ಡ್ರಗ್ಸ್ ಜಾಲದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳಲಿ : ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿಯ 25 ಜನ ಸಂಸದರು ಇದ್ರು ಯಾರಿಗೂ ಕೇಂದ್ರ ಸರ್ಕಾರವನ್ನ ಕೇಳುವುದಕ್ಕೆ ಧೈರ್ಯವಿಲ್ಲ. ಕಳೆದ ವರ್ಷ ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ, ಈವರೆಗೂ ಪರಿಹಾರ ನೀಡಿಲ್ಲ

news18-kannada
Updated:September 14, 2020, 3:13 PM IST
ಡ್ರಗ್ಸ್ ಜಾಲದಲ್ಲಿ ಯಾರೇ ರಾಜಕೀಯ ನಾಯಕರು ಇದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳಲಿ : ಸಿದ್ದರಾಮಯ್ಯ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
  • Share this:
ಹುಬ್ಬಳ್ಳಿ(ಸೆಪ್ಟೆಂಬರ್​. 14): ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಜಾಲದಲ್ಲಿ ದೊಡ್ಡವರು ಸಣ್ಣವರು ಎನ್ನುವುದು ಬೇಡ. ಯಾರೇ ರಾಜಕೀಯ ನಾಯಕರು ಇದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳಲಿ. ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ದ ಸಾಕ್ಷ್ಯ ಇದ್ರೆ ಗಲ್ಲಿಗೆ ಏರಿಸಲಿ ಅಂತಾ ಹೇಳಿದ್ದಾರೆ. ಅವರ ಆಸ್ತಿಯನ್ನೆಲ್ಲಾ ಮುಟ್ಟುಗೋಲು ಹಾಕಿಕೊಳ್ಳಲಿ ಅಂತಾ ಹೇಳಿದ್ದಾರೆ. ತನಿಖೆ ಮಾಡುವುದು ಬಿಟ್ಟು ರಾಜಕೀಯವಾಗಿ ಅವರನ್ನು ಮುಗಿಸಲು ಸುಮ್ಮನೆ ಆರೋಪ ಮಾಡಬಾರದು. ಸಾಕ್ಷ್ಯ ಸಿಕ್ಕರೆ ಕ್ರಮ ಕೈಗೊಳ್ಳಲಿ. ಪ್ರಶಾಂತ್​ ಸಂಬರಗಿ ಹೇಳಿದರು ಅಂತಾ ತನಿಖೆ ಮಾಡುವುದಕ್ಕೆ ಆಗುತ್ತಾ. ಸಾಕ್ಷ್ಯ ಇದ್ರೆ ಯಾರನ್ನಾದರು ತನಿಖೆ ಮಾಡಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಧಾರವಾಡದಲ್ಲಿ ಜಿಲ್ಲಾ ಪಂಚಾಯತ್​​ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರನಿಗೆ ನೋಟಿಸ್ ಜಾರಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅನಗತ್ಯವಾಗಿ ಸಿಬಿಐನವರು ವಿಚಾರಣೆ ಮಾಡುತ್ತಿದ್ದಾರೆ. ತನಿಖೆ ಮಾಡಲಿ ಆದರೆ, ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ಕೇಂದ್ರ ಸರ್ಕಾರ ಬರ -ನೆರೆ ಪರಿಹಾರ ಇನ್ನೂ ಕೊಟ್ಟಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿಯ 25 ಜನ ಸಂಸದರು ಇದ್ರು ಯಾರಿಗೂ ಕೇಂದ್ರ ಸರ್ಕಾರವನ್ನ ಕೇಳುವುದಕ್ಕೆ ಧೈರ್ಯವಿಲ್ಲ. ಕಳೆದ ವರ್ಷ ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ, ಈವರೆಗೂ ಪರಿಹಾರ ನೀಡಿಲ್ಲ. ಮನೆ ಬಿದ್ದವರಿಗೆ ಪರಿಹಾರ ಇನ್ನೂ ಸಿಕ್ಕಿಲ್ಲ. ಆನೆ ಹೊಟ್ಟಿಗೆ ಮೂರು ಕಾಸು ಅಲ್ಲ ಆರು ಕಾಸಿನ ಮಜ್ಜಿಗೆ ನೀಡಿದಂತೆ ಪರಿಹಾರ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸದರು.

ಇದನ್ನೂ ಓದಿ : ರಾಜಸ್ಥಾನದಿಂದ ಬಾಂಬೆಗೆ, ಅಲ್ಲಿಂದ ಮಂಗಳೂರಿಗೆ; ಮಾನಸಿಕ ಅಸ್ವಸ್ಥನ ರೋಚಕ ಕಥೆ

ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಚರ್ಚೆ ನಡೆಸುತ್ತೇವೆ.‌ ಮೂರು ವಾರಗಳ ಕಾಲ ಅಧಿವೇಶನ ನಡೆಸಲಿ ಅಂತಾ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವೆ. ನಾಲ್ಕು ಜನರ ವಿರುದ್ದ ಗೋಲಿಬಾರ್ ಮಾಡಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸತ್ಯ. ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪ್ರಕರಣದಲ್ಲಿ ನವೀನ್‌‌ನನ್ನು ತಕ್ಷಣ ಬಂಧನ ಮಾಡಿದ್ರೆ ಬೆಂಕಿ ಹಚ್ಚುತ್ತಿರಲಿಲ್ಲ. ಬೆಂಕಿ ಹಚ್ಚುವುದು ಕಾನೂನು ಬಾಹಿರ. ನಾನು ಸಹ ಬೆಂಕಿ ಹಾಕಿರುವುದನ್ನು ಖಂಡಿಸುತ್ತೇನೆ ಎಂದರು.

ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಯಾರನ್ನಾದರು ಸಿಎಂ ಮಾಡಿಕೊಳ್ಳಲಿ. ಸಿಎಂ ಬಿಎಸ್‌ವೈ- ಕುಮಾರಸ್ವಾಮಿ ಏನು ಮಾತನಾಡಿಕೊಂಡಿದ್ದಾರೆ ಅಂತಾ ನನಗೆ ಗೊತ್ತಿಲ್ಲ. ಜೆಡಿಎಸ್ ನವರಿಗೆ ಸ್ಪಷ್ಟವಾದ ನಿಲುವಿಲ್ಲ. ಅವರು ಯಾವಾಗ ಬೇಕೋ ಅವಾಗ ಯಾರನ್ನಾದರು ತಬ್ಬಿಕೊಳ್ಳುತ್ತಾರೆ. ಸದ್ಯ ರಾಜ್ಯವಂತೂ ದಿವಾಳಿ ಆಗಿ ಹೋಗಿದೆ ಎಂದವರು ಕಿಡಿ ಕಾರಿದ್ದಾರೆ.
Published by: G Hareeshkumar
First published: September 14, 2020, 2:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading