ಬಿಜೆಪಿ ಸರ್ಕಾರ ಉರುಳಲಿದೆ, ರಾಜ್ಯದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ: ಡಿ.ಕೆ. ಸುರೇಶ್‌ ಭವಿಷ್ಯ

20 ಲಕ್ಷ ಕೋಟಿ ರೂ. ಕೊರೋನಾ ಪ್ಯಾಕೇಜ್‌ ಹೆಸರಲ್ಲಿ ಬಿಜೆಪಿ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಜನರಿಗೆ ಉಂಡೇ ನಾಮ ಹಾಕುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದ್ದಾರೆ.

news18-kannada
Updated:May 30, 2020, 6:58 AM IST
ಬಿಜೆಪಿ ಸರ್ಕಾರ ಉರುಳಲಿದೆ, ರಾಜ್ಯದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ: ಡಿ.ಕೆ. ಸುರೇಶ್‌ ಭವಿಷ್ಯ
ಸಂಸದ ಡಿ.ಕೆ. ಸುರೇಶ್.
  • Share this:
ರಾಮನಗರ (ಮೇ 29): ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಬಿಜೆಪಿ ನಾಯಕರಿಂದಲೇ ಉರುಳಲಿದೆ. ಅಲ್ಲದೆ, ರಾಜ್ಯದಲ್ಲಿ ಮತ್ತೊಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ‌ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಂಸದ ಡಿ.ಕೆ. ಸುರೇಶ್‌ ಭವಿಷ್ಯ ನುಡಿದಿದ್ದಾರೆ. 

ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿರುವ ಅವರು, "ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಭಿನ್ನಮತ ಶುರುವಾಗಿದೆ. ಅಧಿಕಾರದ ಆಸೆಗಾಗಿ ಆ ಪಕ್ಷದ ನಾಯಕರೇ ಸರ್ಕಾರವನ್ನು ಉರುಳಿಸಲಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರಾಜ್ಯದಲ್ಲಿ ಮತ್ತೊಂದು ಚುನಾವಣೆ ನಡೆಯುವುದು ಖಚಿತ. ಈ ವೇಳೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು. ಪಕ್ಷವನ್ನು ಭೂತ್‌ ಮಟ್ಟದಿಂದ ಗಟ್ಟಿಗೊಳಿಸಬೇಕು" ಎಂದು ತಿಳಿಸಿದ್ದಾರೆ.

ಇದೇ ಸದಂರ್ಭದಲ್ಲಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಡಿ.ಕೆ. ಸುರೇಶ್‌, "20 ಲಕ್ಷ ಕೋಟಿ ರೂ. ಕೊರೋನಾ ಪ್ಯಾಕೇಜ್‌ ಹೆಸರಲ್ಲಿ ಬಿಜೆಪಿ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಜನರಿಗೆ ಉಂಡೇ ನಾಮ ಹಾಕುತ್ತಿದ್ದಾರೆ. ಜನಪ್ರಿಯತೆಗಾಗಿ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಜಾರಿಯಾದ ಯೋಜನೆಗಳಿಗೆ ಕೇವಲ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ ಅಷ್ಟೇ. ಇವರು ಯಾರೇ ಪ್ರಯತ್ನಿಸಿದರೂ ಕಾಂಗ್ರೆಸ್‌ ಯೋಜನೆಗಳನ್ನು ಅಳಿಸಿಹಾಕುವುದು ಸಾಧ್ಯವಿಲ್ಲ" ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದು ಮಾಡುತ್ತಾ?; ಸುಳಿವು ಕೊಟ್ಟ ಡಿಸಿಎಂ ಅಶ್ವತ್ಥ್‌ ನಾರಾಯಣ್‌
First published: May 30, 2020, 6:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading