ಬೆಳಗಾವಿ; ನಗರ ಬೆಳೆದಂತೆ ಅನೇಕ ಅಕ್ರಮ, ಅನೈತಿಕ ಚಟುವಟಿಕೆಗಳು ಸಹ ಹೆಚ್ಚಾಗಿವೆ. ಮಸಾಜ್ ಮತ್ತು ಸ್ಪಾ ಸೆಂಟರ್ ಹೆಸರಿನಲ್ಲಿ ಮಾಂಸ ದಂಧೆ ನಡೆಯುತ್ತಿದೆ. ಬಣ್ಣ ಬಣ್ಣದ ಫೋಟೋ ತೋರಿಸಿ ಶ್ರೀಮಂತ ಯುವಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇಂತಹ ಮಸಾಜ್ ಮತ್ತು ಸ್ಪಾ ಸೆಂಟರ್ ಮೇಲೆ ಪೊಲೀಸರ ದಾಳಿ ಮಾಡಿ, ನಿಜ ಬಣ್ಣ ಬಯಲು ಮಾಡಿದ್ದಾರೆ. ಸಿಇಎನ್ ಪೊಲೀಸ ಠಾಣೆಯ ಇನ್ಸ್ಪೆಕ್ಟರ್ ಬಿ ಆರ್ ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾಂಗ್ರೆಸ್ ರಸ್ತೆಯ ನೆಲಸನ್ ಹೈಟ್ಸ್ ಅಪಾರ್ಟ್ಮೆಂಟ್ ನಲ್ಲಿ ಇರೋ ನ್ಯೂ ಗೇಟವೇ ಯೂನಿಸೆಕ್ಸ್ ಸ್ಪಾ, ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಲಾಗಿದೆ. ಇಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರೋದು ಕಂಡು ಬಂದಿದೆ.
ಈ ಸೆಂಟರ್ ನಲ್ಲಿ ಮೂರು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಅನೈತಿಕ ಚಟುವಟಿಕೆ ಬಳಸುತ್ತಿದ್ದು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕಾಶ್ ಯಳೂರಕರ್, ವಿನಾಯಕ ಶಿಂಧೆ ಬಂಧಿತ ಆರೋಪಿಗಳು.
ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಆನ್ಲೈನ್ ಮೂಲಕ ಹೇಗೆ ವಂಚನೆ ಮಾಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಂಡು ವಂಚನೆ ಮಾಡಿರೋ ಬಗ್ಗೆಯೂ ಪೊಲೀಸರಿಗೆ ಅನುಮಾನ ಇದೆ. ರಕ್ಷಣೆ ಮಾಡಿರೋ ಯುವತಿಯರನ್ನು ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಬೆಳಗಾವಿ ಎಪಿಎಂಸಿ ಪೊಲೀಸ್ ಇನ್ಸ್ಪೆಕ್ಟರ್ ಜಾವೇದ್ ಮುಶಾಪುರಿ ನೇತೃತ್ವದಲ್ಲಿ ಬೆಳಗಾವಿಯ ಸದಾಶಿವ ನಗರದ ಮನೆಯೊಂದರ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರೋದು ಕಂಡು ಬಂದಿದೆ. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮಾರುತಿ ಕಳಗೇರಿ, ಸಿದ್ದಪ್ಪ ಚೌಗಲಾ ಬಂಧಿತ ಆರೋಪಿಗಳು. ಈ ಬಗ್ಗೆ ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಹಳೆ ದ್ವೇಷಕ್ಕೆ ಬಿತ್ತು ಎರಡು ಹೆಣ; ಡಬಲ್ ಮರ್ಡರ್ಗೆ ಬೆಚ್ಚಿದ ಮೈಸೂರು
ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಆನ್ಲೈನ್ ಹೇಗೆ ವಂಚನೆ ಮಾಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಂಡು ವಂಚನೆ ಮಾಡಿರೋ ಬಗ್ಗೆ ಪೊಲೀಸರಿಗೆ ಅನುಮಾನ ಇದೆ ಬಗ್ಗೆ ಪೊಲೀಸ ತನಿಖೆ ಕೈಗೊಂಡಿದ್ದಾರೆ. ರಕ್ಷಣೆ ಮಾಡಿರೋ ಇಬ್ಬರು ಯುವತಿಯರನ್ನು ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ