ಹಾಸನದ ಕ್ವಾರಂಟೈನ್ ಕೇಂದ್ರಕ್ಕೆ ಸಚಿವ ಗೋಪಾಲಯ್ಯ ಭೇಟಿ; ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳಿಗೆ ಸೂಚನೆ

ಮುಂದಿನ ಮೂರ್ನಾಲ್ಕು ದಿನಗಳ ನಂತರ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ, ಕೊರೋನಾ ಕುರಿತು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಈ ವೇಳೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವ ಸಚಿವ ಕೆ. ಗೋಪಾಲಯ್ಯ.

ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವ ಸಚಿವ ಕೆ. ಗೋಪಾಲಯ್ಯ.

  • Share this:
ಹಾಸನ (ಜೂನ್‌ 09); ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಎಲ್ಲರ ತಪಾಸಣೆ ನಡೆಸಿ ವರದಿ ಬಂದ‌ ನಂತರವೇ ಸೋಂಕು ಇಲ್ಲದವರನ್ನು ಮನೆಗಳಿಗೆ ಕಳಿಸಿ .ಕ್ವಾರಂಟೈನ್ ಕೇಂದ್ರದಲ್ಲಿ ಉತ್ತಮ ಮೂಲಭೂತ ಸೌಕರ್ಯ ಒದಗಿಸಿ. ತಾಲ್ಲೂಕು ಕೋವಿಡ್‌ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಗೆ ಎಲ್ಲಾ ರೀತಿಯ ಅಗತ್ಯ ಸುರಕ್ಷತಾ ಸಾಧನಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರೀಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಚನ್ನರಾಯಪಟ್ಟಣ ತಾಲ್ಲೂಕು ಕೋವಿಡ್ ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿರುವ ಸಚಿವ ಕೆ. ಗೋಪಾಲಯ್ಯ, "ಕೊರೋನಾ ರೋಗಿಗಳ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು.

ಇಂತಹ ರೋಗಿಗಳಿಗೆ ಚಿಕಿತ್ಸೆ ನೀಡುವ ಎಲ್ಲರಿಗೂ ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಅಲ್ಲದೆ, ಕೊರೋನಾ ಬಿಸಿಯಲ್ಲಿ ಇತರ ರೋಗಿಗಳಿಗೂ ಸಹ ಮೊದಲಿನಂತೆ ತಪಾಸಣೆ ಮತ್ತು ಚಿಕಿತ್ಸಾ ವ್ಯವಸ್ಥೆ ಮಂದುವರೆಸಿ ಎಂದು ಅವರು ಹೇಳಿದ್ದಾರೆ.

ಎಲ್ಲಾ ತಾಲೂಕುಗಳಿಗೆ ಭೇಟಿ;

ಮುಂದಿನ ಮೂರ್ನಾಲ್ಕು ದಿನಗಳ ನಂತರ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ, ಕೊರೋನಾ ಕುರಿತು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಈ ವೇಳೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿರುವ 73 ಮಂದಿ ಕೋವಿಡ್‌ ರೋಗಿಗಳಿಗೆ ಆಸ್ಪತ್ರೆ ಯಲ್ಲಿ ಉತ್ತಮ ಚಿಕಿತ್ಸೆ ಹಾಗೂ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು ಅವರಿಗೆ ಬೇಕಾದ ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹೆಚ್ ಡಿ ದೇವೇಗೌಡ
First published: