• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಬೆಂಗಳೂರಿಂದ ಕೇರಳಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಅಪಘಾತ: ಚಾಲಕ ಸಾವು, 15 ಮಂದಿಗೆ ಗಾಯ

ಬೆಂಗಳೂರಿಂದ ಕೇರಳಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಅಪಘಾತ: ಚಾಲಕ ಸಾವು, 15 ಮಂದಿಗೆ ಗಾಯ

ಅಪಘಾತಕ್ಕೀಡಾದ ಬಸ್​

ಅಪಘಾತಕ್ಕೀಡಾದ ಬಸ್​

ನಸುಕಿನ ವೇಳೆ ಮಳೆ ಸುರಿಯುತ್ತಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್​ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

  • Share this:

ಬೆಂಗಳೂರಿನಿಂದ ಕೇರಳದ ಕನ್ನೂರು ಜಿಲ್ಲೆಗೆ ಹೊರಟ್ಟಿದ್ದ ಸರ್ಕಾರಿ ಬಸ್​ ಕರ್ನಾಟಕ-ಕೇರಳ ಗಡಿಯಲ್ಲಿ ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15 ಪ್ರಯಾಣಿಕರಿಗೆ ಗಾಯಗಳಾಗಿವೆ. ನಸುಕಿನ 4:45ರ ಸಮಯದಲ್ಲಿ ಚಾಲಕನ ನಿಯಂತ್ರ ತಪ್ಪಿ ಬಸ್​​​ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್​ನಲ್ಲಿ ಒಟ್ಟು 20 ಪ್ರಯಾಣಿಕರಿದ್ದರು. 15 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬಸ್​ ಚಾಲಕ ಅಪಘಾತಕ್ಕೆ ಬಲಿಯಾಗಿದ್ದಾರೆ. ಪೆರುಂಬೋಡಿ ಚೆಕ್​​ ಪೋಸ್ಟ್​ ಸಮೀಪ ಅಪಘಾತ ಸಂಭವಿಸಿದೆ.  


ಬಸ್​ ನಿರ್ವಾಹಕ ಸೇರಿದಂತೆ 15 ಮಂದಿ ಗಾಯಾಳುಗಳನ್ನು ವೀರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವೋಲ್ವೋ ಬಸ್​ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸ್ವಾಮಿ ಪ್ರಾಣ ಬಿಟ್ಟಿದ್ದಾರೆ ಎಂದು ವಿರಾಜಪೇಟೆ ಇನ್ಸ್​​ಪೆಕ್ಟರ್​ ಬಿ.ಎಸ್​.ಶ್ರೀಧರ್​ ತಿಳಿಸಿದರು.


ನಸುಕಿನ ವೇಳೆ ಮಳೆ ಸುರಿಯುತ್ತಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್​ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್​ನಲ್ಲಿ ಸಿಲಿಕಿದ್ದವರನ್ನು ಸ್ಥಳೀಯರು ಹೊರಕ್ಕೆ ತೆಗೆದಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಸಕಾಲಕ್ಕೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಬಸನ್ನು 2 ಕ್ರೇನ್​ಗಳ ಮೂಲಕ ಪಕ್ಕಕ್ಕೆ ಸರಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕರ್ನಾಟಕ ಹಾಗೂ ಕೇರಳ ಅಗ್ನಿಶಾಮಕ ದಳಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.


ಇದನ್ನೂ ಓದಿ: Darshan vs Indrajit: ದರ್ಶನ್ ಬೆಂಬಲಿಗರು ಕಾಲ್ ಮಾಡಿ ಅಶ್ಲೀಲವಾಗಿ ನಿಂದಿಸುತ್ತಿದ್ದಾರೆ: ಇಂದ್ರಜಿತ್ ಆರೋಪ


2020ರ ಫೆಬ್ರವರಿಯಲ್ಲಿ ಎರ್ನಾಕುಲಂನಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್​ ಅಪಘಾತಕ್ಕೀಡಾಗಿ 19 ಮಂದಿ ಪ್ರಯಾಣಿಕರು ದಾರುಣ ಅಂತ್ಯ ಕಂಡಿದ್ದರು. ಅಂದು ಸಹ ಸರ್ಕಾರಿ ವೋಲ್ವೋ ಬಸ್ಸೇ ದುರಂತಕ್ಕೀಡಾಗಿತ್ತು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

Published by:Kavya V
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು