ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕನ್ನು ತಡೆಗಟ್ಟಲು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಹಾಗೂ ಕಾಳಜಿಯಿಂದ ಕಾರ್ಯನಿರ್ವಹಿಸುವಂತೆ ಸಚಿವ ಡಾ| ಸುಧಾಕರ್‌ ಹಾಸನದ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯ ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸುತ್ತಿರುವ ಸಚಿವ ಡಾ| ಸುಧಾಕರ್‌.

ಜಿಲ್ಲೆಯ ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸುತ್ತಿರುವ ಸಚಿವ ಡಾ| ಸುಧಾಕರ್‌.

  • Share this:
ಹಾಸನ; ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಎಲ್ಲಾ ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು, ಟಾಸ್ಕ್ ಫೋರ್ಸ್ ಸಮಿತಿ, ರಾಪಿಡ್ ರೆಸ್ಪಾನ್ಸ್ ಟೀಮ್ ಹಾಗೂ ಆಶಾ ಕಾರ್ಯಕರ್ತರು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನಗರದ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಕೋವಿಡ್-19ಗೆ ಸಂಬಂಧಿಸಿದಂತೆ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು, "ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹೊರ ಸಂಪನ್ಮೂಲ ವ್ಯಕ್ತಿಗಳು, ಡಿ ಗ್ರೂಪ್ ಸಿಬ್ಬಂದಿಗಳು, ಹೌಸ್ ಕೀಪಿಂಗ್ ಹಾಗೂ ಸೆಕ್ಯೂರಿಟಿ ಸಿಬ್ಬಂದಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಜಾರಿ ಮಾಡಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿ" ಎಂದು ಸೂಚಿಸಿದ್ದಾರೆ.

"ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕನ್ನು ತಡೆಗಟ್ಟಲು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಹಾಗೂ ಕಾಳಜಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ ಅವರು, ಸೇವಾ ಸಿಂಧು ಆಪ್ ಮೂಲಕ ಹೊರ ರಾಜ್ಯದಿಂದ ಬರುತ್ತಿರುವವರ ಬಗ್ಗೆ ಪೂರ್ಣ ಮಾಹಿತಿ ಪಡೆದು ಅವರನ್ನು ಪತ್ತೆ ಮಾಡಿ ಚಿಕಿತ್ಸೆಗೆ ಒಳಪಡಿಸಿ" ಎಂದು ಅಧಿಕಾರಿಗಳಿಗೆ ಆಜ್ಞೆ ಮಾಡಿದ್ದಾರೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಹಾಗೂ ವೈದ್ಯಕೀಯ ಕಾಲೇಜು ಯು.ಜಿ. ಹಾಗೂ ಪಿ.ಜಿ ವಿದ್ಯಾರ್ಥಿಗಳ ಹಾಸ್ಟೆಲ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಂಜಿನಿಯರ್‌ಗಳಿಗೆ ಸಭೆಯಲ್ಲಿ ಸಚಿವ ಡಾ| ಸುಧಾಕರ್‌ ಆದೇಶಿಸಿದ್ದಾರೆ.

ಇದನ್ನೂ ಓದಿ : ಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ! ಸಾಮಾಜಿಕ ಅಂತರ ಗಾಳಿಗೆ ತೂರಿದ ಶ್ರೀರಾಮುಲು


First published: