HOME » NEWS » District » MLA APPACHU RANJAN TALK ABOUT BANGLORE DRUGS MAFIA MAK

ಡ್ರಗ್ಸ್ ದಂಧೆಯಲ್ಲಿ ಮಂತ್ರಿಗಳಿದ್ದರೂ ಬಿಡದೆ ಒದ್ದು ಒಳಗಾಕಬೇಕು; ಅಪ್ಪಚ್ಚು ರಂಜನ್‌

ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ. ಕೆ ಆರ್ ಪೇಟೆಯಲ್ಲಿ ಚುನಾವಣೆ ಸಂಧರ್ಭ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೂ ಹಿಂದೆ ರಾಗಿಣಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

news18-kannada
Updated:September 10, 2020, 6:54 AM IST
ಡ್ರಗ್ಸ್ ದಂಧೆಯಲ್ಲಿ ಮಂತ್ರಿಗಳಿದ್ದರೂ ಬಿಡದೆ ಒದ್ದು ಒಳಗಾಕಬೇಕು; ಅಪ್ಪಚ್ಚು ರಂಜನ್‌
ಅಪ್ಪಚ್ಚು ರಂಜನ್.
  • Share this:
ಕೊಡಗು: ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಯಲ್ಲಿ ಮಂತ್ರಿಗಳಿದ್ದರೂ ಬಿಡದೆ ಒದ್ದು ಒಳಗಾಕಬೇಕು ಎಂದು ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದರು. ಮಡಿಕೇರಿ ತಾಲ್ಲೂಕಿನ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ ಸಂದರ್ಭ ಅವರು ಆಗ್ರಹಿಸಿದರು. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರು ಕಾಂಗ್ರೆಸ್ ಶಾಸಕರಿರಲಿ ಅಥವಾ ಬಿಜೆಪಿ ಶಾಸಕರಿರಲಿ ಅವರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಸಿನಿಮಾ ನಟಿಯರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವುಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅಪ್ಪಚ್ಚು ರಂಜನ್ ನಾಲ್ಕು ಸಿನಿಮಾ ಮಾಡಿದ ಕೂಡಲೇ ಕೋಟಿ ಕೋಟಿ ಆಸ್ತಿ ಹೇಗೆ ಬರುತ್ತದೆ. ಡ್ರಗ್ಸ್ ದಂಧೆಯಿಂದ ಅಕ್ರಮವಾಗಿ ಸಂಪಾದಿಸಿರುವ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಗೃಹ ಸಚಿವರು ಮತ್ತು ಸಿಎಂ ಯಡಿಯೂರಪ್ಪ ಅವರನ್ನು ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. 

ಇನ್ನು ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, "ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ. ಕೆ ಆರ್ ಪೇಟೆಯಲ್ಲಿ ಚುನಾವಣೆ ಸಂಧರ್ಭ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೂ ಹಿಂದೆ ರಾಗಿಣಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ.

ಇದನ್ನೂ ಓದಿ : ಪ್ರತಿಷ್ಠಿತ 2020 ನೋಬೆಲ್‌ ಶಾಂತಿ ಪ್ರಶಸ್ತಿಗೆ ನಾಮ ನಿರ್ದೆಶನಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್

ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರ ಜೊತೆ ರಾಗಿಣಿ ಇರುವ ಫೋಟೊಗಳು ಇವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ. ಡ್ರಗ್ಸ್ ಎನ್ನೋದು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಈಗ ನಾವೆಲ್ಲರೂ ಪಕ್ಷ ಭೇದ ಮರೆತು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಬೇಕಾಗಿದೆ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಿ, ಜನರನ್ನು ಎಚ್ಚರಗೊಳಿಸಲು ಟ್ವಿಟರ್ ನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಪಕ್ಷ ಅದಕ್ಕಾಗಿ ಕೆಲಸ ಮಾಡಲಿದೆ ಎಂದರು. ಇನ್ನೂ ಯಾವ ಪಕ್ಷ ಅಥವಾ ಯಾರೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು ನಿರ್ದಾಕ್ಷಿಣ್ಯ ಕ್ರಮ ಆಗಲಿದೆ" ಎಂದು ತಿಳಿಸಿದ್ದಾರೆ.
Published by: MAshok Kumar
First published: September 10, 2020, 6:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories