National Education Policy: ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ಜಾರಿ; ಡಿಸಿಎಂ ಅಶ್ವತ್ಥ ನಾರಾಯಣ 

ಶಿಕ್ಷಣ ನೀತಿಯನ್ನು ಅಮೂಲಾಗ್ರವಾಗಿ ಜಾರಿ ಮಾಡಲು 15 ವರ್ಷ ಕಾಲಾವಕಾಶ ಕೇಂದ್ರ ಸರಕಾರ ನೀಡಿದೆ. ಆದರೆ 10  ವರ್ಷಗಳ ಅವಧಿಯಲ್ಲಿ ಜಾರಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಎಲ್ಲಾ ಕೆಲಸಗಳನ್ನು ಕೈಗೆತ್ತಿಕೊಂಡಿದೆ. 2040ರ ಹೊತ್ತಿಗೆ ರಾಜ್ಯವೂ ಸೇರಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಿಬಿಟ್ಟಿರುತ್ತದೆ ಎಂದರು.

ಅಶ್ವಥ್ ನಾರಾಯಣ್.

ಅಶ್ವಥ್ ನಾರಾಯಣ್.

  • Share this:
ಧಾರವಾಡ(ಜು.13): 2030 ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ. ಎನ್.‌ ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಶಿಕ್ಷಣ ತಜ್ಞರೊಂದಿಗೆ ನಡೆಸಿದ ಚರ್ಚಿಸಿ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸ್ವ ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಸರಕಾರ ಅವಕಾಶ ನೀಡಲಿದೆ ಎಂದರು.

ಶಿಕ್ಷಣ ನೀತಿಯನ್ನು ಅಮೂಲಾಗ್ರವಾಗಿ ಜಾರಿ ಮಾಡಲು 15 ವರ್ಷ ಕಾಲಾವಕಾಶ ಕೇಂದ್ರ ಸರಕಾರ ನೀಡಿದೆ. ಆದರೆ 10  ವರ್ಷಗಳ ಅವಧಿಯಲ್ಲಿ ಜಾರಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಎಲ್ಲಾ ಕೆಲಸಗಳನ್ನು ಕೈಗೆತ್ತಿಕೊಂಡಿದೆ. 2040ರ ಹೊತ್ತಿಗೆ ರಾಜ್ಯವೂ ಸೇರಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಿಬಿಟ್ಟಿರುತ್ತದೆ ಎಂದರು.

ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಎಲ್ಲ ವಿಷಯಾವಾರು ಸಮಿತಿಗಳನ್ನು ರಚನೆಗಳನ್ನು ಆ ಬಗ್ಗೆ ಕಾರ್ಯ ಚೌಕಟ್ಟು ನಿಗದಿಪಡಿಸಿ ವರದಿ ನೀಡುವಂತೆ ಕೋರಲಾಗಿದೆ. ಆ ವರದಿಗಳೆಲ್ಲ ಕೈ ಸೇರಿದ ಕೂಡಲೇ ಜಾರಿಯ ಪ್ರಕ್ರಿಯೆಗಳನ್ನು ಶುರು ಮಾಡಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ:Rain Update| ಕರ್ನಾಟಕದಲ್ಲಿ ಜುಲೈ 16ರ ವರೆಗೆ ಆರೆಂಜ್ ಅಲರ್ಟ್​; ದೇಶದ ನಾನಾ ಭಾಗಗಳಲ್ಲೂ ನಡೆಯಲಿದೆ ವರುಣನ ಆರ್ಭಟ

ಶಿಕ್ಷಣ ನೀತಿ ಜಾರಿ ಮಾಡುವ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಡಿಜಿಟಲ್‌ ಕಲಿಕೆ ಮತ್ತು ಬೋಧನೆ ಅತ್ಯುತ್ತಮವಾಗಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಡಿಸಿಎಂ ಹೇಳಿದರು.

ನಾಲ್ಕು ಜಿಲ್ಲೆಗಳಿಗೆ ವಿಜ್ಞಾನ ಲ್ಯಾಬ್‌ ಕಿಟ್‌ ಗೆ ಡಿಸಿಎಂ ಹಸಿರು ನಿಶಾನೆ

ನಂತರ  ಬಳ್ಳಾರಿ, ಬೀದರ್‌, ಕಲಬುರಗಿ ಮತ್ತು ಬೆಳಗಾವಿಯ ಸರಕಾರಿ ಪ್ರೌಢಶಾಲೆಗಳಿಗೆ ಧಾರವಾಡ ವಿಶ್ವವಿದ್ಯಾಲಯದಿಂದ ವಿಜ್ಞಾನ ಉಪಕರಣಗಳ ಕಿಟ್‌ಗಳನ್ನು ಕಳಿಸಲು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹಸಿರು ನಿಶಾನೆ ತೋರಿದರು.

ಧಾರವಾಡ ವಿವಿ ವಿಶ್ವವಿದ್ಯಾಲಯದ ವಿಜ್ಞಾನ ಉಪಕರಣ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಬಳ್ಳಾರಿ ಜಿಲ್ಲೆ ಸರಕಾರಿ ಪ್ರೌಢಶಾಲೆಗಳಿಗೆ 1.11 ಕೋಟಿ ರೂ. ವೆಚ್ಚದ 199 ಲ್ಯಾಬ್‌ ಕಿಟ್‌ಗಳನ್ನು ಕಳಿಸಿದರು.

ಇದನ್ನೂ ಓದಿ:Corona 3rd Wave: ರಾಜ್ಯಕ್ಕೆ 3ನೇ ಕೊರೋನಾ ಅಲೆ ಭೀತಿ; ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚಿಸಿದ ಗೃಹ ಸಚಿವ

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಬೀದರ್‌ ಜಿಲ್ಲೆಯ ಶಾಲೆಗಳಿಗೆ 45 ಲಕ್ಷ ರೂ. ವೆಚ್ಚದಲ್ಲಿ 46 ಲ್ಯಾಬ್‌ ಕಿಟ್‌ಗಳನ್ನು ಹಾಗೂ ಬೆಳಗಾವಿ ಜಿಲ್ಲೆಯ 20 ಸರಕಾರಿ ಪ್ರೌಢಶಾಲೆಗಳಿಗೆ ಹಾಗೂ ಕಲಬುರಗಿ ವಿಭಾಗದ 10 ಸರಕಾರಿ ಪ್ರೌಢಶಾಲೆಗಳಿಗೆ 30ಲಕ್ಷ ರೂ. ವೆಚ್ಚದಲ್ಲಿ ಲ್ಯಾಬ್‌ ಕಿಟ್‌ಗಳನ್ನು ಕಳಿಸಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಇದೇ ವೇಳೆ ವಿವಿಯ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಡಿಸಿಎಂ ಪರಿಶೀಲನೆ ನಡೆಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ‌ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಎಸ್. ವಿ.ಸಂಕನೂರು ಮತ್ತಿತರರು ಇದ್ದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:Latha CG
First published: