ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಗಣಿ ಸಚಿವ ಸಿಸಿ ಪಾಟೀಲ ಭೇಟಿ; ಶ್ರೀರಂಗಪಟ್ಟಣ, ಪಾಂಡವಪುರ ತಾಲೂಕಿನ ಗಣಿಗಾರಿಕೆ ಸ್ಥಳ ಪರಿಶೀಲನೆ

ಒಟ್ಟಾರೆ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇಂದು ಸಂಬಂಧಪಟ್ಟ ಇಲಾಖೆಯ ಸ ಚಿವರು ನೀಡುವ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರ ಮ ಕೈಗೊಳ್ಳುವ ಸಾಧ್ಯತೆ ಇದೆ.

ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಗಣಿ ಸಚಿವ ಸಿಸಿ ಪಾಟೀಲ.

ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಗಣಿ ಸಚಿವ ಸಿಸಿ ಪಾಟೀಲ.

  • Share this:
ಮಂಡ್ಯ: ಮಂಡ್ಯ ಜಿಲ್ಲೆಯ  ಜೀವನಾಡಿ ಕೆ.ಆರ್.ಎಸ್‌ ಜಲಾಶಯಕ್ಕೆ KRS ಸಮೀಪದಲ್ಲಿ  ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಅಪಾಯವಿದೆ. ಹೀಗಾಗಿ ಈ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಿಷೇಧ ಮಾಡಬೇಕೆಂಬ ಕೂಗು ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಅಲ್ಲದೇ ಈ ಸಂಬಂಧ ಬಿಎಸ್​ವೈ ಸರ್ಕಾರ ಬರುವ ಮುನ್ನಾ ಸ್ವತಃ ಬಿಎಸ್ವೈ ಕೂಡ ಇಲ್ಲಿನ ಅಕ್ರಮ ಗಣಿಗಾರಿಕೆ ನಿಷೇಧ ಮಾಡುವ ಭರವಸೆ ನೀಡಿದ್ದರು. ಅದರಂತೆ ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲು ಸಚಿವ ಸಂಪುಟದ ಗಣಿ ಸಚಿವರಿಂದ ವರದಿ ಕೇಳಿದ ಹಿನ್ನೆಲೆಯಲ್ಲಿ ಸ್ವತಃ ಗಣಿ ಸಚಿವ ಸಿ.ಸಿ ಪಾಟೀಲ್ ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೌದು! ಮಂಡ್ಯ ಜಿಲ್ಲೆಯ ಜೀವನಾಡಿ KRS ಡ್ಯಾಂ ಗೆ ಈ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಅಪಾಯವಿದೆ. ಹೀಗಾಗಿ ಈ  ಡ್ಯಾಂ 20 ಕಿ.ಮೀ. ವ್ಯಾಪ್ತಿಯಲ್ಲಿ  ಕಲ್ಲು ಗಣಿಗಾರಿಕೆ ನಿಷೇಧ ಮಾಡಬೇಕೆಂದು ಈ ಭಾಗದ ರೈತರು ಮತ್ತು ಹಲವು ಸಂಘಟನೆಗಳು ಒತ್ತಾಯ ಮಾಡಿ ಪ್ರತಿಭಟನೆ ನಡೆಸಿದ್ದವು. ಅಲ್ಲದೇ ಈ ಬಗ್ಗೆ ಬಿಎಸ್ವೈ ಕೂಡ ತಮ್ಮ ಸರ್ಕಾರ ಬರುವುದಕ್ಕೂ ಮುನ್ನಾ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದರು. ಅದ್ರಂತೆ ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿಸಿ ಪಾಟೀಲ್ ಜಿಲ್ಲೆಯ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನ  ಹಲವು ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಲೀಕರಿಗೆ ರಾಯಲ್ಟಿ ಕಟ್ಟಿ ಇಲ್ಲವೇ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಿದರು. ಅಲ್ಲದೇ ಅಧಿಕಾರಿಗಳಿಗೆ  ಈ ಸಂಬಂಧ ಸೂಚನೆ ನೀಡಿದರು.

ಇನ್ನು ಸ್ವತಃ ಗಣಿ ಸಚಿವರು ಜಿಲ್ಲೆಯ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲೆಯ ರೈತರ ಸೇರಿದಂತೆ ಹಲವು ಹೋರಾಟಗಾರರು ಸಚಿವರಿಗೆ ಮಾರ್ಗ ಮಧ್ಯೆ ಗಣಿ ಸಚಿವರಿಗೆ ಮನವಿ ಪತ್ರ ನೀಡಿ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ  ಮನವಿ ಸಲ್ಲಿಸಿದರು. ಇನ್ನು ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ, ಚೆನ್ನಕೆರೆ ಕಾಳೇನಹಳ್ಳಿ ಮುಂಡುಗದೊರೆ ಸೇರಿ ಪಾಂಡವಪುರ ತಾಲೂಕಿನ ಬೇಬಿಬೆಟ್ಟ ಸೇರಿ ಹಲವು ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ KRSನ ಬಳಿಕ ಗಣಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಇದನ್ನು ಓದಿ: ರಂಗಭೂಮಿಯ ವೃತ್ತಿಪರತೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಹೆಜ್ಜೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಈ ವೇಳೆ ಮಾತನಾಡಿದ ಗಣಿ ಸಚಿವರು ಕೆ.ಆರ್.ಎಸ್ ಡ್ಯಾಂ ರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯನ್ನು  ನಿಲ್ಲಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಕೈಕುಳಿ ಕಲ್ಲು ಕಾರ್ಮಿಕರಿಗೆ ಅವಕಾಶ ಕಲ್ಪಿಸಲಾಗುವುದು  ಎಂದು ತಿಳಿಸಿದರು. ಇನ್ನು  ಕಲ್ಲುಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡದೆ ಕೇವಲ ನಾಮಕಾವಸ್ಥೆ ಭೇಟಿ ನೀಡಿದ ಸಚಿವರ ಪ್ರವಾಸದ ವಿರುದ್ದ ಸ್ಥಳೀಯ ರೈತರು ಮತ್ತು  ಹೋರಾಟಗಾರರು ಅಸ ಮಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇಂದು ಸಂಬಂಧಪಟ್ಟ ಇಲಾಖೆಯ ಸ ಚಿವರು ನೀಡುವ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರ ಮ ಕೈಗೊಳ್ಳುವ ಸಾಧ್ಯತೆ ಇದೆ.
Published by:HR Ramesh
First published: