ಈಶಾನ್ಯ ವಲಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ; ಟಿಕೆಟ್ ಸಿಗದ್ದಕ್ಕೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಂಬಲಗಿ ರಾಜೀನಾಮೆ

ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿಯ ಶಿಕ್ಷಕರ ಕ್ಷೇತ್ರಕ್ಕೂ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೆ. ಆದರೆ, ಜೆಡಿಎಸ್ ವರಿಷ್ಠರು ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ನಾಯಕರ ವರ್ತನೆಗೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ

ಎಂ.ಬಿ.ಅಂಬಲಗಿ

ಎಂ.ಬಿ.ಅಂಬಲಗಿ

 • Share this:
  ಕಲಬುರ್ಗಿ(ಅಕ್ಟೋಬರ್​. 04): ಈಶಾನ್ಯ ವಲಯ ಶಿಕ್ಷಕರ ಪದವೀಧರ ಕ್ಷೇತ್ರಕ್ಕೆ ಇದೇ ತಿಂಗಳು ಚುನಾವಣೆ ನಡೆಯಲಿದೆ. ಇದರ ಬೆನ್ನ ಹಿಂದೆಯೆ ಕಲಬುರ್ಗಿ ವಿಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಗಳಲ್ಲಿ ಚುನಾವಣಾ ರಾಜಕೀಯ ಬಿರುಸುಗೊಂಡಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಎಂ.ಬಿ.ಅಂಬಲಗಿ ರಾಜೀನಾಮೆ ನೀಡಿದ್ದಾರೆ. ಈಶಾನ್ಯ ವಲಯ ವಿಧಾನ ಪರಿಷತ್ ಸ್ಥಾನಕ್ಕೆ ಅಕ್ಟೋಬರ್ 28 ಕ್ಕೆ ಮತದಾನ ನಡೆಯಲಿದೆ. ಈಗಾಗಲೇ ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬಹುತೇಕ ಅಂತಿಮಗೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಶಶೀಲ್ ನಮೋಶಿ ಹೆಸರು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ ಅಖಾಡಕ್ಕಿಳಿಯೋದು ಬಹುತೇಕ ಖಚಿತವಾಗಿದೆ. ಜೆಡಿಎಸ್ ನಿಂದ ತಿಮ್ಮಯ್ಯ ಪುರ್ಲೆ ಹೆಸರು ಅಂತಿಮಗೊಳಿಸಲಾಗಿದೆ. ಇದರಿಂದಾಗಿ ಜೆಡಿಎಸ್ ನಲ್ಲಿ ಅಸಮಾಧಾನದ ಹೊಗೆ ಎದ್ದಿದೆ.

  ಈಶಾನ್ಯ ವಲಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಂಬಲಗಿ ತಮಗೆ ಟಿಕೆಟ್ ನೀಡಿಲ್ಲವೆಂಬ ಬೇಸರದಿಂದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅಂಬಲಗಿ. ಆದರೆ ಜೆಡಿಎಸ್ ನಿಂದ ಈ ಬಾರಿ ಟಿಕೇಟ್ ನಿರಾಕರಣೆ ಮಾಡಲಾಗಿದೆ. ಇದರಿಂದ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕಲಬುರ್ಗಿಯಲ್ಲಿ ಅಂಬಲಗಿ ತಿಳಿಸಿದ್ದಾರೆ.

  ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿಯ ಶಿಕ್ಷಕರ ಕ್ಷೇತ್ರಕ್ಕೂ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೆ. ಆದರೆ, ಜೆಡಿಎಸ್ ವರಿಷ್ಠರು ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ನಾಯಕರ ವರ್ತನೆಗೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಕುರಿತು ಬೆಂಬಲಿಗರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಎಂ.ಬಿ.ಅಂಬಲಗಿ ಹೇಳಿಕೆ ನೀಡಿದ್ದಾರೆ.

  ಶಿಕ್ಷಕರ ಪರವಾಗಿ ಧ್ವನಿ ಎತ್ತದವರನ್ನು ಸೋಲಿಸಿ ಎಂದ ಕರವೇ

  ಈಶಾನ್ಯ ವಲಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ದಿನದಿಂದ ದಿನಕ್ಕೆ ಕಾವೇರಲಾರಂಭಿಸಿದೆ. ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ ಯಾವೊಬ್ಬ ಸದಸ್ಯರಿಂದಲೂ ಉತ್ತಮ ಕೆಲಸಗಳಾಗಿಲ್ಲ ಎಂದು ಕರವೇ ಶಿವರಾಮೇಗೌಡ ಬಣದ ರಾಜ್ಯ ಸಂಚಾಲಕ ಮಂಜುನಾಥ ನಾಲವಾರಕರ ಆರೋಪಿಸಿದ್ದಾರೆ.

  ಇದನ್ನೂ ಓದಿ : ಜೆಡಿಎಸ್​ನವರು ಇನ್ನೊಬ್ಬರ ಹೆಗಲ ಮೇಲೆ ಕುತ್ಕೊಂಡು ಅಧಿಕಾರಕ್ಕೆ ಬರೋರು; ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

  ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಶಶೀಲ್ ನಮೋಶಿ ಮೂರು ಬಾರಿ ಆಯ್ಕೆಯಾಗಿದ್ದರು. ಶರಣಪ್ಪ ಮಟ್ಟೂರ ಕಳೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಈ ಇಬ್ಬರೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿಲ್ಲ. ಈ ಇಬ್ಬರನ್ನು ಹೊರತುಪಡಿಸಿ ಬೇರೊಬ್ಬರನ್ನು ಆಯ್ಕೆ ಮಾಡುವಂತೆ ಕರೆ ನೀಡಿದ್ದಾರೆ.

  ಶಿಕ್ಷಕರ ಪರವಾಗಿ ಧ್ವನಿ ಎತ್ತುವ ಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ಶಿಕ್ಷಕರ ಪರ ದನಿಯೆತ್ತದ ಇಬ್ಬರಿಗೂ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆಯೂ ಕರೆ ನೀಡಿದ್ದಾರೆ.
  Published by:G Hareeshkumar
  First published: