ಲಾಕ್​ಡೌನ್​ನಲ್ಲೂ ಧರ್ಮಸ್ಥಳ-ಕುಕ್ಕೆ ಸುಬ್ರಮಣ್ಯಕ್ಕೆ ಭಕ್ತರಿಗೆ ನಿಯಮ ಮೀರಿ ಅವಕಾಶ; ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ದೇವಾಲಯಗಳಿಗೆ ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೋಲೀಸರು ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಆದರೂ, ಭಕ್ತಾಧಿಗಳು ಕಳ್ಳ ಮಾರ್ಗದ ಮೂಲಕವೂ ದೇವಸ್ಥಾನದ ರಥಬೀದಿಗೆ ಆಗಮಿಸುತ್ತಿದ್ದು, ಇವರನ್ನು ನಿಯಂತ್ರಿಸುವುದೇ ಕಷ್ಟಸಾಧ್ಯವಾಗುತ್ತಿದೆ.

ದೇವಾಲಯಗಳಿಗೆ ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೋಲೀಸರು ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಆದರೂ, ಭಕ್ತಾಧಿಗಳು ಕಳ್ಳ ಮಾರ್ಗದ ಮೂಲಕವೂ ದೇವಸ್ಥಾನದ ರಥಬೀದಿಗೆ ಆಗಮಿಸುತ್ತಿದ್ದು, ಇವರನ್ನು ನಿಯಂತ್ರಿಸುವುದೇ ಕಷ್ಟಸಾಧ್ಯವಾಗುತ್ತಿದೆ.

ದೇವಾಲಯಗಳಿಗೆ ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೋಲೀಸರು ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಆದರೂ, ಭಕ್ತಾಧಿಗಳು ಕಳ್ಳ ಮಾರ್ಗದ ಮೂಲಕವೂ ದೇವಸ್ಥಾನದ ರಥಬೀದಿಗೆ ಆಗಮಿಸುತ್ತಿದ್ದು, ಇವರನ್ನು ನಿಯಂತ್ರಿಸುವುದೇ ಕಷ್ಟಸಾಧ್ಯವಾಗುತ್ತಿದೆ.

 • Share this:
  ಮಂಗಳೂರು (ಜೂನ್ 19) ದಕ್ಷಿಣಕನ್ನಡ ಮಂಗಳೂರು ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ‌. ಜಿಲ್ಲೆಯಲ್ಲಿ ಪ್ರತಿನಿತ್ಯ 500 ರಷ್ಟು ಕೊರೊನಾ ಪಾಸಿಟೀವ್ ಪ್ರಕರಣಗಳು ವರದಿಯಾಗುತ್ತಿರುವುದು ಜಿಲ್ಲಾಡಳಿತಕ್ಕೆ ಲಾಕ್​ಡೌನ್ ನಿಯಮದಲ್ಲಿ ಸಡಿಲಿಕೆ ಮಾಡುವುದಕ್ಕೆ ಅಡ್ಡಿಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿರುವ 17 ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಮಣ್ಯಕ್ಕೆ ಭಕ್ತರ ಎಂಟ್ರಿಗೂ ಅವಕಾಶ ನಿರಾಕರಿಸಲಾಗಿದೆ. ಆದರೂ, ದೇವಾಲಯದವರು ನಿಯಮ ಮೀರಿ ಭಕ್ತಾಧಿಗಳಿಗೆ ಅವಕಾಶ ನೀಡುತ್ತಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪರಿಣಾಮ ಇದರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

  ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ,ಕೊಯ್ಯೂರು, ಮಿತ್ತಬಾಗಿಲು,ಮಾಲಾರಿ ,ನೆರಿಯ,ಲಾಯಿಲಾ, ಉಜಿರೆ,ಚಾರ್ಮಾಡಿ , ಸುಳ್ಯ ತಾಲೂಕಿನ ಅಮರ ಮುಡ್ನೂರು, ಐವರ್ನಾಡು, ಕೊಲ್ಲಮೊಗ್ರು, ಅರಂತೋಡು. ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಸವಣೂರು ಹೀಗೆ ಹದಿನೇಳು ಗ್ರಾಮಗಳಲ್ಲಿ ಸಂಪೂರ್ಣ ಸೀಲ್ ಡೌನ್ ನಿಯಮ ಜಾರಿಯಲ್ಲಿದೆ.

  ಆದರೆ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಿರುವ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಕೂಡಾ ಸೀಡ್ ಜಾರಿಯಲ್ಲಿದೆ. ಆದರೆ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಪೋಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಲಾಕ್ ಡೌನ್ ಸಡಿಲಿಕೆ ಮಾಡಿರುವ ಕಾರಣ ಭಕ್ತಾಧಿಗಳ ತಂಡ ಇದೀಗ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸುತ್ತಿದೆ.

  ಹೀಗಾಗಿ ದೇವಾಲಯಗಳಿಗೆ ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೋಲೀಸರು ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಆದರೂ, ಭಕ್ತಾಧಿಗಳು ಕಳ್ಳ ಮಾರ್ಗದ ಮೂಲಕವೂ ದೇವಸ್ಥಾನದ ರಥಬೀದಿಗೆ ಆಗಮಿಸುತ್ತಿದ್ದು, ಇವರನ್ನು ನಿಯಂತ್ರಿಸುವುದೇ ಕಷ್ಟಸಾಧ್ಯವಾಗುತ್ತಿದೆ. ಕುಕ್ಕೆ ಕ್ಷೇತ್ರಕ್ಕೆ ಭಕ್ತರ ಭೇಟಿಗೆ ನಿಶೇಧವಿದ್ದರೂ, ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸುಬ್ರಹ್ಮಣ್ಯ ಕ್ಕೂ ಬರುತ್ತಿರುವುದು ಸ್ಥಳೀಯ ಪಂಚಾಯತ್ ಹಾಗೂ ಪೋಲೀಸರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಪೋಲೀಸರು ಭಕ್ತಾಧಿಗಳ ವಾಹನಕ್ಕೆ ದಂಡ ವಿಧಿಸಿ‌ ಕಳುಹಿಸುತ್ತಿದ್ದರೂ, ದಿನಕ್ಕೆ ನೂರಾರು‌ ವಾಹನಗಳು ಬರುತ್ತಿರುವುದು ಸೀಲ್ ಡೌನ್ ನಿಯಮ ಪಾಲನೆಗೂ ಕಷ್ಟವಾಗುತ್ತಿದೆ.

  ಇದನ್ನೂ ಓದಿ: Swiss Bank: ಸ್ವಿಸ್ ಬ್ಯಾಂಕ್​ನಲ್ಲಿನ ಭಾರತೀಯರ ಠೇವಣಿ 20,700 ಕೋಟಿಗೆ ಏರಿಕೆ; ಕಳೆದ 13 ವರ್ಷದಲ್ಲೇ ಅತಿ ಹೆಚ್ಚು!

  ಈ ಬಗ್ಗೆ ಇಂದು ಖಡಕ್ ಸೂಚನೆ ನೀಡಿ ಧರ್ಮಸ್ಥಳ ಸೇರಿದಂತೆ ಎಲ್ಲಾ ದೇವಸ್ಥಾನಗಳಿಗೆ ನೊಟೀಸ್​ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಲಾಕ್ ಡೌನ್ ಇದ್ದರೂ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿದ್ದ ದೇವಸ್ಥಾನದ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ. ಕಡ್ಡಾಯವಾಗಿ ದರ್ಶನ ವ್ಯವಸ್ಥೆ ಯನ್ನು ಸ್ಥಗಿತಗೊಳಿಸುವಂತೆ ಹಾಗೂ ನೀಡಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ಭಕ್ತರ ವಾಹನ ಸೀಝ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಲಾಗಿದೆ.

  ಇದನ್ನೂ ಓದಿ: Crime News| ಸೋಷಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿ ಕೊಲೆಯಾದ ವ್ಯಕ್ತಿ

  ಧರ್ಮಸ್ಥಳ,ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಗಳಲ್ಲಿ ಅಲ್ಲಲ್ಲಿ ಬ್ಯಾರಿಕೇಡ್ ಹಾಕಲು ಪೆರಿಯಶಾಂತಿ, ಚಾರ್ಮಾಡಿ ಹಾಗೂ ಉಜಿರೆ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ಕಠಿಣಗೊಳಿಸಲು ಪೊಲೀಸರಗೆ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: