ಬೆಳಗಾವಿ(ಜುಲೈ.08): ಇಡೀ ದೇಶದಲ್ಲಿ ಕೊರೋನಾ ವೈರಸ್ ಹಾವಳಿ ತಡೆಗಟ್ಟುವ ಬಗ್ಗೆ ಚರ್ಚೆ ನಡೆಯುತಿದೆ. ಆದರೇ ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ಕುಕ್ಕರ್ ವಿಚಾರದಲ್ಲಿ ಸಚಿವರು ಹಾಗೂ ಶಾಸಕರ ನಡುವೆ ನಿರಂತರ ಮಾತಿನ ಯುದ್ಧ ನಡೆಯುತ್ತಿದೆ. ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ವೈಮಸ್ಸು ಇರುವುದು ಎಲ್ಲರಿಗೂ ಗೊತ್ತು. ಸದ್ಯ ಇಬ್ಬರು ಒಬ್ಬರ ಮೇಲೆ ಒಬ್ಬರು ಆರೋಪ, ಪ್ರತ್ಯಾರೋಪ ಮಾಡತ್ತಿದ್ದಾರೆ. ಕಳೆದ ಅನೇಕ ದಿನಗಳಿಂದ ನಡೆಯುತ್ತಿದ್ದು, ಸದ್ಯ ಆಣೆ ಪ್ರಮಾಣ ಹಂತಕ್ಕೆ ಬಂದು ನಿಂತಿದೆ.
ಬೆಳಗಾವಿ ಗ್ರಾಮೀಣ ಬಿಜೆಪಿ ಘಟಕ ಕಚೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹೇಳಿಕೆ ನೀಡಿದ್ದರು. ಕಳೆದ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಹಂಚಿದ್ದ ಕುಕ್ಕರ್ ನನ್ನ ದುಡ್ಡಿನಿಂದ. 2023ರ ಚುನಾವಣೆಯಲ್ಲಿ ಸ್ಥಳೀಯ ಶಾಸಕರಿಗೆ ಪಾಠ ಕಲಿಸಿ ಇತಿಹಾಸ ಸೃಷ್ಟಿ ಮಾಡಬೇಕು. ಕ್ಷೇತ್ರದಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಆಗಿದ್ದೆ. ಮುಂದಿನ ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೆ ಒಳಗಾಗಬೇಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಸಂಬಂಧ ನಿನ್ನೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಬಿಡುಗಡೆ ಮಾಡಿದ್ದರು. ಸಚಿವರ ಹೇಳಿಕೆ ಬಾಲಿಶ್, ಜಾರಕಿಹೊಳಿ ವಿರುದ್ಧ ಕಾನೂನು ಹೋರಾಟ ನಡೆಸುವ ಚಿಂತನೆ ಇದೆ. ಈ ಬಗ್ಗೆ ವಕೀಲರ ಜತೆಗೆ ಚರ್ಚೆ ನಡೆಸಿದ್ದೇನೆ. ಸಚಿವರು ಸಾಲ ಮಾಡಿ ನನ್ನ ಕ್ಷೇತ್ರದಲ್ಲಿ ಹಣ ಖರ್ಚು ಮಾಡುವ ಮೊದಲು ರೈತರ ಕಬ್ಬಿನ ಬಾಕಿ ಕೊಡಲಿ ಎಂದು ತಿರುಗೇಟು ಕೊಟ್ಟಿದ್ದರು.
ಇದನ್ನೂ ಓದಿ : ಸೋಂಕಿತ ವೃದ್ಧೆ ಮನೆಯಿಂದ ನಾಪತ್ತೆ : ಆಕೆಯನ್ನು ಹುಡುಕುವ ಗೋಜಿಗೂ ಹೋಗದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ
ಈ ಬಗ್ಗೆ ಇಂದು ಬೆಳಗಾವಿ ಮತ್ತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಹೆಬ್ಬಾಳ್ಕರ್ ವ್ಯಕ್ತಿತ್ವ ಇಡೀ ಜಿಲ್ಲೆಗೆ ಗೊತ್ತಿದೆ. ನಿನ್ನೆ ಬಿಜೆಪಿ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಲು ಸಭೆಯಲ್ಲಿ ಮಾತನಾಡಿದ್ದೇನೆ. ಯಾರನ್ನು ನಿಂದಿಸುವ ಉದ್ದೇಶ ಇರಲಿಲ್ಲ. ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲು ನಾನು ಸಿದ್ಧ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ