• Home
 • »
 • News
 • »
 • district
 • »
 • ವಿವಾದಕ್ಕೆ ಕಾರಣವಾದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಾರ್ಕಿಂಗ್ ಆದೇಶ; ಹಿಂದೂಗಳಲ್ಲದವರಿಗೆ ದೇವರಗದ್ದೆಯಲ್ಲಿ ಪಾರ್ಕಿಂಗ್ ನಿಷೇಧ

ವಿವಾದಕ್ಕೆ ಕಾರಣವಾದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಾರ್ಕಿಂಗ್ ಆದೇಶ; ಹಿಂದೂಗಳಲ್ಲದವರಿಗೆ ದೇವರಗದ್ದೆಯಲ್ಲಿ ಪಾರ್ಕಿಂಗ್ ನಿಷೇಧ

ಮಹಾಲಿಂಗೇಶ್ವರ ದೇವಾಲಯ

ಮಹಾಲಿಂಗೇಶ್ವರ ದೇವಾಲಯ

ಹತ್ತು ದಿನಗಳ ಹಿಂದೆ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಮತ್ತು ಇತರೆ ಹಿಂದೂಪರ ಸಂಘಟನೆಗಳು ಹಿಂದೂಗಳಲ್ಲದವರು ದೇವಾಲಯದ ಪಾರ್ಕಿಂಗ್ ಜಾಗವನ್ನು ಬಳಸುವುದನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದರು.

 • Share this:

  ಮುಜರಾಯಿ ಇಲಾಖೆಗೆ ಒಳಪಡುವ ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹಾಲಿಂಗೇಶ್ವರ  ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ  ಇನ್ಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್​​ಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಹಿಂದೂಗಳಲ್ಲದವರು ಅಲ್ಲಿ ಪಾರ್ಕಿಂಗ್ ಮಾಡಿದರೆ ಕಾನೂನು ರೀತಿ ಸೂಕ್ತ ಕ್ರಮ ಕೂಗೊಳ್ಳಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಆದೇಶ ಹೊರಡಿಸಿದೆ. ದೇವಾಲಯದ ಅಧಿಕಾರಿಗಳು ಈ ಬಗ್ಗೆ ನೋಟಿಸ್ ಬೋರ್ಡ್ ಹಾಕಿದ್ದಾರೆ. ಹೀಗಾಗಿ ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.


  ದೇವಾಲಯದ ಮುಖ್ಯಸ್ಥ ಕೇಶವ್ ಪ್ರಸಾದ್ ಮುಳಿಯ ಮಾತನಾಡಿ, ತಮ್ಮ ಈ ಕ್ರಮವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದರು. ಈ ನಿರ್ಧಾರವನ್ನು ದೇವಸ್ಥಾನದ ಸಮಿತಿಯಿಂದ ತೆಗೆದುಕೊಳ್ಳಲಾಗಿದೆ. ದೇವಾಲಯದ ಆವರಣವನ್ನು ನೋಡಿಕೊಳ್ಳುವ ಅಧಿಕಾರವನ್ನು ಮುಜರಾಯಿ ಇಲಾಖೆಗೆ ನೀಡಲಾಗಿದೆ. ಯಾರಾದರೂ ಪಾರ್ಕಿಂಗ್ ಮಾಡಲು ಮನವಿ ಮಾಡಿದರೆ, ಅದನ್ನು ನಾವು ಪರಿಗಣಿಸುತ್ತೇವೆ. ದೇವಾಲಯದ ಆವರಣದಲ್ಲಿ ಯಾವುದೇ ಅನಪೇಕ್ಷಿತ ಘಟನೆಗಳು ಸಂಭವಿಸದಂತೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಲಿಯಾ ನಡೆಯನ್ನು ಸಮರ್ಥಿಸಿಕೊಂಡರು.


  ಈ ಆದೇಶ ಮೀರಿ ಹಿಂಧೂ ಭಕ್ತರಲ್ಲದವರು  ವಾಹನ ನಿಲ್ಲಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ  ದೇವಸ್ಥಾನ ದ ಆಡಳಿತ ಮಂಡಳಿಯ ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ದೇವಳದ ದೇವಮಾರು ಗದ್ದೆಯಲ್ಲಿರುವ ಪಂಚಾಕ್ಷರಿ ಮಂಟಪದಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಹಿಂದೂ ಭಕ್ತಾಧಿಗಳನ್ನು ಹೊರತುಪಡಿಸಿ‌ ಇತರರು ದೇವಳದ ಗದ್ದೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.. ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ಕಾರ್ಯನಿರ್ವಹಿಸುತ್ತಿದ್ದು, ಹಿಂದೂಗಳಿಗೆ ಮೊದಲ ಪ್ರಾಶಸ್ತ್ಯ ವನ್ನು ನೀಡಬೇಕು. ಮತ್ತು ಅನ್ಯಧರ್ಮದವರಿಗೆ ದೇವಳಕ್ಕೆ ಸೇರಿದ ಜಾಗದಲ್ಲಿ ಅವಕಾಶ ನೀಡಬಾರದಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿತ್ತು. ಹಿಂದೂ ಪರ ಸಂಘಟನೆಗಳ ಮನವಿ ಆಲಿಸಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ನೇತೃತ್ವದ ಸಮಿತಿ' ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವಮಾರು ಗದ್ದೆಯಲ್ಲಿ ಹಿಂದೂಗಳು ಹೊರತು ಪಡಿಸಿ ಅನ್ಯಧರ್ಮದವರು ವಾಹನ ಪಾರ್ಕಿಂಗ್ ಮಾಡಬಾರದು' ಎಂಬ ಆದೇಶ ಹೊರಡಿಸಿದ್ದಾರೆ.


  ಇದನ್ನೂ ಓದಿ:Drugs Case: ಬೇಕಂತಲೇ ಅರೆಸ್ಟ್ ಆಗಿದ್ದ ಡ್ರಗ್ ಪೆಡ್ಲರ್ ಥಾಮಸ್ ಕಲು; ಸೆಲಬ್ರಿಟಿ ಸೋನಿಯಾ ಮನೆಯಲ್ಲಿ ಗಾಂಜಾ ಪತ್ತೆ


  ಈ ಹಿಂದೆಯೂ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳವು ದೇವಸ್ಥಾನದ ಜಾತ್ರೆಯ ಸಂಧರ್ಭದಲ್ಲಿ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಆಗ್ರಹಿಸಿತ್ತು .ಹಿಂದೂ ಸಂಘಟನೆಗಳ ಮನವಿ ಯಂತೆ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಷೇಧ ಮಾಡಿತ್ತು. ಇದಾದ ಬಳಿಕ ಈಗ ಅನ್ಯಧರ್ಮದವರಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆ ಯನ್ನೂ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿ ನಿಷೇಧಿಸಿದೆ.


  ಸದ್ಯ ಈ ಆದೇಶ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಶಾಲವಾದ ದೇವಮಾರು ಗದ್ದೆಯಲ್ಲಿ ಅನ್ಯಧರ್ಮದವರಿಗೆ ವಾಹನ ಪಾರ್ಕಿಂಗ್ ಅವಕಾಶ ನೀಡದಿರೋದನ್ನು ಹಿಂದೂ ಪರ ಸಂಘಟನೆಗಳು ಸ್ವಾಗತ ಮಾಡಿದರೆ, ಎಡ ಪಂಥೀಯರು ಮಾತ್ರ ಇದು ಅಸಹಿಷ್ಣುತೆಯ ಪರಮಾವಧಿ ಅಂತಾ ಟೀಕೆ ಮಾಡಿದ್ದಾರೆ.ವಾ ಹನದಲ್ಲೂ ಧರ್ಮ ಹುಡುಕುವ ಕೆಲಸ ಮಾಡೋದು ಸರಿ ಅಲ್ಲ ಎಂದು ವಿರೋಧಿಸಿದ್ದಾರೆ. ಈ ಹಿಂದೆಯೂ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮೀಯ ಜಿಲ್ಲಾಧಿಕಾರಿ ಹೆಸರು ಹಾಕಿದ ವಿಚಾರವೂ ಪುತ್ತೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.


  ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್,ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿ ಮಹಾಲಿಂಗೇಶ್ವರ ದೇವಸ್ಥಾನದ ಬರೋದರಿಂದ, ಹಿಂದೂ ಭಕ್ತಾಧಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ‌. ಈ ಹಿಂದೆ ಅನ್ಯಧರ್ಮದವರು ಗದ್ದೆಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಹೋಗುತ್ತಿದ್ದರಿಂದ ದೇವಳಕ್ಕೆ ಬರುವ ಭಕ್ತರಿಗೆ ತೊಂದರೆಯಾಗುತಿತ್ತು. ಮತ್ತು ಈ ಬಗ್ಗೆ ಸಾಕಷ್ಟು ದೂರುಗಳೂ ಬಂದಿರುವ ಹಿನ್ನಲೆಯಲ್ಲಿ ಈ ಆದೇಶವನ್ನು ಮಾಡಲಾಗಿದೆ ಅಂತಾ ಸ್ಪಷ್ಟ ಪಡಿಸಿದ್ದಾರೆ.‌


  ಹಿರಿಯ ಕಾಂಗ್ರೆಸ್​ ನಾಯಕಿ ಮತ್ತು ಮಾಜಿ ಶಾಸಕಿ ಶಾಕುಂತಲಾ ಶೆಟ್ಟಿ ದೇವಾಲಯದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ತೆಗೆದುಕೊಂಡಿರುವ ನಿರ್ಧಾರ ತಪ್ಪು. ಜನರು ವಿವಿಧ ಕಡೆಗಳಿಂದ ಮಹಾಲಿಂಗೇಶ್ವರ ದೇವಾಲಯಕ್ಕೆ ಬರುತ್ತಾರೆ. ಈ ರೀತಿಯ ಕ್ರಮದ ಅಗತ್ಯವಿರಲಿಲ್ಲ. ನಗರದಲ್ಲಿ ಸಾಕಷ್ಟು ಪಾರ್ಕಿಂಗ್ ಸ್ಥಳವಿಲ್ಲ. ಹೀಗಾಗಿ ಬ್ಯಾಂಕ್, ಮಾರ್ಕೆಟ್ ಹಾಗೂ ಇನ್ನಿತರೆ ಸ್ಥಳಗಳಿಗೆ ಹೋಗುವ ಜನರು ಈ ಜಾಗದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಿ ಹೋಗುತ್ತಾರೆ ಎಂದರು.


  ಇದನ್ನೂ ಓದಿ:Shruti Haasan: ಮೊದಲ ಮಾಡೆಲಿಂಗ್ ಅಸೈನ್ಮೆಂಟ್​ ಫೋಟೋ ಹಂಚಿಕೊಂಡ ಶ್ರುತಿ ಹಾಸನ್​: ಶಾಕ್ ಆದ ಅಭಿಮಾನಿಗಳು..!


  ದಕ್ಷಿಣ ಕನ್ನಡದ ಡೆಪ್ಯುಟಿ ಕಮಿಷನರ್ ಡಾ.ರಾಜೇಂದ್ರ ಕೆವಿ ಮಾತನಾಡಿ, ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು. ಈ ಪ್ರಕಟಣೆಯನ್ನು ದೇವಾಲಯದ ಅಧಿಕಾರಿಗಳು ಹಾಕಿದ್ದಾರೆ. ದೇವಾಲಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ ಮತ್ತು ದೇವಾಲಯದ ಭಕ್ತರಿಗೆ ಮಾತ್ರ ತಮ್ಮ ವಾಹನಗಳನ್ನು ಮೈದಾನದಲ್ಲಿ ನಿಲ್ಲಿಸಲು ಅವಕಾಶವಿದೆ ಎಂದು ದೇವಸ್ಥಾನದ ಅಧಿಕಾರಿಗಳು ಹಾಕಿರುವ ಸೂಚನೆಯಲ್ಲಿ ತಿಳಿಸಲಾಗಿದೆ.


  ಹತ್ತು ದಿನಗಳ ಹಿಂದೆ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಮತ್ತು ಇತರೆ ಹಿಂದೂಪರ ಸಂಘಟನೆಗಳು ಹಿಂದೂಗಳಲ್ಲದವರು ದೇವಾಲಯದ ಪಾರ್ಕಿಂಗ್ ಜಾಗವನ್ನು ಬಳಸುವುದನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ.


  ಒಟ್ಟಿನಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ ಸದ್ಯ ಅನ್ಯಧರ್ಮದವರಿಗೆ ಪಾರ್ಕಿಂಗ್ ನಿಷೇಧ ವಿಚಾರ ಚರ್ಚೆಯನ್ನು ಹುಟ್ಟು ಹಾಕಿದೆ. ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಆದೇಶ ಇನ್ಯಾವ ರೂಪವನ್ನು ಪಡೆಯುತ್ತದೆ ಎಂಬುವುದನ್ನು ಕಾದುನೋಡಬೇಕಾಗಿದೆ.


  (ವರದಿ:ಅಜಿತ್ ಪುತ್ತೂರು)

  Published by:Latha CG
  First published: