಜ್ಯ ಉಚ್ಛ ನ್ಯಾಯಾಲಯ ಎಸ್ ಓ ಪಿ  ಪ್ರಕಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥಪಡಿಸಲಾಗಿದೆ.

ಇ-ಲೋಕ್ ಅದಾಲತ್ ಯಶಸ್ವಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಇ-ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಇ-ಲೋಕ್ ಅದಾಲತ್ ಯಶಸ್ಸಿಗೆ ಎಲ್ಲಾ ಕಕ್ಷಿದಾರರಿಗೂ, ನ್ಯಾಯವಾದಿಗಳಿಗೂ, ವಿಮಾ ಕಂಪನಿಯ ಅಧಿಕಾರಿಗಳಿಗೂ, ಕಾನೂನು ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರಣರಾಗಿದ್ದಾರೆ. ಅವರೆಲ್ಲರಿಗೂ ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಧನ್ಯವಾದಗಳನ್ನು ಅರ್ಪಿಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

ಇದನ್ನೂ ಓದಿ : ಮುಂದುವರೆದ ಅನ್ನದಾತರ ಆಕ್ರೋಶ; ರೈತರ ಹೋರಾಟಕ್ಕೆ ಪ್ರತಿಪಕ್ಷಗಳ ಬೆಂಬಲ, ಆಡಳಿತ ಪಕ್ಷ ಸುಸ್ತು

ಇ-ಲೋಕ ಅದಾಲತ್ ಬಗ್ಗೆ ಎಲ್ಲಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಶ್ರಮಿಸಿದ ವಿಜಯಪುರ ಜಿಲ್ಲೆಯ ಮಾಧ್ಯಮಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರಿಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸದಸ್ಯ ಕಾರ್ಯದರ್ಶಿಗಳಿಗೂ ಧನ್ಯವಾದ ತಿಳಿಸಿದ್ದಾರೆ.

ಗ್ರಾಮೀಣ ಮಟ್ಟದಲ್ಲಿಯೂ ಸಹ ಇ-ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ. ಇವರೆಲ್ಲರ ಸಹಕಾರದಿಂದ ವಿಜಯಪುರ ಜಿಲ್ಲೆಯಲ್ಲಿ ಈ ಹಿಂದೆ ನಡೆದ ಬೃಹತ್ ಲೋಕ ಅದಾಲತ್‍ ಗಿಂತ ಹೆಚ್ಚಿನ ಪ್ರಕರಣಗಳು ಈಗ ಇತ್ಯರ್ಥವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ. ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published by: G Hareeshkumar
First published: September 22, 2020, 10:39 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading