• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಬೆಳೆಹಾನಿ: ರೈತರ ಪರಿಹಾರದ ಮೊತ್ತ ಹೆಚ್ಚಳಕ್ಕೆ ಕೇಂದ್ರದ ಬಳಿ ಸಚಿವ ಮುರುಗೇಶ್ ನಿರಾಣಿ ಮನವಿ

ಬೆಳೆಹಾನಿ: ರೈತರ ಪರಿಹಾರದ ಮೊತ್ತ ಹೆಚ್ಚಳಕ್ಕೆ ಕೇಂದ್ರದ ಬಳಿ ಸಚಿವ ಮುರುಗೇಶ್ ನಿರಾಣಿ ಮನವಿ

ಮುರುಗೇಶ್ ನಿರಾಣಿ

ಮುರುಗೇಶ್ ನಿರಾಣಿ

ಒಂದು ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ  ಮಣ್ಣು ಸವಕಳಿಗೆ ಬಂದಿದೆ. ಇದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದರು. ತಾಲ್ಲೂಕಿನ ಒಟ್ಟು 14051 ಹೆಕ್ಟೇರ್ ಪ್ರದೇಶದಲ್ಲಿ 5994 ಪ್ರದೇಶವು ಸವಕಳಿಗೆ ತುತ್ತಾಗಿದೆ. ಪ್ರಸ್ತುತ 1 ಹೆಕ್ಟೇರ್ ಗೆ ₹  65000 ಪರಿಹಾರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಂದೆ ಓದಿ ...
  • Share this:

ನವದೆಹಲಿ, ಆ. 12: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದಾಗಿ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದ್ದು ರೈತರಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.


ಗುರುವಾರ ನವದೆಹಲಿಯಲ್ಲಿ  ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.


ಜಮಖಂಡಿ ತಾಲ್ಲೂಕಿನ ಉಪವಿಭಾಗದಲ್ಲಿ ಕೃಷ್ಣ ನದಿಯಿಂದ ಪದೇ ಪದೇ ಪ್ರವಾಹ ಉಂಟಾಗುವ ಕಾರಣ,ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತದೆ. ಪರಿಣಾಮ ಸರಿಯಾದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು.


ಒಂದು ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ  ಮಣ್ಣು ಸವಕಳಿಗೆ ಬಂದಿದೆ. ಇದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದರು. ತಾಲ್ಲೂಕಿನ ಒಟ್ಟು 14051 ಹೆಕ್ಟೇರ್ ಪ್ರದೇಶದಲ್ಲಿ 5994 ಪ್ರದೇಶವು ಸವಕಳಿಗೆ ತುತ್ತಾಗಿದೆ. ಪ್ರಸ್ತುತ 1 ಹೆಕ್ಟೇರ್ ಗೆ ₹  65000 ಪರಿಹಾರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.


ಈ ಪ್ರದೇಶದಲ್ಲಿ ಸಣ್ಣ, ಅತಿ ಸಣ್ಣ ಮತ್ತು ಕಡಿಮೆ ಆದಾಯ ಹೊಂದಿರುವ ರೈತರಿದ್ದು, ಕೃಷಿಯೇ ಜೀವನದ ಆಧಾರವಾಗಿದೆ. ಸರಕಾರ ನೀಡುತ್ತಿರುವ ಪರಿಹಾರದ ಮೊತ್ತ ಜೀವನ ನಿರ್ವಾಹಣೆಗೆ ಸಾಕಾಗದ ಕಾರಣ, ಪರಿಹಾರದ ಮೊತ್ತ ಹೆಚ್ಚಳವಾಗಬೇಕಧ ಅಗತ್ಯವಿದೆ ಎಂದು ಮನವಿಮಾಡಿಕೊಂಡರು.


ಪರಿಶೀಲಿಸಿ ಸೂಕ್ತ ಕ್ರಮ


ಸಚಿವ ನಿರಾಣಿ ಅವರ ಮನವಿಗೆ ಸೂಕ್ತವಾಗಿ ಸ್ಪಂಧಿಸಿದ  ಶೋಭಾ ಕರದ್ಲಾಂಜೆ ಅವರು, ರೈತರ ಹಿತಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂಬ ಭರವಸೆಯನ್ನು ನೀಡಿದ್ದಾರೆ.


ಪ್ರತಿವರ್ಷ ಮಳೆಗಾಲದ   ವೇಳೆ ಕೃಷ್ಣ ನದಿಯ ಪ್ರವಾಹ ಹಾಗೂ ಹಿನ್ನೀರಿನ ಕಾರಣ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರೈತರಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಬಗ್ಗೆ ಸದ್ಯದಲ್ಲಿಯೇ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.


ಇದನ್ನೂ ಓದಿ: ತಮಿಳುನಾಡು: ಭ್ರಷ್ಟಾಚಾರ ನಿಗ್ರಹ ದಳದ ದಾಳಿ; ಕಾನೂನು ಸಮಿತಿ ರಚಿಸಿಕೊಂಡ ಎಐಎಡಿಎಂಕೆ ನಾಯಕರು


ಬುಧವಾರ ಕೇಂದ್ರ ರಸಾಯನ  ಮತ್ತುರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಮುರುಗೇಶ್ ನಿರಾಣಿ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ  ಬೃಹತ್ ಔಷಧ ಪಾರ್ಕ್ ನಿರ್ಮಿಸಿದರೆ  ಈ ಭಾಗಕ್ಕೆ ಹೆಚ್ಚಿನ ನ್ಯಾಯ ಸಿಗುತ್ತದೆ. ಯಾದಗಿರಿ ಜಿಲ್ಲೆಯು ಹಿಂದುಳಿದ ಕರ್ನಾಟಕ ಜಿಲ್ಲಾ ವ್ಯಾಪ್ತಿಗೆ ಒಳಪಡಲಿದೆ. 2 ಮತ್ತು 3ನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸಿ ಇಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಹೂಡಿಕೆದಾರರನ್ನು ಆಕರ್ಷಿಸಬೇಕೆಂದು ಕೇಳಿದ್ದರು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

top videos
    First published: