ಹುಬ್ಬಳ್ಳಿಯಿಂದ ಉಳವಿ ಮತ್ತು ಧರ್ಮಸ್ಥಳಕ್ಕೆ ನೇರ ಬಸ್ ಸಂಚಾರ ಪುನರಾರಂಭ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್​​

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್​​

ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಉಳವಿಗೆ ಒಂದು ಬಸ್ ಹಾಗೂ ಧರ್ಮಸ್ಥಳಕ್ಕೆ ಎರಡು ಬಸ್​ಗಳನ್ನು ಪ್ರಾರಂಭಿಸಲಾಗಿದೆ. ಈ ಬಸ್​​ಗಳು ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ

  • Share this:

ಹುಬ್ಬಳ್ಳಿ(ಆಗಸ್ಟ್​​. 20): ಪ್ರಯಾಣಿಕರ ಬೇಡಿಕೆಯ ಮೇರೆಗೆ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ಧಾರ್ಮಿಕ ಕ್ಷೇತ್ರಗಳಿಗೆ ಸಂಚರಿಸುವ ಬಸ್​ಗಳ ಸೇವೆಯನ್ನು ಮತ್ತೆ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಉಳವಿಗೆ ಒಂದು ಬಸ್ ಹಾಗೂ ಧರ್ಮಸ್ಥಳಕ್ಕೆ ಎರಡು ಬಸ್​ಗಳನ್ನು ಪ್ರಾರಂಭಿಸಲಾಗಿದೆ. ಈ ಬಸ್​​ಗಳು ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.


ಉಳವಿಗೆ ಹೋಗುವ ಬಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 8 ಗಂಟೆಗೆ ಹೊರಡುತ್ತದೆ. ಧಾರವಾಡ, ಹಳಿಯಾಳ, ದಾಂಡೇಲಿ, ಜೋಯಿಡಾ, ಕುಂಬಾರವಾಡ ಮಾರ್ಗವಾಗಿ ಮಧ್ಯಾಹ್ನ 1 ಗಂಟೆಗೆ ಉಳವಿ ತಲುಪುತ್ತದೆ. ಉಳವಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ಅದೇ ಮಾರ್ಗದಲ್ಲಿ ಸಂಜೆ 6.30 ಹುಬ್ಬಳ್ಳಿಗೆ ತಲುಪುತ್ತದೆ.


ಧರ್ಮಸ್ಥಳಕ್ಕೆ  ಹೋಗಲು ಒಂದು ಬಸ್ ಅಂಕೋಲಾ ಮಾರ್ಗವಾಗಿ ಮತ್ತು ರಾತ್ರಿ ಒಂದು ಬಸ್​ ಶಿರಸಿ ಮಾರ್ಗವಾಗಿ ತೆರಳಲಿವೆ‌. ಒಟ್ಟು ಎರಡು ಬಸ್​ಗಳು ಹುಬ್ಬಳ್ಳಿಯಿಂದ ಹೊರಡುತ್ತವೆ. ಹುಬ್ಬಳಿಯಿಂದ ಬೆಳಿಗ್ಗೆ 7 ಗಂಟೆಗೆ  ಹೊರಡುವ ಬಸ್​ ಯಲ್ಲಾಪುರ, ಅಂಕೋಲಾ, ಕುಮಟಾ ಉಡುಪಿ ಮಾರ್ಗವಾಗಿ ಸಂಜೆ 6. 30ಕ್ಕೆ ಧರ್ಮಸ್ಥಳ ತಲುಪುತ್ತದೆ. ಮರುದಿನ ಬೆಳಿಗ್ಗೆ 5 .30ಕ್ಕೆ ಧರ್ಮಸ್ಥಳದಿಂದ ಹೊರಟು ಸಂಜೆ 4 .30ಕ್ಕೆ ಹುಬ್ಬಳ್ಳಿ ತಲುಪುತ್ತದೆ.


ಸಂಜೆ 6. 15ಕ್ಕೆ ಹುಬ್ಬಳ್ಳಿಯಿಂದ ಹೊರಡುವ ಬಸ್​ ಮುಂಡಗೋಡ, ಶಿರಸಿ, ಕುಮಟಾ, ಉಡುಪಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 5. 30ಕ್ಕೆ ಧರ್ಮಸ್ಥಳ ತಲುಪುತ್ತದೆ. ಧರ್ಮಸ್ಥಳದಿಂದ ಸಂಜೆ 6. 15ಕ್ಕೆ ಹೊರಟು ಮರುದಿನ ಬೆಳಿಗ್ಗೆ 5. 30ಕ್ಕೆ ಹುಬ್ಬಳ್ಳಿ ತಲುಪುತ್ತದೆ.


ಇದನ್ನೂ ಓದಿ : ಹಾವೇರಿ - ಗಣೇಶೋತ್ಸವ ಹಾಗೂ ಮೊಹರಂ ಹಬ್ಬಗಳನ್ನು ಅತ್ಯಂತ ಸರಳವಾಗಿ ಆಚರಿಸಿ : ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಸಲಹೆ


ಸಾರ್ವಜನಿಕರು ಸದರಿ ಬಸ್​ಗಳ ಸದುಪಯೋಗ ಪಡೆದುಕೊಳ್ಳಲು ಕೋರಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ ದಿನಗಳಲ್ಲಿ ದೂರ ಮಾರ್ಗದ ಬಸ್​ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ನಿನ್ನೆ253 ಕೊರೋನಾ ವೈರಸ್​  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 8384 ಕ್ಕೆ ಏರಿದೆ. ಇದುವರೆಗೆ 5721 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2405 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 253 ಜನ ಮೃತಪಟ್ಟಿದ್ದಾರೆ.

First published: