ಮಲೆನಾಡಿನಲ್ಲಿ ಮಳೆ ಚುರುಕು, ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

ಆಗುಂಬೆ ಭಾಗದಲ್ಲಿ ಮಳೆ ಹೆಚ್ಚಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ  ಭಾರಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಆಗುಂಬೆ

ಆಗುಂಬೆ

  • Share this:
ಶಿವಮೊಗ್ಗ(ಜೂ.16): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನು ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸಹ ಉತ್ತಮ ಮಳೆ ಸುರಿಯುತ್ತಿದೆ. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಆಗುಂಬೆ ಘಾಟಿಯಲ್ಲಿ  12  ಟನ್ ಗಿಂತ  ಅಧಿಕ ಭಾರದ ವಾಹನಗಳ ಸಂಚಾರವನ್ನು  ನಿಷೇಧಿಸಲಾಗಿದೆ. ಆಗುಂಬೆ ಭಾಗದಲ್ಲಿ ಮಳೆ ಹೆಚ್ಚಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ  ಭಾರಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿ ರಸ್ತೆ ಕಿರಿದಾಗಿದೆ. ಜೊತೆಗೆ ರಸ್ತೆಯ ಇಕ್ಕಲೆಗಳಲ್ಲಿ  ಭಾರ ತಡೆಯವ ಕ್ಷಮತೆ ಕ್ಷೀಣಿಸುತ್ತಿದೆ.

ಭಾರೀ ಸರಕು ಸಾಗಣೆ  ವಾಹನಗಳು ಸಂಚರಿಸುವುದರಿಂದ ರಸ್ತೆಯ ಬದಿ ಮಣ್ಣು ಕುಸಿಯುವ ಸಾಧ್ಯತೆ ಇದೆ. ಇದರಿಂದಾಗಿ  ರಸ್ತೆ ಸಂಚಾರಕ್ಕೂ ಅಡಚಣೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಪಾಲಕ ಇಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ವಿಭಾಗ ಮಂಗಳೂರು ಇವರ ಪ್ರಸ್ತಾವನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ :  ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಗ್ರಾಮೀಣ ಕ್ಷೇತ್ರಕ್ಕಾಗಿ ಫೈಟ್..!

ಬಾರೀ ಸರಕು ಸಾಗಣಿಕೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ದಿನಾಂಕ ಜೂನ್​ 15 ರಿಂದ  ಅಕ್ಟೋಬರ್​ 15 ರವೆರೆಗೆ ಬಾರೀ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲವಾಗಿದೆ. ಎನ್ ಎಚ್ 169 A ಹೆದ್ದಾರಿ ಇದಾಗಿದ್ದು, ಉಡುಪಿ, ಮಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ನಡುವೆ ರಸ್ತೆ ಸಂಪರ್ಕ ಕಲ್ಪಿಸುತ್ತದೆ. 12 ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು  ಸೂಚಿಸಲಾಗಿದೆ.

ಶಿವಮೊಗ್ಗ , ತೀರ್ಥಹಳ್ಳಿ,ಆಗುಂಬೆ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ, ಮಂಗಳೂರು ಈ ರಸ್ತೆಯ ಮೂಲಕ ವಾಹನಗಳು ಸಂಚಾರ ಮಾಡಬಹುದಾಗಿದೆ. ಅದೇ ರೀತಿ  ಶಿವಮೊಗ್ಗ,  ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗವಾಗಿ ಸಹ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಸಂಪೂರ್ಣ ಮಳೆಗಾಲ ಮುಗಿಯುವವರೆಗೂ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲವಾಗಿದೆ.
First published: