ಕೋವಿಡ್ ಟೆಸ್ಟ್‌ಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಸಚಿವ ಸುಧಾಕರ್‌

ಕೊಪ್ಪಳ ಆಸ್ಪತ್ರೆಯಲ್ಲಿ ಕನಿಷ್ಠ ಸಿಬ್ಬಂದಿ ಇಟ್ಟುಕೊಂಡು ಒಂದು ಸಾವಿರದ ಇನ್ನೂರು ಟೆಸ್ಟ್ ಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ. ಉಳಿದ ಸಂಸ್ಥೆಗಳು ಈ ಗುರಿ ತಲುಪಬೇಕು. ಅದಕ್ಕಾಗಿ ಅಗತ್ಯ ಇರುವ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಬೇಕು ಎಂದು ಸಚಿವ ಕೆ. ಸುಧಾಕರ್‌ ತಿಳಿಸಿದ್ದಾರೆ.

news18-kannada
Updated:July 16, 2020, 8:57 AM IST
ಕೋವಿಡ್ ಟೆಸ್ಟ್‌ಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಸಚಿವ ಸುಧಾಕರ್‌
ಸಚಿವ ಡಾ.ಕೆ ಸುಧಾಕರ್​​
  • Share this:
ಬೆಂಗಳೂರು (ಜುಲೈ 16); ಮುಂದಿನ 10-15 ದಿನಗಳಲ್ಲಿ ಐದುನೂರರಿಂದ ಒಂದು ಸಾವಿರ ಟೆಸ್ಟ್ ಗಳವರೆಗೆ ಗುರಿ ತಲುಪಲೇಬೇಕು ಹೀಗಾಗಿ ಕೋವಿಡ್ ಟೆಸ್ಟ್‌ಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಂವಾದದಲ್ಲಿ ಈ ಕುರಿತು ಸ್ಪಷ್ಟನೆ ನೀಡಿರುವ ಅವರು, "ಈ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ಕಳೆದ ನಾಲ್ಕು ತಿಂಗಳಿಂದ ಅನೇಕ ಸೂಚನೆಗಳನ್ನು ನೀಡಿದೆ. ಲ್ಯಾಬ್ ಸ್ಥಾಪನೆಗೆ ಅಗತ್ಯ ವಿರುವ ನೆರವನ್ನು ಈಗಾಗಲೇ ನೀಡಲಾಗಿದೆ. ಸಿಬ್ಬಂದಿಗಳಿಗೆ ನಿಮ್ಹಾನ್ಸ್ ಮೂಲಕ ತರಬೇತಿ ನೀಡಲಾಗಿದೆ. ಇಷ್ಟರ ಮೇಲೂ ಸರ್ಕಾರದ ಜತೆ ಕೈಜೋಡಿಸದ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.

"ಮೆಡಿಕಲ್ ಕಾಲೇಜುಗಳಲ್ಲಿ ಪ್ರಯೋಗಾಲಯ ಸ್ಥಾಪನೆ ಮಾಡುವುದು ಕಡ್ಡಾಯ. ಎಂಸಿಐ ನಿಂದ ಸ್ಪಷ್ಟ ನಿದರ್ಶನಗಳಿವೆ. ಆದರೂ ಕೆಲವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇನ್ನೂ ಇಂತಹ ಮೀನಮೇಷ ವರ್ತನೆಯನ್ನು ಸಹಿಸುವುದಿಲ್ಲ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಟೆಸ್ಟ್ ಫಲಿತಾಂಶ ವಾರಗಳ ವರೆಗೆ ಬರುತ್ತಿಲ್ಲ ಎಂಬ ದೂರುಗಳಿವೆ. ಇನ್ನು ಮುಂದೆ 24 ರಿಂದ 30 ತಾಸಿನಲ್ಲಿ ವರದಿ ಕೈಸೇರಬೇಕು. ಆ ಉದ್ದೇಶದಿಂದ ಹಿರಿಯ ಅಧಿಕಾರಿ ಶಾಲೀನಿ ರಜನೀಶ್ ಅವರನ್ನು ಇದರ ಉಸ್ತುವಾರಿಗೆ ನಿಯೋಜಿಸಲಾಗಿದೆ.

ಕೊಪ್ಪಳ ಆಸ್ಪತ್ರೆಯಲ್ಲಿ ಕನಿಷ್ಠ ಸಿಬ್ಬಂದಿ ಇಟ್ಟುಕೊಂಡು ಒಂದು ಸಾವಿರದ ಇನ್ನೂರು ಟೆಸ್ಟ್ ಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ. ಉಳಿದ ಸಂಸ್ಥೆಗಳು ಈ ಗುರಿ ತಲುಪಬೇಕು. ಅದಕ್ಕಾಗಿ ಅಗತ್ಯ ಇರುವ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಬೇಕು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರತಿದಿನ ಮಾಡುವ ಟೆಸ್ಟ್ ಮತ್ತು ಬಾಕಿ ಉಳಿದ ಸ್ಯಾಂಪಲ್ ವಿವರಗಳನ್ನು ರಾಜ್ಯದ ಡ್ಯಾಷ್ ಬೋಡ್೯ನಲ್ಲಿ ಸಿಗುವಂತೆ ಎಲ್ಲರೂ ಮಾಹಿತಿ ಒದಗಿಸಬೇಕು.

ಇದನ್ನೂ ಓದಿ : CoronaVirus: ದೆಹಲಿಯಲ್ಲಿ ನಿಯಂತ್ರಣಕ್ಕೆ ಸಿಗದ ಕೊರೋನಾ ಸೋಂಕು; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆಇದಕ್ಕಾಗಿಯೇ ಡಾಟಾ ಆಪರೇಟರ್ ಗಳನ್ನು ನೇಮಕ ಮಾಡಬೇಕು. ಇನ್ನು ಮುಂದೆ ನೆಪಗಳನ್ನು ಹೇಳುವಂತಿಲ್ಲ. ರೋಗ ಲಕ್ಷಣ ಇದ್ದವರು ಮತ್ತು ಇಲ್ಲದವರ ಸ್ಯಾಂಪಲ್ ಗಳನ್ನು ಸರ್ಕಾರ ನೀಡಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಟೆಸ್ಟ್ ಮಾಡಬೇಕು. ಚೌಕಾಸಿ ಪ್ರಶ್ನೆಯಿಲ್ಲ. ಮೆಡಿಕಲ್ ಕಾಲೇಜು ಹೊರತು ಪಡಿಸಿ ಇರುವ ಖಾಸಗಿ ಪ್ರಯೋಗಾಲಯಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಾಮರ್ಶೆ ಮಾಡಲಾಗುತ್ತದೆ" ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.
Published by: MAshok Kumar
First published: July 16, 2020, 8:57 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading