ಉತ್ತರ ಕರ್ನಾಟಕಕ್ಕೆ ಒಂದು ವಾರ ವಿಳಂಬವಾಗಲಿದೆ ಮುಂಗಾರು; ಹವಾಮಾನ ಶಾಸ್ತ್ರ ವಿಭಾಗ ಮುಖ್ಯಸ್ಥರಿಂದ ಮಾಹಿತಿ

ಅರಬ್ ತೀರದ ವಾಯುಭಾರ ಕುಸಿತದಿಂದ ಮಳೆ ಬರಲಿದ್ದ ಮಾರುತಗಳು ಸಹ ಸದ್ಯ ಪಶ್ಚಿಮ ದಿಕ್ಕಿನತ್ತ ಚಲನೆ ಆರಂಭಿಸಿವೆಯಂತೆ. ಇದರಿಂದಾಗಿ ಜೂನ್ 1ರ ಹೊತ್ತಿಗೆ ಮುಂಗಾರು ಮಳೆ ಕೇರಳ ಪ್ರವೇಶಿಸಿದ್ದರೂ ಅದು ಉತ್ತರ ಕರ್ನಾಟಕ ಭಾಗಕ್ಕೆ ಬರಲು ಕನಿಷ್ಠ ಒಂದು ವಾರ ಬೇಕಾಗಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಧಾರವಾಡ: ಕೊರೋನಾ ಲಾಕ್‌ಡೌನ್​ನಿಂದ ತತ್ತರಿಸಿ‌ ಹೋಗಿದ್ದ ಉತ್ತರ ಕರ್ನಾಟಕದ ರೈತರು ಈ ಮುಂಗಾರಿನಲ್ಲಾದರೂ ಒಂದಷ್ಟು ಬೆಳೆ ತೆಗೆದುಕೊಳ್ಳೋಣ ಎಂಬ ಲೆಕ್ಕಾಚಾರದಲ್ಲಿದ್ದರು. ಆದರೆ, ಮುಂಗಾರು ಮಳೆಯೂ ಸಹ ಈಗ ವಿಳಂಬವಾಗಿ ಬರಲಿದೆ ಎಂಬ ಅಂಶ ತಿಳಿದುಬಂದಿದೆ.

ಈಗಾಗಲೇ ರೈತರು ಮುಂಗಾರು ಬಿತ್ತನೆಗೆ ಕಾದು ಕುಳಿತಿರುವಾಗಲೇ ಮುಂಗಾರು ಮಳೆ ವಿಳಂಬವಾಗಿ ಉತ್ತರ ಕರ್ನಾಟಕಕ್ಕೆ ಎಂಟ್ರಿ‌ಕೊಡಲಿದೆ ಎಂದು ಧಾರವಾಡದ ಕೃಷಿ ವಿವಿ ಹವಾಮಾನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆರ್.ಹೆಚ್.ಪಾಟೀಲ ಮಾಹಿತಿ ನೀಡಿದ್ದಾರೆ.

ಸದ್ಯದ ಹವಾಮಾನ ಅಧ್ಯಯನದ ಪ್ರಕಾರ ನಾಲ್ಕೈದು ದಿನ ಮುಂಗಾರು ವಿಳಂಬ ಆಗಬಹುದು ಎನ್ನಲಾಗುತ್ತಿದೆ. ಕಳೆದ ಬಾರಿ ಮುಂಗಾರು ಒಂದು ವಾರ ವಿಳಂಬವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಮೂರು ವಾರಕ್ಕೆ ಹೋಗಿತ್ತು. ಹೀಗಾಗಿ ಸದ್ಯದ ನಾಲ್ಕೈದು ದಿನದ ವಿಳಂಬ ಇನ್ನೂ ಹೆಚ್ಚಾದರೂ ಅಚ್ಚರಿ ಇಲ್ಲ. ಇದಕ್ಕೆಲ್ಲ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಬಂದ ಅಂಫಾನ್ ಚಂಡಮಾರುತವೇ ಕಾರಣವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನು ಓದಿ: Monsoon 2020: ಇಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಹಲವೆಡೆ ಭಾರೀ ಮಳೆ ಸಾಧ್ಯತೆ

ಹೌದು ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸುರಿಸಬೇಕಿದ್ದ ಮಳೆ ಮಾರುತಗಳ ತೇವಾಂಶವನ್ನೆಲ್ಲ ಈ ಅಂಫಾನ್ ಸಂಪೂರ್ಣವಾಗಿ ಹೀರಿಕೊಂಡು ಹೋಗಿದೆ. ಇದರಿಂದ  ಈ ಭಾಗದಲ್ಲಿ ಆವಿಯಾಗಿ ಮೋಡ ಸೇರಿದ್ದ ನೀರಿನ ಒಂದಂಶ ಮಳೆಯೂ ಈಗ ಸಿಗದಂತಾಗಿದೆ. ಮತ್ತೊಂದೆಡೆ ಅರಬ್ ತೀರದ ವಾಯುಭಾರ ಕುಸಿತದಿಂದ ಮಳೆ ಬರಲಿದ್ದ ಮಾರುತಗಳು ಸಹ ಸದ್ಯ ಪಶ್ಚಿಮ ದಿಕ್ಕಿನತ್ತ ಚಲನೆ ಆರಂಭಿಸಿವೆಯಂತೆ. ಇದರಿಂದಾಗಿ ಜೂನ್ 1ರ ಹೊತ್ತಿಗೆ ಮುಂಗಾರು ಮಳೆ ಕೇರಳ ಪ್ರವೇಶಿಸಿದ್ದರೂ ಅದು ಉತ್ತರ ಕರ್ನಾಟಕ ಭಾಗಕ್ಕೆ ಬರಲು ಕನಿಷ್ಠ ಒಂದು ವಾರ ಬೇಕಾಗಬಹುದು.
First published: