ಉಪಚುನಾವಣೆ ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು ಖಚಿತ: ನಳೀನ್ ಕುಮಾರ್ ಕಟೀಲ್

ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ನಾಲ್ಕು ವಿಧಾನಪರಿಷತ್ ಸ್ಥಾನಗಳ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಳೀನ್ ಕುಮಾರ್ ಕಟೀಲ್

ನಳೀನ್ ಕುಮಾರ್ ಕಟೀಲ್

  • Share this:
ಧಾರವಾಡ: ರಾಜ್ಯದಲ್ಲಿ ಎರಡು ವಿಧಾನಸಭೆಗೆ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದ್ದು, ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಗೆಲವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಪಶ್ಚಿಮ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ನಾಮಪತ್ರ‌ ಸಲ್ಲಿಕೆಯಲ್ಲಿ ಭಾಗಿಯಾದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಒಲವು ಬಿಜೆಪಿ ಪರವಾಗಿದೆ. ಮೋದಿ ಹಾಗೂ ಬಿ.ಎಸ್.ವೈ. ಆಡಳಿತದ ಸಾಧನೆ ಗೆಲುವಿಗೆ ವರದಾನವಾಗಲಿವೆ. ಬಿಜೆಪಿ ಅಲೆ ಇಲ್ಲದ ಕ್ಷೇತ್ರದ ಮತದಾರರನ್ನು ಪಕ್ಷದ ಕಡೆಗೆ ವಾಲುವಂತೆ ಮಾಡಿದೆ ಎಂದರು.

ಶಿರಾ ಮತ್ತು ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 14 ಸಾವಿರ ಮತಗಳು ಬಂದಿವೆ. ಈ ಸಾರಿ ಮುಖ್ಯಮಂತ್ರಿ ಹಾಗೂ ನಾನು ವಿಶೇಷ ಪ್ರವಾಸದ ಮೂಲಕ ಮತದರಾರ ಸೆಳೆಯುವ ಪ್ರಯತ್ನ ಮಾಡಿದ್ದಾಗಿ ತಿಳಿಸಿದರು.

ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಸ್ಥಳೀಯ ಸಂಸ್ಥೆಗಳ ಸದಸ್ಯರು ಅಲ್ಲಿನ ಆಂತರಿಕ ಕಿತ್ತಾಟದಿಂದ ಭ್ರಮನಿರಸಗೊಂಡು ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದು, ಅಲ್ಲಿ ಬಿಜೆಪಿ ಪರ ಅಲೆ ಸೃಷ್ಠಿಯಾಗಿದೆ. ಗೆಲವು ನಮ್ಮದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್‌ನವರು ವಿರೋಧ ಪಕ್ಷದಲ್ಲಿರಲು ಅಯೋಗ್ಯರು ; ಸಚಿವ ಕೆ ಎಸ್ ಈಶ್ವರಪ್ಪ

ಇದೇ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ಸೇರುವ ವದಂತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ, ಅವರು ಬಿಜೆಪಿ ಸೇರುವ ಸಮಯ ಬಂದಾಗ ನೋಡೋಣ, ಆದ್ರೆ ಈ ವಿಚಾರವಾಗಿ ನನಗಂತೂ ಸಂಕರ್ಪ ಮಾಡಿಲ್ಲ, ಇದು ಊಹಾ ಪೋಹ ಎಂದು ಸ್ಪಷ್ಟಪಡಿಸಿದರು.

ವರದಿ: ಮಂಜುನಾಥ ಯಡಳ್ಳಿ
Published by:Vijayasarthy SN
First published: