ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅಧಿಕಾರಿಗಳ ನಿರ್ಲಕ್ಷ್ಯ; ಆಸ್ಪತ್ರೆ ಮುಂಭಾಗ ನೆಲದ ಮೇಲೆ ಮಲಗಿದ ಮಹಿಳೆಯರು!

ಶನಿವಾರ ಬೆಳಿಗ್ಗೆ ಮಹಿಳೆಯರಿಗೆ ಶಸ್ತ್ರ ಚಿಕಿತ್ಸೆ ‌ಮಾಡಲಾಗಿದೆ. ಕೋವಿಡ್ ನಿಯಮ ಪಾಲನೆ ಮಾಡಿ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ವಹಿಸಬೇಕಾಗಿತ್ತು. ಆದರೆ, ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ನಿಯಮ ಗಾಳಿಗೆ ತೂರಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರನ್ನು ಒಟ್ಟಿಗೆ ನೆಲದ ಮೇಲೆ ಮಲಗಿಸಿ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.  

ಸಂತಾನಹರಣ ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆ ಮುಂಭಾಗ ನೆಲದ ಮೇಲೆ ಮಲಗಿರುವ ಮಹಿಳೆಯರು.

ಸಂತಾನಹರಣ ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆ ಮುಂಭಾಗ ನೆಲದ ಮೇಲೆ ಮಲಗಿರುವ ಮಹಿಳೆಯರು.

  • Share this:
ಯಾದಗಿರಿ: ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರು ಬೇಡ್ ಸಿಗದೆ ಪರದಾಡುವಂತಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರು ಆಸ್ಪತ್ರೆ ಗೇಟ್ ಹಾಗೂ ಮೆಟ್ಟಿಲುಗಳ ಮೇಲೆ ಪ್ರಯಾಸಪಟ್ಟರು. ಕೋವಿಡ್ ಹಿನ್ನೆಲೆ 9 ತಿಂಗಳ ವರೆಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯವಾಗಿಲ್ಲ. ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಮಹಿಳೆಯರು ಮುಂದಾಗಿದ್ದರು ಆರೋಗ್ಯ ಇಲಾಖೆ ಕೋವಿಡ್ ಮುಂಜಾಗ್ರತೆ ವಹಿಸಿ ಶಸ್ತ್ರ ಚಿಕಿತ್ಸೆ ಮಾಡಿಲ್ಲ. ಈಗ 9 ತಿಂಗಳ ನಂತರ ಮೊದಲನೇ ಬಾರಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಂತಾನ‌ ಹರಣ ಶಸ್ತ್ರ ಚಿಕಿತ್ಸೆ ಹಮ್ಮಿಕೊಂಡಿದ್ದರು.

ಶನಿವಾರ ಆಸ್ಪತ್ರೆ ವೈದ್ಯರು 202 ಜನ ಮಹಿಳೆಯರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. 9 ತಿಂಗಳ ನಂತರ ಶಸ್ತ್ರ ಚಿಕಿತ್ಸೆ ಶಿಬಿರ ಹಮ್ಮಿಕೊಂಡ ಹಿನ್ನೆಲೆ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡು ಶನಿವಾರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.  ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನ ಮಹಿಳೆಯರು ಹಾಗೂ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಹಿಳೆಯರು ಈ ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ ಭಾಗಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡರು.

ಅಧಿಕಾರಿಗಳು ನಿಷ್ಕಾಳಜಿ...!

ಮಹಿಳೆಯರು ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಳ್ಳುವ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಎಲ್ಲರೂ ಅಗತ್ಯ ಪೂರ್ವ ಸಿದ್ದತೆ ಕೈಗೊಳ್ಳಬೇಕಾಗಿದೆ. ಸೂಕ್ತ ಬೇಡ್ ವ್ಯವಸ್ಥೆ ಹಾಗೂ 24 ಗಂಟೆ ನಿಗಾವಹಿಸಬೇಕಾಗಿತ್ತು. ಆದರೆ, ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ನ್ಯೂಸ್ 18 ಕನ್ನಡಕ್ಕೆ ಮಲ್ಲಿಕಾರ್ಜುನ  ಮಾತನಾಡಿ, ಮಹಿಳೆಯರು ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡರು. ಅವರಿಗೆ ಸೂಕ್ತ ವ್ಯವಸ್ಥೆ ಹಾಗೂ ಬೇಡ ಸೌಕರ್ಯ ‌ಕಲ್ಪಿಸಿ ನಿಗಾ ವಹಿಸಬೇಕಾದ ಅಧಿಕಾರಿಗಳು ಹಾಗೂ ವೈದ್ಯರು ನಿಷ್ಕಾಳಜಿ ತೊರಿದ್ದು, ಬಹುತೇಕ ‌ಮಹಿಳೆಯರು ಅಸ್ಪತ್ರೆ ಗೇಟ್ ಹಾಗೂ ಮೆಟ್ಟಿಲುಗಳ ಮೇಲೆ ಮಲಗಿದ್ದಾರೆ.

ಇದನ್ನು ಓದಿ: ಅವಧಿ ಪೂರ್ವದಲ್ಲಿಯೇ ತ್ರಿವಳಿ ಮಕ್ಕಳ ಜನನ; ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದ ಕಲಬುರ್ಗಿ ವೈದ್ಯರು!

ಶಸ್ತ್ರಚಿಕಿತ್ಸೆ ಬಳಿಕ ಸುಮಾರು 12 ಗಂಟೆಗಳ ಕಾಲ ನಿಗಾ ವಹಿಸಬೇಕು. ಆದರೆ, ಬಹುತೇಕ ಮಹಿಳೆಯರಿಗೆ ಶಸ್ತ್ರ ಚಿಕಿತ್ಸೆ ಮಾಡಿದ ನಂತರ ಆಸ್ಪತ್ರೆ ಗೇಟ್, ಮೆಟ್ಟಿಲುಗಳ ಮೇಲೆ ಮಲಗಿಸಿ ಆಸ್ಪತ್ರೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ ಬೆಳಿಗ್ಗೆ ಮಹಿಳೆಯರಿಗೆ ಶಸ್ತ್ರ ಚಿಕಿತ್ಸೆ ‌ಮಾಡಲಾಗಿದೆ. ಕೋವಿಡ್ ನಿಯಮ ಪಾಲನೆ ಮಾಡಿ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ವಹಿಸಬೇಕಾಗಿತ್ತು. ಆದರೆ, ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ನಿಯಮ ಗಾಳಿಗೆ ತೂರಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರನ್ನು ಒಟ್ಟಿಗೆ ನೆಲದ ಮೇಲೆ ಮಲಗಿಸಿ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

ಈ ಬಗ್ಗೆ ನ್ಯೂಸ್ 18 ಕನ್ನಡಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ ಮಾತನಾಡಿ, ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೆನೆಂದರು.
Published by:HR Ramesh
First published: