ಚಿಕ್ಕಬಳ್ಳಾಪುರದಲ್ಲಿ SSLC ಪರೀಕ್ಷೆಗೆ ಸಕಲ ಸಿದ್ಧತೆ: ಸಿಇಓ ಬಿ. ಫೌಜಿಯಾ ತರನ್ನುಮ್

ಜೂನ್ 25 ರಂದು ದ್ವಿತಿಯ ಭಾಷೆ, 27 ರಂದು ಗಣಿತ, 29 ರಂದು ವಿಜ್ಞಾನ, ಜುಲೈ 1 ರಂದು ಸಮಾಜ ವಿಜ್ಞಾನ 2 ರಂದು ಪ್ರಥಮ ಭಾಷೆ ಹಾಗೂ 3 ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ.

ಫೌಜಿಯಾ ತರನ್ನುಮ್

ಫೌಜಿಯಾ ತರನ್ನುಮ್

  • Share this:
ಚಿಕ್ಕಬಳ್ಳಾಪುರ: ಕೋವಿಡ್-19 ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ದತೆ ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ನಿರ್ಭಯವಾಗಿ ಪರೀಕ್ಷೆ ಬರೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಿದ್ದತೆ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿದ ಫೌಝಿಯ ತರನ್ನುಮ್, ಜಿಲ್ಲೆಯ 111 ಸರ್ಕಾರಿ ಶಾಲೆಗಳು, 45 ಅನುದಾನಿತ, 117 ಅನುದಾನ ರಹಿತ, 13 ವಸತಿ ಶಾಲೆಗಳು ಸೇರಿದಂತೆ ಒಟ್ಟು 286 ಶಾಲೆಗಳಿಂದ 15,476 ವಿದ್ಯಾರ್ಥಿಗಳು, 64 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ  ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಬೆಳಗ್ಗೆ 8:30 ಘಂಟೆಗೆ ಪರಿಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಬೆಳಗ್ಗೆ 10:30 ರಿಂದ 1:30 ರವರೆಗೆ ಪರೀಕ್ಷೆ ನಡೆಯುತ್ತದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ 64 ಪರೀಕ್ಷಾ ಕೇಂದ್ರಗಳಿಗೆ 64 ಆರೋಗ್ಯಾ ಇಲಾಖೆ ಸಿಬ್ಬಂದಿ, 134 ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ 64 ಜನ ಆಶಾ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ಕೊಠಡಿಗಳನ್ನು ಈಗಾಗಲೇ ಸ್ವಚ್ಚಗೊಳಿಸಲಾಗುತ್ತಿದ್ದು ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ 2 ಮಾಸ್ಕ್ ನೀಡಲಾಗುತ್ತಿದೆ. ಎಲ್ಲಾ ವಿದ್ಯಾರ್ಥಿಗಳು ಮುಖಗವಸು ಹಾಕಿಯೇ ಪರಿಕ್ಷೆ ಬರೆಯಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ಜನರು ಜಾಗೃತರಾದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಜಗದೀಶ್ ಶೆಟ್ಟರ್

ಪರೀಕ್ಷೆ ಕೇಂದ್ರಗಳಿಂದ 200 ಮೀಟರ್​ವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್​ಗಳನ್ನು ಅಳವಡಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನಲ್ಲಿ 5 ಬಸ್​ಗಳನ್ನು ಮೀಸಲಿರಿಸಲಾಗಿದೆ. 128 ಸರ್ಕಾರಿ ವ್ಯವಸ್ಥೆಯ ಸಾರಿಗೆ ರೂಟ್‍ಗಳನ್ನು ಮಾಡಲಾಗಿದೆ. ಒಂದು ವೇಳೆ ಬಸ್ ವ್ಯವಸ್ಥೆ ತಪ್ಪಿದ್ದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಜೀಪ್‍ಗಳ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಮುನ್ನಾ ದಿನ ಅಂದರೆ ಜೂನ್ 24 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬೆಳಿಗ್ಗೆ 9:೦೦ ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷೆ ಬರೆಯುವ ಕೊಠಡಿ ಮತ್ತು ನೊಂದಣಿ ಸಂಖ್ಯೆ ಬಗ್ಗೆ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ರೀತಿಯ ವ್ಯವಸ್ಥೆ ಮಾಡಿರುವುದರಿಂದ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಹೇಳಿದರು.

ಜೂನ್ 25 ರಂದು ದ್ವಿತಿಯ ಭಾಷೆ, 27 ರಂದು ಗಣಿತ, 29 ರಂದು ವಿಜ್ಞಾನ, ಜುಲೈ 1 ರಂದು ಸಮಾಜ ವಿಜ್ಞಾನ 2 ರಂದು ಪ್ರಥಮ ಭಾಷೆ ಹಾಗೂ 3 ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: IAS Vijay Shankar Suicide: ಐಎಂಎಯಿಂದ ಹಣ ಪಡೆದ ಆರೋಪ ಎದುರಿಸುತ್ತಿದ್ದ ಐಎಎಸ್​ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಶರಣು

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಮುಖಗವಸು, ಸ್ಯಾನಿಟೈಜರ್​ಗಳನ್ನು ಒದಗಿಸಿ ಥರ್ಮಲ್ ತಪಾಸಣೆ ಒಳಪಡಿಸಿ ಪರೀಕ್ಷೆಗೆ ಹಾಜರು ಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳು ಕಂಡುಬಂದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮದೇ ಆದ ಪ್ರತ್ಯೇಕ ಬ್ಯಾಗಿನಲ್ಲಿ ನೀರಿನ ಬಾಟಲಿ, ಆಹಾರ ಡಬ್ಬಿ ತರಬೇಕು. ಹಾಗೂ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಹಂತದಿಂದ ಪರೀಕ್ಷಾ ಕೇಂದ್ರದಿಂದ ನಿರ್ಗಮಿಸುವ ಹಂತದವರೆಗೂ ದೈಹಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿ.ಪಂ. ಸಿಇಒ ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್ ನಾಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಶಾಂತಲಾ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
First published: