ಕೊರೋನಾ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲು ಡಿಸಿಎಂ ಸವದಿ ದೆಹಲಿಗೆ ತೆರಳಿದ್ದಾರೆ : ಸಚಿವೆ ಶಶಿಕಲಾ ಜೊಲ್ಲೆ

ಸಚಿವ ಸಂಪುಟದಿಂದ ಯಾರನ್ನೂ ಕೈ ಬಿಡುವುದಿಲ್ಲ. ಹೊಸದಾಗಿ ಎಂಎಲ್‌ಸಿ ಆದವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಲು ಸಿಎಂ ಮತ್ತು ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ

ಸಚಿವೆ ಶಶಿಕಲಾ ಜೊಲ್ಲೆ

ಸಚಿವೆ ಶಶಿಕಲಾ ಜೊಲ್ಲೆ

  • Share this:
ವಿಜಯಪುರ(ಜುಲೈ. 27): ಕೊವಿಡ್ ವಿಚಾರವನ್ನು ಹೈಕಮಾಂಡ್ ಜೊತೆ ಚರ್ಚಿಸಲು ಮುಖ್ಯಮಂತ್ರಿ ಸೇರಿದಂತೆ ಎಲ್ಲರಿಗೂ ಈ ಕುರಿತು ಮಾಹಿತಿ ನೀಡಿಯೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿಗೆ ಹೋಗಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹಿರಿಯ ಸಚಿವರನ್ನು ಕೈಬಿಡಲಾಗುತ್ತದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೂ ಕೂಡ ಸಚಿವ ಸಂಪುಟದಿಂದ ಕೈಬಿಡುವ ವಿಚಾರ ನಡೆದಿಲ್ಲ. ಇದೆಲ್ಲ ಊಹಾಪೋಹ ಅಷ್ಟೇ.  ಸಚಿವ ಸಂಪುಟದಿಂದ ಯಾರನ್ನೂ ಕೈ ಬಿಡುವುದಿಲ್ಲ. ಹೊಸದಾಗಿ ಎಂಎಲ್‌ಸಿ ಆದವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಲು ಸಿಎಂ ಮತ್ತು ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಈಗ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕಳೆದ ಒಂದು ವರ್ಷದ ಸಾಧನೆಗಳನ್ನು ಬಿಂಬಿಸಲು ಸರಕಾರ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದ ವರ್ಚ್ಯೂವಲ್ ಕಾರ್ಯಕ್ರಮಗಳನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಗೈರು ಹಾಜರಾಗಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ವದಂತಿಗಳೂ ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿಯೇ ಡಿಸಿಎಂ ಲಕ್ಷ್ಮಣ ಸವದಿ ಸರಕಾರದ ಕಾರ್ಯಕ್ರಮಕ್ಕೆ ಗೈರು ಹಾಜರಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮ ಸಚಿವ ಸ್ಥಾನ ಉಳಿಸಿಕೊಳ್ಳು ಹೈಕಮಾಂಡ ಭೇಟಿಗೆ ಹೋಗಿದ್ದಾರೆ ಎಂಬ ವದಂತಿಗಳೂ ಹರಡಿವೆ.  ಈ ಹಿನ್ನೆಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ನೀಡಿರುವ ಪ್ರತಿಕ್ರಿಯೆ ಈಗ ಚರ್ಚೆಗೆ ಗ್ರಾಸವಾಗಿದೆ.

ಇದೇ ವೇಳೆ, ವಿಜಯಪುರದಲ್ಲಿ ನಡೆದ ವರ್ಚ್ಯೂವಲ್ ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ಮತ್ತು ಇಬ್ಬರು ಶಾಸಕರು ಗೈರು ಹಾಜರಾಗಿದ್ದರು. ಆದರೆ, ಜೆಡಿಎಸ್ ಶಾಸಕ ಡಾ. ದೇವಾನಂದ ಎಫ್. ಚವ್ಹಾಣ ಪಾಲ್ಗೋಂಡಿದ್ದರು. ಈ ವಿಷಯ ಪ್ರತಿಕ್ರಿಯೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಬಂದಿಲ್ಲ. ಈ ಕುರಿತು ಅವರು ಮೊದಲೇ ಮಾಹಿತಿ ನೀಡಿದ್ದಾರೆ.  ಅಲ್ಲದೇ, ಶಾಸಕರು ಬೇರೆ ಕಡೆ ಇರುವುದರಿಂದ ಬಂದಿಲ್ಲ.  ಅವರೂ ಕೂಡ ಈ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ : ಸರ್ಕಾರಕ್ಕೆ ಕಪ್ಪು ಚುಕ್ಕೆ ಇಡಲು ಕಾಂಗ್ರೆಸ್ ಮುಂದಾಗಿದೆ ; ಸಚಿವ ಬಿ ಸಿ ಪಾಟೀಲ್

ಇದೇ ವೇಳೆ ಸರಕಾರದ ಒಂದು ವರ್ಷದ ಸಾಧನೆ ತೃಪ್ತಿ ತಂದಿದೆ ಎಂದು ಹೇಳಿದ ಅವರು, ಕಳೆದ ವರ್ಷ ಅಧಿಕಾರಕ್ಕೆ ಬಂದ ತಕ್ಷಣ ಬರಗಾಲ ಮತ್ತು ಮಹಾಪುರ ಪರಿಸ್ಥಿತಿಗಳನ್ನು ಸಮರ್ಪಕವಾಗಿ ಸರಕಾರ ಎದುರಿಸಿದೆ. ಈಗ ಕೊರೋನಾ ಪರಿಸ್ಥಿತಿಯನ್ನೂ ಸರಕಾರ ಸಮರ್ಥವಾಗಿ ಎದುರಿಸುತ್ತಿದೆ. ಆರ್ಥಿಕ ಮುಗ್ಗಟ್ಟಿನ ಸಂದರ್ಭದಲ್ಲಿಯೂ ಬಡ, ಕೂಲಿ ಕಾರ್ಮಿಕರ ನೆರವಿಗೆ ಸರಕಾರ ನಿಂತಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆ ಕಾರ್ಯಕರ್ತರು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲರೂ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದಾರೆ. ಕೊವಿಡ್ ಸಂಕಷ್ಟದಲ್ಲಿ ಸರಕಾರ ಸ್ಪಂದಿಸಿದ ಬಗ್ಗೆ ಫಲಾನುಭವಿಗಳು ವರ್ಚ್ಯೂವಲ್ ಕಾರ್ಯಕ್ರಮದಲ್ಲಿ ಶ್ಲಾಘಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದರು.
Published by:G Hareeshkumar
First published: