ಮಹಿಳೆಯರ ಮತ್ತು ಮಕ್ಕಳ ಪೋಷಣೆಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ; ಬಿ.ವೈ.ರಾಘವೇಂದ್ರ

ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಶಿಶುಮರಣ ಮತ್ತು ತಾಯಿ ಮರಣ ಪ್ರಮಾಣವನ್ನು ನಿಯಂತ್ರಿಸುವುದು ಕೂಡ ಈ ಕಾರ್ಯಕ್ರಮದ ಭಾಗವಾಗಿರಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು.

news18-kannada
Updated:October 4, 2020, 8:54 PM IST
ಮಹಿಳೆಯರ ಮತ್ತು ಮಕ್ಕಳ ಪೋಷಣೆಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ; ಬಿ.ವೈ.ರಾಘವೇಂದ್ರ
ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೆ ಮೊಬೈಲ್​​ ವಿತರಿಸಿದ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ
  • Share this:
ಶಿವಮೊಗ್ಗ(ಅಕ್ಟೋಬರ್​. 04): ರಕ್ತ ಹೀನತೆಯಿಂದ ಬಳಲುತ್ತಿರುವ ಮಕ್ಕಳು, ಕಿಶೋರಿಯರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಹಾಗೂ ನವಜಾತ ಶಿಶುಗಳ ಪೋಷಣೆ ಮತ್ತು ನಿರಂತರ ಅನುಪಾಲನೆಯ ಸದುದ್ದೇಶದಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಮೊಬೈಲ್​​ಗಳನ್ನು ವಿತರಿಸಲಾಗುತ್ತಿದೆ ಎಂದು ಬಿ ವೈ ಸಂಸದ ರಾಘವೇಂದ್ರ ಹೇಳಿದರು. ಕೇಂದ್ರ ಪುರಸ್ಕತ ಪೋಷಣೆ ಅಭಿಯಾನ ಯೋಜನೆಯಡಿ ದೇಶದ ಪ್ರಧಾನ ಮಂತ್ರಿಗಳು ರೂಪಿಸಿರುವ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಭಾಗವಾಗಿ ಮೊಬೈಲ್​​​ಗಳನ್ನು ವಿತರಿಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುವ ಎಲ್ಲಾ ಕಾರ್ಯಕ್ರಮಗಳ ಅನುಪಾಲನೆ ಹಾಗೂ ಮಾಹಿತಿ ಪಡೆದುಕೊಳ್ಳಲು ಇದು ಅನುಕೂಲವಾಗಲಿದೆ. ಶಿವಮೊಗ್ಗ ಜಿಲ್ಲಾಡಳಿತದ ಭವನದಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಮೊಬೈಲ್​​ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಂಸದ ಬಿ ವೈ ರಾಘವೇಂದ್ರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 2,525 ಮೊಬೈಲ್ ಪೋನ್ ಹಂಚಿಕೆಯಾಗಿದ್ದು, ಜಿಲ್ಲೆಯಲ್ಲಿ ಇರುವ 2,439 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಹಾಗೂ 86 ಮೇಲ್ವಿಚಾರಕಿಯರಿಗೆ ಶೀರ್ಘದಲ್ಲಿ ನೀಡಲಾಗುವುದು ಎಂದರು.

ಅಲ್ಲದೇ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಶಿಶುಮರಣ ಮತ್ತು ತಾಯಿ ಮರಣ ಪ್ರಮಾಣವನ್ನು ನಿಯಂತ್ರಿಸುವುದು ಕೂಡ ಈ ಕಾರ್ಯಕ್ರಮದ ಭಾಗವಾಗಿರಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು.

ಈ ಯೋಜನೆಯನ್ನು ಡಿಜಿಟಲೈಸ್ ಮಾಡಲು ಈ ಮೊಬೈಲ್ ಫೋನ್‍ಗಳಲ್ಲಿ ಸಿಎಎಸ್​ ಅಂಡ್ ಸ್ನೇಹಾ app ತಂತ್ರಾಂಶವನ್ನು ಅಳವಡಿಸಲಾಗಿರುತ್ತದೆ. ಇದರಿಂದ ಯೋಜನೆಯ ಫಲಾನುಭವಿಗಳಾದ ಮಕ್ಕಳು, ಕಿಶೋರಿಯರು, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ಹಾಗೂ ನವಜಾತ ಶಿಶುಗಳಿಗಾಗಿ ಸರ್ಕಾರದಿಂದ ನೀಡುವ ಸೌಲಭ್ಯಗಳು ತಲುಪಿಸಲು ಹಾಗೂ ಅನುಸರಣೆ ಮಾಡಲಾಗುವುದು ಎಂದವರು ನುಡಿದರು.

ಜಿಲ್ಲಾದ್ಯಂತ ಸೀಮಂತ, ಪೌಷ್ಟಿಕ ಆಹಾರ ಶಿಬಿರ, ಸುಪೋಷಣ್ ದಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಜಿಲ್ಲಾದ್ಯಂತ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಾಡಲಾಗಿದ್ದು, ಅದರಲ್ಲಿ ಮಕ್ಕಳ ಗುರುತಿಸುವಿಕೆ, ನ್ಯೂಟ್ರಿ ಗಾರ್ಡನ್, ಪೋಷಣ್ ಪಂಚಾಯತ್, ಪೋಷಣ್ ರಥ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,233 ಚಟುವಟಿಕೆಗಳ ಮುಖೇನ 9,07,267 ಜನರನ್ನು ತಲುಪಿಸುವ ಉದ್ಧೇಶ ಹೊಂದಲಾಗಿದೆ ಎಂದರು.

ಇದನ್ನೂ ಓದಿ : ತಾರ್ಕಿಕ ಅಂತ್ಯ ಕಾಣದ ಕೆ.ಕಲ್ಯಾಣ್ ದಾಂಪತ್ಯ ಕಲಹ; ನನ್ನ ಬಾಳಲ್ಲಿ ಅಶ್ವಿನಿ ಮತ್ತೆ ಬರ್ತಾಳೆ ಪ್ರೇಮ ಕವಿ ವಿಶ್ವಾಸ

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕೋವಿಡ್​ನಂತಹ ಸಂದಿಗ್ಧ ಸಂದರ್ಭದಲ್ಲಿಯೂ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಹೃದಯವಂತಿಕೆಯನ್ನು ಕೊಂಡಾಡಿದರು. ಅಂಗನವಾಡಿ  ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ಇನ್ನಷ್ಟು ರಚನಾತ್ಮಕವಾಗಿ, ಪರಿಣಾಮಕಾರಿಯಾಗಿ ನಡೆಯುವಂತಾಗಲು ಮೊಬೈಲ್ ವಿತರಣೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಸಾಂಕೇತಿಕವಾಗಿ ಮೊಬೈಲ್​​ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕ ಕೆ.ಬಿ.ಅಶೋಕನಾಯ್ಕ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.
Published by: G Hareeshkumar
First published: October 4, 2020, 8:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading