ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕು ಕೆರೂಟಗಿ ಗ್ರಾಮದವರು. ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ ಮಾಡಿರುವ ಅವರು 2012ರ ಬ್ಯಾಚ್​ನ ಐಎಎಸ್ ಅಧಿಕಾರಿ.

news18-kannada
Updated:June 30, 2020, 6:31 PM IST
ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ
ನಿತೇಶ್ ಪಾಟೀಲ್
  • Share this:
ಧಾರವಾಡ(ಜೂನ್ 30): 2012ರ ಬ್ಯಾಚ್​ನ ಐಎಎಸ್ ಅಧಿಕಾರಿ ನಿತೇಶ್ ಕಲ್ಲನಗೌಡ ಅವರು ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. 

ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್‍ಎಸ್‍ಎಲ್‍ಸಿವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್‍ಐಟಿ ಅಲಹಾಬಾದ್‍ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು.

ಕೆಲಕಾಲ ಸಾಫ್ಟ್​ವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ ಬಳಿಕ 2012ರಲ್ಲಿ ಯುಪಿಎಸ್‍ಸಿ ಯ ನಾಗರೀಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು.

ಇದನ್ನೂ ಓದಿ: ಕೊರೋನಾ ಚಿಕಿತ್ಸೆ ಬಗ್ಗೆ ವಿವರ ತಿಳಿಯುವುದು ರೋಗಿಗಳ ಹಕ್ಕು: ಸಿದ್ದರಾಮಯ್ಯ

ಪ್ರೊಬೇಷನರಿ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಹಶೀಲ್ದಾರರಾಗಿ ನಂತರ ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ(ಸಿಇಒ) ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಬಳಿಕ ವಾಣಿಜ್ಯ ತೆರಿಗೆ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯನಿರ್ವಹಿಸಿ, ಇದೀಗ ಧಾರವಾಡ ಜಿಲ್ಲಾಧಿಕಾರಿ ಹುದ್ದೆ ಸ್ವೀಕರಿಸಿದ್ದಾರೆ.ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಸರ್ವಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.
First published:June 30, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading