ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿಷ್ಟಾಚಾರ ಉಲ್ಲಂಘನೆ ; ಶಾಸಕಿಯ ಸಹೋದರನಿಂದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ.!

ಸಹೋದರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರನ್ನಾಗಿ ಮಾಡಲು ಹೆಬ್ಬಾಳ್ಕರ್ ಸಹ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಿಕೆಯಾಗಿದ್ದು, ಮತ್ತೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಚುನಾವಣೆ ಕಣ ರಂಗೇರಲಿದೆ

ಶಂಕುಸ್ಥಾನಪನೆ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್​ ಸಹೋದರ ಚನ್ನರಾಜ್ ಹಟ್ಟಿಹೊಳಿ

ಶಂಕುಸ್ಥಾನಪನೆ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್​ ಸಹೋದರ ಚನ್ನರಾಜ್ ಹಟ್ಟಿಹೊಳಿ

  • Share this:
ಬೆಳಗಾವಿ(ಆಗಸ್ಟ್.10): ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಂದಿಲ್ಲ ಒಂದು ಕಾರಣದಿಂದ ಸದಾ ಸುದ್ದಿಯಲ್ಲಿ ಇರುವ ಕಾಂಗ್ರೆಸ್ ನಾಯಕಿ. ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿತ್ಯ ಭೂಮಿ ಪೂಜೆ, ಶಂಕುಸ್ಥಾಪನೆ ನಡೆಯುವುದು ಸಹಜ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಬದಲಾಗಿ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ, ಮಗ ಮೃನಾಲ್ ಹೆಬ್ಬಾಳ್ಕರ್ ಈ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಇದು ಸ್ಪಷ್ಟವಾಗಿ ಶಿಷ್ಟಾಚಾರ ಉಲ್ಲಂಘನೆಗೆ ಸಾಕ್ಷಿಯಾಗಿದೆ. ಇಷ್ಟೇಲ್ಲಾ ನಡೆದರು ಯಾರೊಬ್ಬರು ಈ ಬಗ್ಗೆ ಪ್ರಶ್ನೆ ಮಾಡದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ಇಂತಹ ಸಾಕಷ್ಟು ಪ್ರಕರಣಗಳು ನಡದಿವೆ. ಶಾಸಕರು ಕ್ಷೇತ್ರ ಅಭಿವೃದ್ಧಿ ಕಾರ್ಯಗಳಿಗೆ ತಾವೇ ಭಾಗವಹಿಸಬೇಕು. ಈ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಬೇಕು ಎನ್ನುವುದು ನಿಮಯ ಆದರೆ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇದು ಪಾಲನೆ ಆಗುತ್ತಿಲ್ಲ. ಶಾಸಕರ ಬದಲಾಗಿ ಪುತ್ರ, ಸಹೋದರ ಅನೇಕ ಸಂದರ್ಭದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೆಲಸ ಒತ್ತಡ ಹಿನ್ನೆಲೆಯಲ್ಲಿ ಮಗ, ಸಹೋದರನಿಗೆ ಜವಾಬ್ದಾರಿ ನೀಡಲಾಗಿದೆಯೆ ಅಥವಾ ಅವರನ್ನು ರಾಜಕೀಯವಾಗಿ ಮುಂಚೂಣಿಗೆ ತರುವ ಪ್ರಯತ್ನವೇ ಎಂಬುದು ಗೊಂದಲವಾಗಿದೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ ಮೃನಾಲ್ ಹೆಬ್ಬಾಳ್ಕರ್


ಶಾಸಕಿಯ ಸಹೋದರ ಚನ್ನರಾಜ್ ಹಟ್ಟಿಹೊಳಿ ಸಾಂಬ್ರಾ ಸರ್ಕಾರಿ ಶಾಲೆಯ ಕಟ್ಟಡ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ್ದಾರೆ. 2004ರಿಂದ ಈ ಗ್ರಾಮದಲ್ಲಿ ಶಾಲೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. ಇದೀಗ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 45 ಲಕ್ಷ ರೂಪಾಯಿ ಮಂಜೂರು ಮಾಡಿಸಿದ್ದು, 4 ಕೊಠಡಿಗಳ ಕಾಮಗಾರಿ ಆರಂಭವಾಗಬೇಕಿದೆ. ಕೊಠಡಿ ನಿರ್ಮಾಣ ಕಾರ್ಯದ ಭೂಮಿ ಪೂಜೆಯನ್ನು ಚನ್ನರಾಜ್ ಹಟ್ಟಿಹೊಳಿ ನಡೆಸಿದ್ದ ವಿರೋಧ ಪಕ್ಷದ ಮುಖಂಡರ ಕಣ್ಣು ಕೆಂಪಾಗಿಸಿದೆ.

ಇದನ್ನೂ ಓದಿ :  ತಾಯಿಯನ್ನು ನೋಡಿಕೊಳ್ಳದೆ, ಮಾನಸಿಕ ಕಿರುಕುಳ ; ಮಗನ ಹೆಸರಿಗಿದ್ದ ಆಸ್ತಿ ವಾಪಸ್​ ಪಡೆಯಲು ಎಸಿ ಆದೇಶ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃನಾಲ್ ಹೆಬ್ಬಾಳ್ಕರ್ ಈಗಾಗಲೇ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಆರಂಭ ಮಾಡಿದ್ದಾರೆ. ಇನ್ನೂ ಸಹೋದರ ಚನ್ನರಾಜ್ ಹಟ್ಟಿಹೊಳಿ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಬೆಳಗಾವಿ ತಾಲೂಕಿನಿಂದಲೇ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಜನರ ಜತೆಗೆ ಗುರುತಿಸಿಕೊಳ್ಳಲು ಶಾಸಕಿ ಹೆಬ್ಬಾಳ್ಕರ್ ಬದಲಾಗಿ ಓಡಾಡುತ್ತಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಸಹೋದರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರನ್ನಾಗಿ ಮಾಡಲು ಹೆಬ್ಬಾಳ್ಕರ್ ಸಹ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಿಕೆಯಾಗಿದ್ದು, ಮತ್ತೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಚುನಾವಣೆ ಕಣ ರಂಗೇರಲಿದೆ.
Published by:G Hareeshkumar
First published: