HOME » NEWS » District » MLC SL BHOJEGOWDA PROTEST IN FRONT OF DC OFFICE IN CHIKKAMAGALURU RHHSN VCTV

ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲಿ ಏಕಾಂಗಿಯಾಗಿ ಕೂತು ಪ್ರತಿಭಟನೆ ನಡೆಸಿದ ಶಾಸಕ ಎಸ್.ಎಲ್.ಭೋಜೇಗೌಡ!

ಪ್ರತಿಭಟನೆಯಿಂದ ಮುಜುಗರಕ್ಕೆ ಒಳಗಾದ ಜಿಲ್ಲಾಧಿಕಾರಿ ರಮೇಶ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಭೋಜೇಗೌಡರ ಮನವೊಲಿಸಲು ಪ್ರಯತ್ನಿಸಿದ್ದರು.

news18-kannada
Updated:June 24, 2021, 10:57 PM IST
ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲಿ ಏಕಾಂಗಿಯಾಗಿ ಕೂತು ಪ್ರತಿಭಟನೆ ನಡೆಸಿದ ಶಾಸಕ ಎಸ್.ಎಲ್.ಭೋಜೇಗೌಡ!
ಏಕಾಂಗಿಯಾಗಿ ಪ್ರತಿಭಟನೆ ಮಾಡಿದ ಶಾಸಕ ಎಸ್.ಎಲ್.ಭೋಜೇಗೌಡ!
  • Share this:
ಚಿಕ್ಕಮಗಳೂರು (ಜೂನ್ 24) : ಜಿಲ್ಲಾಧಿಕಾರಿ ಉದ್ದೇಶಪೂರ್ವಕವಾಗಿ ಮಾಡಿದ್ದರೆ ಪ್ರಿವಿಲೈಜ್ ಮೂವ್ ಮಾಡಿ ಏನೆಂದು ತೋರಿಸುತ್ತಿದ್ದೆ. ಆದರೆ, ಇಲ್ಲಿ ಜಿಲ್ಲಾಧಿಕಾರಿಯನ್ನ ಸಾರಿ ಫಿಗರ್ ಮಾಡಿ, ಜಿಲ್ಲಾಧಿಕಾರಿಯನ್ನ ರಾಜಕಾರಣದ ಕೈಗೊಂಬೆ ಮಾಡಿಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೋಜೇಗೌಡ ಅವರು ಇಂದು ಜಿಲ್ಲಾಡಳಿತ ನನ್ನನ್ನ ನಿರ್ಲಕ್ಷ್ಯ ಮಾಡಿದೆ. ಯಾವುದೇ ಸಭೆ-ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕೂತು ಪ್ರತಿಭಟನೆ ನಡೆಸಿದರು. ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ ಏನೆಂದು ಗೊತ್ತಿಲ್ಲವಾ. ಎಂಟು ಬಾರಿ ಶಾಸಕರಾಗಿದ್ದಾರೆ, ನಾನು ಹೇಳಿಕೊಡಬೇಕಾ ಎಂದು ಪ್ರಶ್ನಿಸಿದ್ದಾರೆ. ಒಂದು- ಎರಡು ಬಾರಿಯಲ್ಲ ಹಲವು ಬಾರಿ ಹೇಳಿದ್ದೇನೆ. ಅವರು ನಮಗೆ ಬುದ್ಧಿ ಹೇಳಬೇಕು. ಸರಕಾರ ಅವರಿಗೆ ಜನರ ದುಡ್ಡಲ್ಲಿ ಎಲ್ಲಾ ಅಧಿಕಾರಿಗಳನ್ನ ನೀಡಿದೆ. ಕೈಗೊಬ್ಬ- ಕಾಲಿಗೊಬ್ಬ ಪಿಎಗಳು ಇದ್ದಾರೆ. ಪಿಎಗಳ ಮೂಲಕ ಶಾಸಕರಿಗೆ ನಿಮ್ಮ ಪ್ರವಾಸದ ಕಾರ್ಯಕ್ರಮವನ್ನು ತಿಳಿಸಲು ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ತಿಂಗಳ ಪ್ರವಾಸದ ಕಾಪಿ ಹಾಕುವುದಿಲ್ಲವೇ, ಕಾರ್ಯಕ್ರಮದ ಕಾಪಿಯನ್ನ ಶಾಸಕರಿಗೆ ಏಕೆ ಕಳಿಸಲ್ಲ ಎಂದು ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ. ಆರಂಭದಲ್ಲೇ ಜಿಲ್ಲಾ ಮಂತ್ರಿಗಳಿಗೂ ಹೇಳಿದ್ದೇನೆ. ಪ್ರಾಣೇಶ್ ಇದ್ದರೂ ನಿನ್ನದು ಬರಬೇಕು ಕಣಯ್ಯ ಎಂದಿದ್ದೇನೆ. ಅವರು ಉಪಸಭಾಪತಿ. ಗೌರವವಿದೆ. ಸಂಬಂಧದಲ್ಲಿ ಹೇಳಿದ್ದೇನೆ. ಅಧಿಕಾರಿಗಳ ಸಭೆಗಳಲ್ಲಿ ಭೋಜೇಗೌಡ ಇರುವುದಿಲ್ಲ. ಸಭೆಯಲ್ಲಿ ಶಾಸಕರು, ಸಂಸದರು ಕೂತಾಗ ನಮಗೆ ಬೇರೆಯವರು ಕೇಳುತ್ತಾರೆ. ನಾನೊಬ್ಬ ಜನಪ್ರತಿನಿಧಿಯಾಗಿ ಸಭೆಗೆ ಹೋಗಿಲ್ಲ ಅಂದರೆ ಜನ ಏನೆಂದು ಹೇಳುತ್ತಾರೆ. ಪ್ರೋಟೋಕಾಲ್ ಏನ್ ಮೇನ್‍ಟೇನ್ ಮಾಡಿದ್ದೀರಾ ನೀವು. ನಾನು ಕೇಳಬಾರದ. ನಾನು ಶಾಸಕ ಅಲ್ವಾ. 6 ಜಿಲ್ಲೆ 39 ತಾಲೂಕಿನಲ್ಲಿ ನನಗೆ ಪ್ರೋಟೋಕಾಲ್ ಇದೆ. ಇದು ನನ್ನ ನೋಡೆಲ್ ಕ್ಷೇತ್ರ. ನಿಮ್ಮ ಗುಂಪುಗಾರಿಕೆ ಇದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ನನಗೆ ಅದು ಗೊತ್ತಿದೆ. ಆ ಶಾಸಕರು, ಈ ಶಾಸಕರನ್ನ ಕರೆಯಬಾರದು ಎಂದು ನಿಮ್ಮ ಗುಂಪುಗಾರಿಕೆಯಿಂದ ನಿಮ್ಮ ಪಕ್ಷದ ಕಚೇರಿಯಲ್ಲಿ ಅಥವಾ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಸಚಿವರು ಬರುವಗಾ ಪ್ರೋಟೋಕಾಲ್ ಮೇನ್‍ಟೇನ್ ಮಾಡಿ. ಮಾಡಬೇಕು. ನಾನು ಬೇರೆ ಕೇಳಲ್ಲ ಎಂದು ಜಿಲ್ಲಾಡಳಿತ, ಸಚಿವ ಅಂಗಾರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಇದನ್ನು ಓದಿ: ಕೋವಿಡ್ ಉತ್ತಮ ನಿರ್ವಹಣೆಯಲ್ಲಿ ರಾಷ್ಟ್ರದ ಗಮನ ಸೆಳೆದ ಹೊದ್ದೂರು ಗ್ರಾಮ ಪಂಚಾಯಿತಿ!

ಪ್ರತಿಭಟನೆಯಿಂದ ಮುಜುಗರಕ್ಕೆ ಒಳಗಾದ ಜಿಲ್ಲಾಧಿಕಾರಿ ರಮೇಶ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಭೋಜೇಗೌಡರ ಮನವೊಲಿಸಲು ಪ್ರಯತ್ನಿಸಿದ್ದರು. ಈ ಹಂತದಲ್ಲಿ  ಮಾತನಾಡಿದ ಭೋಜೆಗೌಡ ಅವರು ಹತ್ತಾರು ಬಾರಿ ನಿಮ್ಮ ಗಮನಕ್ಕೆ ಈ ವಿಷಯ ತರಲಾಗಿದೆ. ಸಚಿವರಿಗೆ ತಿಳಿಸಿದ್ದೇನೆ. ಆದರೂ ನನ್ನನ್ನೂ ಕಡೆಗಣಿಸಲಾಗುತ್ತಿದೆ ಎಂದು ಆಕ್ಷೇಪ ಹೊರಹಾಕಿದರು. ರಾಜ್ಯ ಸರ್ಕಾರ ಸತ್ತು ಹೋಗಿದೆ. ಸಚಿವರು ಬಂದ ಪುಟ್ಟ ಹೋದ ಪುಟ್ಟ ಎನ್ನುವಂತೆ ಬಂದು ಹೋಗುತ್ತಿದ್ದಾರೆ ಎಂದು ಟೀಕಿಸಿದರು. ವಸ್ತು ಸ್ಥಿತಿ ಏನಾಗಿದೆ ಎನ್ನುವುದನ್ನು ತಮ್ಮ ಗಮನಕ್ಕೆ ತರುತ್ತೇನೆ ದಯವಿಟ್ಟು ಒಳಗೆ ಬನ್ನಿ, ಮಾತನಾಡುವ ಎಂದು ಜಿಲ್ಲಾಧಿಕಾರಿ ರಮೇಶ್ ಮಾಡಿದ ಮನವಿಗೆ ಸ್ಪಂದಿಸಿದ ಬೋಜೇಗೌಡ  ಈ ಬಗ್ಗೆ ಮಾತುಕತೆ ನಡೆಸಿ ಜಿಲ್ಲಾಡಳಿತವನ್ನು ತರಾಟೆಗೆ ತೆಗೆದುಕೊಂಡರು.
Youtube Video

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಉಸ್ತುವಾರಿ ಸಚಿವ ಅಂಗಾರ ನಾವು ಯಾವುದೇ ಶಾಸಕರನ್ನ ಕಡೆಗಣಿಸಿಲ್ಲ, ಅಧಿಕಾರಿ ಗಳ ಜೊತೆ ಸಭೆ ಮಾಡಿದ್ದೇನೆ ಅಷ್ಟೇ ಎಂದು ಬೋಜೇಗೌಡ ಆರೋಪವನ್ನ ತಳ್ಳಿ ಹಾಕಿದ್ದಾರೆ..
Published by: HR Ramesh
First published: June 24, 2021, 10:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories