ಹಾಸನ ; 4 ದಿನದಿಂದ ಕೆಮ್ಮಿನಿಂದ ಬಳಲುತ್ತಿದ್ದ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಮ್ಮು ಇದ್ದ ಕಾರಣ ಶಾಸಕ ಬಾಲಕೃಷ್ಣ ಕೊರೋನಾ ಪರೀಕ್ಷೆ ಮಾಡಿಸಿದ್ದರು. ಆದರೆ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮತ್ತೆ CT ಸ್ಕ್ಯಾನಿಂಗ್ ಮಾಡಿಸಿದ್ದಾರೆ.
ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಬೇಕಾಗಿದೆ ಎಂದು ಸಲಹೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಬಾಲಕೃಷ್ಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಓದಿ: ಆರ್ಆರ್ ನಗರದಲ್ಲಿ ನಿಮ್ಮ ಪಕ್ಷವೇ ಇಲ್ಲವಲ್ಲ; ಭರ್ಜರಿ ಗೆಲುವಿನ ಬಳಿಕ ಸಿದ್ದರಾಮಯ್ಯ ಗೇಲಿ ಮಾಡಿದ ಬಿಜೆಪಿ
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕ್ಷೇತ್ರದ ಜನರಿಗೆ ತೊಂದರೆಯಾಗಬಾರದೆಂದು ಬೆಂಗಳೂರಿಗೆ ಬಂದಿದ್ದೇನೆ. ಆದಷ್ಟು ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಕಷ್ಟ ಸುಖಕ್ಕೆ ಭಾಗಿಯಾಗುತ್ತೇನೆ. ನನ್ನ ಆಪ್ತ ಸಹಾಯಕರ ದೂರವಾಣಿಗೆ ಕರೆಮಾಡಿ ನಿಮ್ಮ ಸಮಸ್ಯೆ ಇದ್ದರೆ ತಿಳಿಸಿ ಪರಿಹರಿಸಲು ನಿರ್ದೇಶನ ನೀಡಿರುತ್ತೇನೆ ಎಂದಿದ್ದಾರೆ.
ಚನ್ನರಾಯಪಟ್ಟಣ ಕ್ಷೇತ್ರದಿಂದ ಸತತ ಮೂರು ಬಾರಿ ಜೆಡಿಎಸ್ನಿಂದ ಬಾಲಕೃಷ್ಣ ಅವರ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸಹೋದರರಾಗಿರುವ ಬಾಲಕೃಷ್ಣ ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಕ್ಷೇತ್ರದ ಜನತೆ ಆರೈಸಿದ್ದಾರೆ.
ವರದಿ; ಡಿಎಂಜಿ ಹಳ್ಳಿ ಅಶೋಕ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ