ರಾಜ್ಯದ ಎಲ್ಲಾ ನಗರಗಳ ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ: ಸಚಿವ ಬೈರತಿ ಬಸವರಾಜ್ ಸೂಚನೆ

2021 ಸೆಪ್ಟೆಂಬರ್ 30 ರೊಳಗೆ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಗೆ ಬರುವ ಬಡಾವಣೆ ಅಭಿವೃದ್ಧಿ, ನಗರ ಅಭಿವೃದ್ಧಿ, ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಿಡಿಪಿ ಯನ್ನು ಸಲ್ಲಿಸಬೇಕು ಎಂದು ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.

ಸಚಿವ ಭೈರತಿ ಬಸವರಾಜ್.

ಸಚಿವ ಭೈರತಿ ಬಸವರಾಜ್.

  • Share this:
    ಬೆಂಗಳೂರು (ಅಗಸ್ಟ್ 19) ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ( Comprehensive Development Plan) ತಯಾರಿಸಲು ಆಯುಕ್ತರು ಗಳಿಗೆ ಮಾನ್ಯ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಅವರು ಸೂಚಿಸಿದ್ದಾರೆ. ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಸಭೆ ವಿಕಾಸ ಸೌಧದಲ್ಲಿ ಇಂದು ನಡೆದಿತ್ತು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಭೈರತಿ ಬಸವರಾಜ್ ಮಹತ್ವದ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಈ ಸಭೆಯಲ್ಲಿ ಉಪಸ್ಥಿತರಿದ್ದ ಆಯುಕ್ತರು ಗಳನ್ನು ಉದ್ದೇಶಿಸಿ ಮಾತನಾಡಿದ ಭೈರತಿ ಬಸವರಾಜ್, "2021 ಸೆಪ್ಟೆಂಬರ್ 30 ರೊಳಗೆ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಗೆ ಬರುವ ಬಡಾವಣೆ ಅಭಿವೃದ್ಧಿ, ನಗರ ಅಭಿವೃದ್ಧಿ, ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಿಡಿಪಿ ಯನ್ನು ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಹಾಗೂ ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು" ಎಂದು ಗಡುವು ನೀಡಿದರು.

    ಕೆಲ ಪ್ರಾಧಿಕಾರದ ಅಭಿವೃದ್ಧಿ ಯೋಜನೆ ವಿಚಾರದಲ್ಲಿ ಪ್ರಕರಣಗಳು ಇರುವುದರಿಂದ ಅಂತಹ ಪ್ರಾಧಿಕಾಗಳಿಗೆ ಅಕ್ಟೋಬರ್ ಮತ್ತು ನವೆಂಬರ್ 30 ರೊಳಗೆ ಸಲ್ಲಿಸಲು ಅವಕಾಶ ‌ನೀಡಿದ್ದಾರೆ. ಕೆಲ ಪ್ರಾಧಿಕಾರದ ಸುಪರ್ದಿಯಲ್ಲಿ ಇರುವ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಹರಾಜು ಪ್ರಕ್ರಿಯೆಯಲ್ಲಿ ಮಾರಾಟ ಮಾಡಲು ಸೂಚಿಸಿದರು. ಇದರಿಂದ ಪ್ರಾಧಿಕಾರಕ್ಕೆ ಆದಾಯ ಬರುತ್ತದೆ ಎಂದರು.

    ಅಲ್ಲದೇ ಹೊಸ ಬಡಾವಣೆ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರಗಳ ಸಂಪನ್ಮೂಲ ಹೆಚ್ಚಿಸಬಹುದು ಮತ್ತು ಪ್ರಾಧಿಕಾರದ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ಹೇಳಿದರು. ಕಾನೂನು ತೊಡಕು ಇದ್ದಲ್ಲಿ ಅದನ್ನು ಇಲಾಖೆಯ ಕಾರ್ಯದರ್ಶಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ನಿವಾರಿಸಿಕೊಳ್ಳಲು ಮುಂದಾಗಬೇಕು ಎಂದು ಆಯುಕ್ತರು ಗಳಿಗೆ ಸೂಚಿಸಿದರು.

    ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ರಾಜಕೀಯ ಮುಖಂಡನ ಹತ್ಯೆ; ಕಳೆದ 12 ದಿನಗಳಲ್ಲಿ ಇದು 4 ನೇ ರಾಜಕೀಯ ಕೊಲೆ!

    ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಶ್ರೀ ಎಂ.ಎನ್. ಅಜಯ್ ನಾಗಭೂಷಣ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ‌ಎಲ್.ಶಶಿಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: