ಬೆಡ್ ಖಾಲಿ ಇದ್ದರೂ ಕೋವಿಡ್ ರೋಗಿಗಳನ್ನ ದಾಖಲಿಸಿಕೊಳ್ಳದಿದ್ದರೆ ಕಠಿಣ ಕ್ರಮ: ಹಾವೇರಿ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೆಡ್ ಖಾಲಿ ಇಲ್ಲವೆಂಬ ನೆಪಹೇಳಿ ಮನೆಗೆ ಕಳುಹಿಸುವ ಘಟನೆಗಳು ಹಾವೇರಿಯಲ್ಲಿ ಮರುಕಳುಹಿಸಬಾರದು. ಯಾವುದೇ ರೋಗಿಯೂ ಚಿಕಿತ್ಸೆ ಇಲ್ಲದೆ ಹಿಂತಿರುಗಬಾರದು. ಇದರಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನೀವೇ ಕಾರಣರಾಗುತ್ತಿರಿ ಎಂದು ಜಿಲ್ಲಾಡಳಿತಕ್ಕೆ ಗೃಹ ಸಚಿವ ಬೊಮ್ಮಾಯಿ ತಿಳಿಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

  • Share this:
ಹಾವೇರಿ(ಆ. 21): ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಪಾಸಿಟಿವ್ ವ್ಯಕ್ತಿಗಳ ದಾಖಲಾತಿ, ಚಿಕಿತ್ಸೆ, ವೈದ್ಯರ ಹಾಜರಾತಿ ಸೇರಿದಂತೆ ಸಮಗ್ರ ಕಾರ್ಯಚಟುವಟಿಕೆಗಳ ಮೇಲ್ವಿಚಾರಣೆಗೆ ಉಪವಿಭಾಗಾಧಿಕಾರಿಗಳನ್ನು ನೇಮಕಮಾಡಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು. ಕೋವಿಡ್ ನಿರ್ವಹಣೆ, ಮಳೆಹಾನಿ, ನೆರೆ ಪರಿಸ್ಥಿತಿ ಕುರಿತಂತೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯವೈಖರಿ ಹಾಗೂ ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆ ಸರ್ವೇ ಕುರಿತಂತೆ ಮಾಹಿತಿ ಪಡೆದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಜಿಲ್ಲಾ ಆಸ್ಪತ್ತೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಗೆ ಬೆಡ್ ಖಾಲಿ ಇದ್ದರೂ ಬೆಡ್‍ಗಳು ಇಲ್ಲ ಎಂದು ರೋಗಿಗಳನ್ನು ದಾಖಲುಮಾಡಿಕೊಳ್ಳದೆ ವಾಪಸ್ ಕಳುಹಿಸುತ್ತಿರುವ ದೂರುಗಳು ಬಂದಿವೆ. ಇಂತಹ ಘಟನೆಗಳು ಮರುಕಳಿಸಬಾರದು. ಜಿಲ್ಲೆಯಲ್ಲಿ ಯಾರೇ ಪಾಸಿಟಿವ್ ವ್ಯಕ್ತಿಗಳನ್ನು ಬೆಡ್‍ಗಳಿಲ್ಲ ಎಂದು ಚಿಕಿತ್ಸೆ ನಿರಾಕರಿಸಿ ವಾಪಸ್ ಕಳುಹಿಸಿದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: Ganesha Festival 2020 : ವಿಜಯಪುರದಲ್ಲಿ ಸದ್ದಿಲ್ಲದೆ ನಡೆದಿದೆ ಪರಿಸರಕ್ಕೆ ಪೂರಕವಾದ ಗಣೇಶೋತ್ಸವ ಆಚರಣೆ

ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಆಸಕ್ತಿ ತೋರುತ್ತಿಲ್ಲ. ಸರ್ಕಾರಿ ಸೇವೆಗಿಂತ ಖಾಸಗಿ ಸೇವೆಯಲ್ಲಿ ಹೆಚ್ಚು ಆಸಕ್ತಿ  ತೋರುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬರುವುದಿಲ್ಲ. ನರ್ಸ್‍ಗಳ ಮೇಲೆ ಚಿಕಿತ್ಸೆಯ ಹೊಣೆಗಾರಿಕೆ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಲ್ಲ ವೈದ್ಯಕೀಯ ಸೌಲಭ್ಯಗಳು ಇದ್ದಾಗ್ಯೂ ಇಂತಹ ದೂರುಗಳು ಬರುತ್ತಿರುವ ಕುರಿತಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಕೋವಿಡ್ ಚಿಕಿತ್ಸೆ ನಿರಾಕರಣೆ, ನಿರ್ಲಕ್ಷ್ಯತೆ, ಪ್ರವೇಶ ನೀಡದೇ ನೆಪಹೇಳಿ ಮನೆಗೆ ಕಳುಹಿಸುವ ಘಟನೆಗಳು ಜಿಲ್ಲೆಯಲ್ಲಿ ಮರುಕಳುಹಿಸಬಾರದು. ಯಾವುದೇ ರೋಗಿಯೂ ಚಿಕಿತ್ಸೆ ಇಲ್ಲದೆ ಹಿಂತಿರುಗಬಾರದು. ಇದರಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನೀವೇ ಕಾರಣರಾಗುತ್ತಿರಿ ಎಂದು ಜಿಲ್ಲಾಡಳಿತಕ್ಕೆ ಅವರು ತಿಳಿಹೇಳಿದರು.

ಇದನ್ನೂ ಓದಿ: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ; ಮೈಸೂರು ಸಿಇಓ ಅಮಾನತಿಗೆ ಆಗ್ರಹಿಸಿ ಕೊಡಗು ವೈದ್ಯರ ಪ್ರತಿಭಟನೆ 

ತತ್​ಕ್ಷಣವೇ ವ್ಯವಸ್ಥೆ ಸುಧಾರಿಸಬೇಕು ಎಂದ ಗೃಹ ಸಚಿವರು, ಜಿಲ್ಲಾ ಆಸ್ಪತ್ರೆಗೆ ಹಾವೇರಿ ಉಪವಿಭಾಗಾಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾ ಕೋವಿಡ್ ಆಸ್ಪತ್ರೆಯ ಎಲ್ಲ ಚಲನವಲನಗಳ ಬಗ್ಗೆ ನಿಗಾವಹಿಸಿ ಪ್ರತಿ ದಿನ ವರದಿ ಮಾಡುವಂತೆ ಸೂಚನೆಯನ್ನೂ ನೀಡಿದರು.

ಇದೇ ಮಾದರಿಯಲ್ಲಿ ತಾಲೂಕಾ ಕೋವಿಡ್ ಆಸ್ಪತ್ರೆಗಳ ಉಸ್ತುವಾರಿಗೆ ಸವಣೂರ ಹಾಗೂ ಹಾವೇರಿ ಉಪವಿಭಾಗಾಧಿಕಾರಿಗಳು ಆಯಾ ತಾಲೂಕಾ ವ್ಯಾಪ್ತಿಯ ಆಸ್ಪತ್ರೆಗಳ ಮೇಲೆ ನಿಗಾವಹಿಸುವಂತೆ ಬಸವರಾಜ ಬೊಮ್ಮಾಯಿ ಅಪ್ಪಣೆ ಮಾಡಿದರು.
Published by:Vijayasarthy SN
First published: