HOME » NEWS » District » MP ANNASAHEB JOLLE AND MINISTER SHASHIKALA JOLLE MEETING WITH OFFICERS ON CORONA ISSUE RHHSN

ಕೊರೋನಾ ನಿಯಂತ್ರಣ ಸಂಬಂಧ ಅಧಿಕಾರಿಗಳ ಜೊತೆ ಸಚಿವೆ ಜೊಲ್ಲೆ, ಸಂಸದ ಅಣ್ಣಾ ಸಾಹೇಬ್ ಸಭೆ

ಸರ್ವಪಕ್ಷ ಸಭೆಯಲ್ಲಿ ಕೊರೋನಾ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ತೆಗೆದುಕೊಳ್ಳುವ ಎಲ್ಲ ಕಠಿಣ ಕ್ರಮಗಳಿಗೆ ಎಲ್ಲರೂ ಬದ್ಧವಾಗಿ ಇರುವುದಾಗಿ ರಾಜಕೀಯ ಮುಖಂಡರು ತಿಳಿಸಿದರು. ತಜ್ಞರು ನೀಡಿರುವ ವರದಿ ಆಧರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಭೆಯ ಕೊನೆಯಲ್ಲಿ ಮಾತನಾಡಿದ ರಾಜ್ಯಪಾಲರು ಆರೋಗ್ಯಪೂರ್ಣ ಕರ್ನಾಟಕಕ್ಕಾಗಿ ಕಠಿಣ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಲಾಕ್​ಡೌನ್ ಮಾಡಿದರೆ ಸೂಕ್ತ ಎಂದು ಸಲಗೆ ಸಹ ನೀಡಿದ್ದಾರೆ. 

news18-kannada
Updated:April 20, 2021, 8:41 PM IST
ಕೊರೋನಾ ನಿಯಂತ್ರಣ ಸಂಬಂಧ ಅಧಿಕಾರಿಗಳ ಜೊತೆ ಸಚಿವೆ ಜೊಲ್ಲೆ, ಸಂಸದ ಅಣ್ಣಾ ಸಾಹೇಬ್ ಸಭೆ
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ.
  • Share this:
ಚಿಕ್ಕೋಡಿ (ಏ.20): ಕೊರೋನಾ ನಿಯಂತ್ರಣ ಸಂಬಂಧ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಸಚಿವೆ‌ ಶಶಿಕಲಾ ಜೊಲ್ಲೆ ಇಂದು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದರು. ಈ ವೇಳೆ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ಇಲಾಖೆಗಳ ಪ್ರಗತಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಯಾವ ಹಂತದಲ್ಲಿದೆ. ಮತ್ತು ಕೊರೋನಾ ತಡೆಗಟ್ಟಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದರ ಕುರಿತು ಸವಿಸ್ತಾರವಾದ ಮಾಹಿತಿ ಪಡೆದರು.

ಈಗಾಗಲೇ ಬೇರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ ಹಿನ್ನಲೆಯಲ್ಲಿ ಬಹುತೇಕ ಲಾಕ್ ಡೌನ್ ಜಾರಿಯಾಗಿದ್ದು, ರಾಜ್ಯದಲ್ಲಿ ಆ ಪರಿಸ್ಥಿತಿ ನಿರ್ಮಾಣ ಆಗಬಾರದು ಎಂದ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಗಳಾಗಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಇದೇ ವೇಳೆ ಪೊಲೀಸ್‌ ಇಲಾಖೆ ಸೇರಿದಂತೆ ಸಭೆಯಲ್ಲಿ ಭಾಗಿಯಾಗಿದ್ದ ಇತರೆ ಇಲಾಖೆ ಅಧಿಕಾರಿಗಳಿಗೆ ಕೋವಿಡ್ -19 ಹರಡದಿರುವುದಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರದಿಂದ ಇದಕ್ಕಾಗಿ ಯಾವ ರೀತಿಯ ಸ್ಪಂದನೆಗೂ ಸಂಸದರು, ಸಚಿವರು ಸಿದ್ಧವಿರೋದಾಗಿ ತಿಳಿಸಿದರು.

ಇದನ್ನು ಓದಿ: ಇದೊಂದು ರಾಷ್ಟ್ರೀಯ ವಿಪತ್ತು ಅಂತ ಘೋಷಣೆ ಮಾಡಿ; ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಸಲಹೆ

ರಾಜ್ಯದಲ್ಲೂ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ನಿಯಂತ್ರಣ ಸಂಬಂಧ ಇಂದು ರಾಜ್ಯಪಾಲ ವಿ.ಆರ್. ವಾಲಾ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿತು. ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಸಂಪುಟ ಸದಸ್ಯರು, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಪಕ್ಷಗಳ ಪ್ರಮುಖರು ಭಾಗಿಯಾಗಿದ್ದರು.
Youtube Video

ಸರ್ವಪಕ್ಷ ಸಭೆಯಲ್ಲಿ ಕೊರೋನಾ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ತೆಗೆದುಕೊಳ್ಳುವ ಎಲ್ಲ ಕಠಿಣ ಕ್ರಮಗಳಿಗೆ ಎಲ್ಲರೂ ಬದ್ಧವಾಗಿ ಇರುವುದಾಗಿ ರಾಜಕೀಯ ಮುಖಂಡರು ತಿಳಿಸಿದರು. ತಜ್ಞರು ನೀಡಿರುವ ವರದಿ ಆಧರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಭೆಯ ಕೊನೆಯಲ್ಲಿ ಮಾತನಾಡಿದ ರಾಜ್ಯಪಾಲರು ಆರೋಗ್ಯಪೂರ್ಣ ಕರ್ನಾಟಕಕ್ಕಾಗಿ ಕಠಿಣ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಲಾಕ್​ಡೌನ್ ಮಾಡಿದರೆ ಸೂಕ್ತ ಎಂದು ಸಲಗೆ ಸಹ ನೀಡಿದ್ದಾರೆ.
Published by: HR Ramesh
First published: April 20, 2021, 8:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories