• Home
 • »
 • News
 • »
 • district
 • »
 • ಹಿರಿಯ ಸಾಹಿತಿ ಪ್ರೊ ವಸಂತ ಕುಷ್ಟಗಿ ಇನ್ನಿಲ್ಲ, ಹೃದಯಾಘಾತದಿಂದ ಇಂದು ಬೆಳಗ್ಗೆ ವಿಧಿವಶ

ಹಿರಿಯ ಸಾಹಿತಿ ಪ್ರೊ ವಸಂತ ಕುಷ್ಟಗಿ ಇನ್ನಿಲ್ಲ, ಹೃದಯಾಘಾತದಿಂದ ಇಂದು ಬೆಳಗ್ಗೆ ವಿಧಿವಶ

ಪ್ರೊ ವಸಂದ ಕುಷ್ಟಗಿ

ಪ್ರೊ ವಸಂದ ಕುಷ್ಟಗಿ

ರಕ್ತದೊತ್ತಡ ಕಡಿಮೆಯಾಗಿದ್ದರಿಂದ  ಅವರನ್ನು ವಾರದ ಹಿಂದೆ ಗುಲಬರ್ಗಾ ಹಾರ್ಟ್‌ ಫೌಂಡೇಷನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಪ್ರೊ ವಸಂತ ಕುಷ್ಟಗಿ ಇಂದು ಬೆಳಗ್ಗೆ ಕೊನೆಯುಸಿರೆಳೆದರು.

 • Share this:

  ನಾಡಿನ ಹಿರಿಯ ಸಾಹಿತಿ, ಚಿಂತಕ ಪ್ರೊ.ವಸಂತ ಕುಷ್ಟಗಿ (85) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ರಕ್ತದೊತ್ತಡ ಕಡಿಮೆಯಾಗಿದ್ದರಿಂದ  ಅವರನ್ನು ವಾರದ ಹಿಂದೆ ಗುಲಬರ್ಗಾ ಹಾರ್ಟ್‌ ಫೌಂಡೇಷನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು. ದಾಸ ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ ಕುಷ್ಟಗಿಯವರನ್ನು ಮೀರಿಸುವವರಿಲ್ಲ ಎನ್ನಬೇಕು. ಕನ್ನಡ ಸಾರಸ್ವತ ಲೋಕಕ್ಕೆ 60ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ ಸರಸ್ವತಿ ಪುತ್ರರು. ಅವರು ನಿರ್ವಹಿಸದ ಜವಾಬ್ದಾರಿ ಇಲ್ಲ ಎನ್ನಬೇಕು. ಪ್ರಾಧ್ಯಾಪಕ, ಸಾಹಿತಿ, ಲೇಖಕ, ಪತ್ರಕರ್ತ, ವಿದ್ವಾಂಸ, ವಿಮರ್ಶಕ, ಭಾಷಾಜ್ಞಾನಿ, ಹೋರಾಟಗಾರ ಎಲ್ಲವೂ ಆಗಿದ್ದರು. ಕತೆ, ಕವನ, ದಾಸ ಸಾಹಿತ್ಯ, ನಾಟಕ, ಲೇಖನ ಸೇರಿದಂತೆ ಹಲವಾರು ಪ್ರಕಾರಗಳಲ್ಲಿ ಅವರು ಕಲ್ಯಾಣ ಕರ್ನಾಟಕ ಭಾಗದ ಭಾಷೆಗೆ ಗಟ್ಟಿ ನೆಲೆ ತಂದುಕೊಟ್ಟಿದ್ದಾರೆ.


  ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಅವರು ಕನ್ನಡ ಎಂ.ಎ ಪದವಿ ಪಡೆದಿದ್ದರು. 1990ರಿಂದ 94ರವರೆಗೆ ಇಲ್ಲಿನ ನೂತನ ವಿದ್ಯಾಲಯ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಅವರು ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ನಾಡಿನ ಉದ್ದಗಲಕ್ಕೂ ಅಪಾರ ಶಿಷ್ಯ ಬಳಗ ಹಾಗೂ ಸಾಹಿತ್ಯಾಭಿಮಾನಿಗಳನ್ನು ಅವರು ಹೊಂದಿದ್ದಾರೆ. ಧರ್ಮಸಿಂಗ್‌ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರೊ ಕುಷ್ಟಿಗಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಒಂದು ಬಾರಿ ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡಿದ್ದರು. 2020ರಲ್ಲಿ ಕಲಬುರ್ಗಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲು ಪ್ರೊ ವಸಂತ ಕುಷ್ಟಗಿ ಅವರ ಹೆಸರೂ ಮುಂಚೂಣಿಯಲ್ಲಿತ್ತು.


  ಕಲ್ಯಾಣ ಕರ್ನಾಟಕ ಭಾಗದಲ್ಲಿ ಮರಾಠಿ, ತೆಲಗು, ಉರ್ದು ಭಾಷೆಗಳ ಒತ್ತಡದ ನಡುವೆಯೂ ಕನ್ನಡ ಅಸ್ಮಿತೆಯನ್ನು ಉಳಿಸಿ, ಬೆಳೆಸುವಲ್ಲಿ ಅವರ ಕೊಡುಗೆ ದೊಡ್ಡದು. ಸಾಹಿತ್ಯ, ಐತಿಹಾಸಿಕ ಚಟುವಟಿಕೆ, ಹೋರಾಟಗಳು, ಚಾರಿತ್ರಿಕ ಘಟನೆಗಳಲ್ಲಿ ಅವರ ಹೆಸರು ಯಾವಾಗಲೂ ಮುಂದಿರುತ್ತಿತ್ತು. ಭೀಮಸೇನರಾವ್‌ ತಾವಗೆ ಅವರೊಂದಿಗೆ  1935ರಲ್ಲಿಯೇ ಕಲಬುರ್ಗಿಯಲ್ಲಿ ಕನ್ನಡ ಸಂಘ ಕಟ್ಟಿ ಹೋರಾಡಿದ್ದು ಅವರ ಹಿರಿಮೆ. ಕೊರೊನಾ ಉಪಟಳದ ಸಂದರ್ಭದಲ್ಲಿಯೂ ಅವರು ಕ್ರಿಯಾಶೀಲರಾಗಿದ್ದರು. ಎರಡು ತಿಂಗಳ ಹಿಂದೆಯೇ ನಗರದಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡಿದ್ದರು.

  Published by:Soumya KN
  First published: