ಮಕ್ಕಳ ಮಧ್ಯಾಹ್ನ ಬಿಸಿಯೂಟಕ್ಕೆ ಕಳಪೆ ಬೇಳೆ ಸರಬರಾಜು ಮಾಡಿದರೆ ಕಠಿಣ ಕ್ರಮ: ಸಚಿವ ಕೆ. ಗೋಪಾಲಯ್ಯ

ಹಾಸನ ಜಿಲ್ಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಕ್ಕಳಿಗೆ ಕಳಪೆ ಗುಣಮಟ್ಟದ ಬೇಳೆ ಧಾನ್ಯಗಳನ್ನು ಪೂರೈಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ. ಗೋಪಾಲಯ್ಯ ಇಂದು ಚನ್ನರಾಯಪಟ್ಟಣ ಹಾಗೂ ಹಾಸನದಲ್ಲಿ ಆಹಾರ ನಿಗಮದ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವ ಕೆ. ಗೋಪಾಲಯ್ಯ.

ಸಚಿವ ಕೆ. ಗೋಪಾಲಯ್ಯ.

  • Share this:
ಹಾಸನ ; ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರ ಕಳಪೆ ಗುಣಮಟ್ಟದ್ದು ಎಂದು ತಿಳಿದುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಕೆ. ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ. 

ಹಾಸನ ಜಿಲ್ಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಕ್ಕಳಿಗೆ ಕಳಪೆ ಗುಣಮಟ್ಟದ ಬೇಳೆ ಧಾನ್ಯಗಳನ್ನು ಪೂರೈಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ. ಗೋಪಾಲಯ್ಯ ಇಂದು ಚನ್ನರಾಯಪಟ್ಟಣ ಹಾಗೂ ಹಾಸನದಲ್ಲಿ ಆಹಾರ ನಿಗಮದ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಹಾಗೂ ಆಹಾರ ಇಲಾಖೆ ಅಧಿಕಾರಿ ಸೇರಿದಂತೆ ಪ್ರಮುಖರ ಜೊತೆ ಗೋದಾಮುಗಳಿಗೆ ಭೇಟಿ ನೀಡಿದ ಸಚಿವರು, ದಾಸ್ತಾನು ಇದ್ದ ಬೇಳೆ ಕಾಳುಗಳನ್ನು ಸ್ಥಳದಲ್ಲೇ ಪರಿಶೀಲನೆ ನಡೆಸಿದರು.

ಎರಡು ಗೋದಾಮುಗಳಲ್ಲಿ ಲಭ್ಯವಿದ್ದ ಬೇಳೆಕಾಳು ಬಳಕೆಗೆ ಯೋಗ್ಯ ಎಂದು ಪರೀಕ್ಷೆ ವರದಿ ಬಂದ ಕಾರಣ "ಜಿಲ್ಲೆಯ ಎಲ್ಲಾ ತಾಲ್ಲೂಕು ಗೋದಾಮುಗಳಲ್ಲಿಯೂ ಇದೇ ರೀತಿ ತಪಾಸಣೆ ನಡೆಸಬೇಕು ಹಾಗೂ ಇತರೆ ಜಿಲ್ಲೆಗಳಲ್ಲಿನ ಬೇಳೆಕಾಳುಗಳ ಮಾದರಿ ತರಿಸಿ ತಪಾಸಣೆಗೆ ಒಳಪಡಿಸಿ ಗುಣಮಟ್ಟದಲ್ಲಿ ಕಳಪೆಯೆಂದು ಕಂಡು ಬಂದರೆ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಿ" ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಇದನ್ನೂ ಓದಿ : ನಾವು ಜನಪರ ಹೋರಾಟ ಮಾಡಿದ್ದೇವೆ, ಹೀಗಾಗಿ ಯಾವ ಕೇಸ್‌ಗೂ ಬಗ್ಗಲ್ಲ; ಡಿ.ಕೆ. ಶಿವಕುಮಾರ್ ಸವಾಲು

"ಮಕ್ಕಳಿಗೆ ನೀಡುವ ಬೇಳೆ ಕಳಪೆ ಗುಣಮಟ್ಟದ್ದಾಗಿದೆ ಎನ್ನುವ ಆರೋಪದ ಮೇಲೆ ಖುದ್ದಾಗಿ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಸರಬರಾಜಾಗಿರುವ ಬೇಳೆಯನ್ನು ಪರಿಶೀಲನೆಗೆ ಒಳಪಡಿಸುತ್ತಿದ್ದೇನೆ. ಬೇಳೆ ಕಳಪೆ ಗುಣಮಟ್ಟದ್ದಾಗಿವೆ ಎಂದು ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಎಲ್ಲಾ ಗುತ್ತಿಗೆದಾರರಿಗೂ ಸಚಿವ ಕೆ. ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.
First published: