ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಸಚಿವ ಜಗದೀಶ್ ಶೆಟ್ಟರ್‌ರನ್ನು ನೂತನ ಶಾಸಕ ಮುನಿರತ್ನ ಭೇಟಿಯಾಗಿದ್ದಾರೆ. ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಆರ್‌ಆರ್ ನಗರದ ನೂತನ ಶಾಸಕ ಮುನಿರತ್ನ ಜಗದೀಶ್ ಶೆಟ್ಟರ್‌ರನ್ನು ಸನ್ಮಾನಿಸಿದ್ದಾರೆ. ಜಗದೀಶ್ ಶೆಟ್ಟರ್ ಕೂಡ ನೂತನ ಶಾಸಕ ಮುನಿರತ್ನರಿಗೆ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಶೆಟ್ಟರ್ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದ ಮುನಿರತ್ನ ನಂತರ ಬೆಂಗಳೂರಿಗೆ ವಾಪಸಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ಇದು ಸೌಹಾರ್ದಯುತ ಭೇಟಿ, ನೂತನ ಶಾಸಕರಿಗೆ ಆಶೀರ್ವಾದ ಮಾಡಿ ಕಳಿಸಲಾಗಿದೆ ಎಂದಿದ್ದಾರೆ. ಸಚಿವ ಸ್ಥಾನಕ್ಕೆ ತೀವ್ರ ಪ್ರಯತ್ನ ನಡೆಸಿರುವ ಮುನಿರತ್ನ ದಿಢೀರನೆ ಹುಬ್ಬಳ್ಳಿಗೆ ಆಗಮಿಸಿ ಶೆಟ್ಟರ್‌ರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಕಳೆದ ಬಾರಿ ಉಪ ಚುನಾವಣೆಯಲ್ಲಿ ಗೆದ್ದವರು ಮುನಿರತ್ನ ಬೆಂಬಲಕ್ಕೆ ನಿಲ್ಲುವುದು ಅನುಮಾನವಾಗಿದೆ. ಹೀಗಾಗಿ ಪಕ್ಷದ ಪ್ರಮುಖರ ಮನವೊಲಿಸಲು ಓಡಾಡುತ್ತಿದ್ದಾರೆ. ಮಂತ್ರಿಯಾಗಲು ಏಕಾಂಗಿಯಾಗಿ ಕಸರತ್ತು ನಡೆಸಿರುವ ಮುನಿರತ್ನಗೆ ಜಗದೀಶ್ ಶೆಟ್ಟರ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗುತ್ತಿದೆ.
ಇದನ್ನು ಓದಿ: ಕ್ರಿಕೆಟ್ ಬೆಟ್ಟಿಂಗ್ಗೂ ನನಗೂ ಸಂಬಂಧವಿಲ್ಲ, ಇದು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ; ಶಾಸಕ ಮತ್ತಿಮೋಡ
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಉಣಕಲ್- ಮಾರಡಗಿ ಹಾಗೂ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಉಣಕಲ್- ಹೆಬ್ಬಳ್ಳಿ ರಸ್ತೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ