HOME » NEWS » District » MURUGESH NIRANI OBSERVES FARMERS PROTEST AS MISLED POLITICAL CAMPAIGN NMPG SNVS

ರೈತರ ಪ್ರತಿಭಟನೆ ರಾಜಕೀಯ ದುರುದ್ದೇಶದ ಹೋರಾಟ: ಸಚಿವ ಮುರುಗೇಶ್ ನಿರಾಣಿ

ವಿರೋಧ ಪಕ್ಷದವರು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ರೈತರ ಪ್ರತಿಭಟನೆ ಒಂದು ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಆರೋಪಿಸಿದ್ದಾರೆ.

news18-kannada
Updated:January 26, 2021, 3:55 PM IST
ರೈತರ ಪ್ರತಿಭಟನೆ ರಾಜಕೀಯ ದುರುದ್ದೇಶದ ಹೋರಾಟ: ಸಚಿವ ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
  • Share this:
ಯಾದಗಿರಿ: ದೆಹಲಿ ಸೇರಿದಂತೆ ದೇಶಾದ್ಯಂತ ರೈತ ಹಾಗೂ ವಿವಿಧ ಸಂಘಟನೆಗಳು ಕೇಂದ್ರ ಸರಕಾರದ ಕೃಷಿ ನೀತಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಆದರೆ, ರೈತ ರ ಪ್ರತಿಭಟನೆ ದುರುದ್ದೇಶದಿಂದ ಕೂಡಿದ್ದು ವಿರೋಧ ಪಕ್ಷದವರ ಪ್ರೇರಿತ ಹೋರಾಟವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ವ್ಯಾಖ್ಯಾನಿಸಿದ್ಧಾರೆ.

ಅವರು ಗಣರಾಜ್ಯೋತ್ಸವ ಕಾರ್ಯಕ್ರಮ ನಂತರ ನಗರದ ಸರಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷಿ ಕಾಯ್ದೆಯ ಹೋರಾಟವನ್ನು ರಾಜಕೀಯವಾಗಿ ಬಳಕೆ ಮಾಡಲಾಗುತ್ತಿದೆ. ವಿರೋಧ ಪಕ್ಷದವರು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ದೇಶಾದ್ಯಂತ ರೈತರು ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಅನುಕೂಲಕ್ಕಾಗಿ ಕೃಷಿ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೆ, ಇದನ್ನು ವಿರೋಧ ಪಕ್ಷದವರು ವಿರೋಧ ಮಾಡಿ ದೇಶದ ಅನ್ನದಾತರಿಗೆ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ರೈತರ ಪ್ರತಿಭಟನೆಯು ಸ್ಪಾನ್ಸರ್ ಹೋರಾಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಯನ್ನು ಹತ್ತಿಕ್ಕಿದರೆ ತಕ್ಕ ಬೆಲೆ ತೆರಬೇಕಾದೀತು; ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

ಸಕ್ರಮ ಮಾಡುವ ಬಗ್ಗೆ ಚಿಂತನೆ...!

ಅಭಿವೃದ್ಧಿ ಕಾರ್ಯಗಳು ನಡೆಯಬೇಕಾದರೆ ಗಣಿಗಾರಿಕೆ, ಮರಳು ಸಾಗಾಣಿಕೆ ನಡೆಯಬೇಕು. ಆದರೆ, ಕಾನೂನು ಚೌಕಟ್ಟಿನಲ್ಲಿ ನಡೆಯಬೇಕು. ದೇಶಾದ್ಯಂತ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿ ‌ಕೂಡ ಗಣಿಗಾರಿಕೆ ಇದೆ. ಗಣಿಗಾರಿಕೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮ ಗಣಿಗಾರಿಕೆಯನ್ನು ಸಕ್ರಮ ಗಣಿಗಾರಿಕೆ ಮಾಡಲು ಸರಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಿದ್ದುಪಡಿ ಮೂಲಕ ಸಕ್ರಮ ಮಾಡಲಾಗುತ್ತದೆ. ಅದೇ ರೀತಿ ಗಣಿಗಾರಿಕೆ ನಿಯಮಗಳ ಸಡಿಲಿಕೆ ಮಾಡಲಾಗುತ್ತದೆ. ಅಕ್ರಮ ಗಣಿಗಾರಿಕೆ ಬಗ್ಗೆ ಚರ್ಚಿಸಲು 27 ಮತ್ತು 28 ರಂದು ಎಲ್ಲಾ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ‌ ಎಂದಿದ್ದಾರೆ.

ಇದನ್ನೂ ಓದಿ: Republic Day 2021: ಕೋವಿಡ್ ಹೋರಾಟದಲ್ಲಿ ಕರ್ನಾಟಕ ಇಡೀ ದೇಶಕ್ಕೇ ಮಾದರಿಯಾಗಿದೆ; ರಾಜ್ಯಪಾಲ ವಜುಭಾಯಿ ವಾಲಾ

ಯಾವುದೇ ಅಸಮಾಧಾನ ಇಲ್ಲ...!ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನ ವಿಸ್ತರಣೆ ವಿಚಾರದಲ್ಲಿ ಬಿಜೆಪಿ ಪಾಳಯದಲ್ಲಿ ಈಗ ಅಸಮಾಧಾನ ಹೊಗೆಯಾಡುತ್ತಿದೆ. ಈಗಾಗಲೇ ಕೆಲವರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಅತೃಪ್ತ ಶಾಸಕರ ಸಭೆ ಕರೆದಿದ್ದಾರೆ. ಈ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದು, ತಾನು ಯಾವುದೇ ಅಸಮಾಧಾನಗೊಂಡಿಲ್ಲ. ಎಲ್ಲಾ ಸಚಿವರಿಗೆ ಹಂಚಿ ಬಿಟ್ಟು ಉಳಿದ ಖಾತೆಯನ್ನು ತಾನು ತೆಗೆದುಕೊಳ್ಳಲು ಸಿದ್ದನಿದ್ದೇನೆ. ನನಗೆ ಅಭಿವೃದ್ಧಿ ಕಾರ್ಯ ಮಾಡಲು ಅನೇಕ ಅವಕಾಶಗಳಿವೆ‌. ಸಿಎಂ ಬಿಎಸ್ ಯಡಿಯೂರಪ್ಪ ಅವರು ಯಾವ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ನೀಡಿದರೂ ಪರವಾಗಿಲ್ಲ. ಯಾದಗಿರಿ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಿದರುರೂ ಉತ್ತಮ ಅಭಿವೃದ್ಧಿ ಮಾಡುತ್ತೇನೆ. ಹಿಂದುಳಿದ ಜಿಲ್ಲೆಯು ಯಾದಗಿರಿ ಆಗಿದ್ದು ಯಾದಗಿರಿ ಜಿಲ್ಲೆಯ ಉಸ್ತುವಾರಿ ನೀಡಿದರೆ ಹಿಂದುಳಿದ ಜಿಲ್ಲೆಯಲ್ಲಿ ಅಭಿವೃದ್ಧಿ ಪರ ಕಾರ್ಯ ಮಾಡುತ್ತೆನೆಂದು ತಮ್ಮ ಅಭಿಪ್ರಾಯ ಹೇಳಿದ್ಧಾರೆ.

ವರದಿ: ನಾಗಪ್ಪ ಮಾಲಿಪಾಟೀಲ
Published by: Vijayasarthy SN
First published: January 26, 2021, 3:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories