ಕಲಬುರ್ಗಿ(ಜೂ.22): ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಜಿಲ್ಲೆಯಲ್ಲಿ 28 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗಳು. ಹೊರ ರಾಜ್ಯಗಳಿಂದ ಬಂದ ವಲಸಿಗರ ಪೈಕಿ 10 ವರ್ಷದ ಒಳಗಿನ ಮತ್ತು 65 ವರ್ಷ ಮೇಲ್ಪಟ್ಟವರಿಗೆ ಸಾಂಸ್ಥಿಕ ಕ್ವಾರಂಟೈನಿಂದ ರಿಯಾಯಿತಿ ನೀಡಲಾಗಿತ್ತು. ಆದರೆ, ಹೋಂ ಕ್ವಾರಂಟೈನ್ ಮಾಡದೆ ಸಾರ್ವಜನಿಕವಾಗಿ ಅಡ್ಡಾಟ ಮಾಡಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.
ಸೆಕ್ಟರಲ್ ಮ್ಯಾಜಿಸ್ಟ್ರೇಟ್ ನೀಡಿದ ಮಾಹಿತಿ ಮೇರೆಗೆ ಜಿಲ್ಲೆಯಲ್ಲಿ 28 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಜಿಲ್ಲಾಡಳಿತ ಎಂಟು ಜನರನ್ನು ಸಾಂಸ್ತಿಕ ಕ್ವಾರಂಟೈನ್ ಗೆ ಕಳುಹಿಸಿಕೊಟ್ಟಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 1299ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರಿಕೆಯಾಗುತ್ತಿದೆ. ಇಷ್ಟಾದರೂ ಜನ ತಲೆಕೆಡಿಸಿಕೊಳ್ಳದಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ :
ಕೆರೆ ಕಾಮಗಾರಿಯಲ್ಲಿ ಅಕ್ರಮ ಆರೋಪ - ಮಾಜಿ ಶಾಸಕರು ಸುಳ್ಳು ಹೇಳುತ್ತಿದ್ದಾರೆ : ಶಾಸಕ ಅಮರೇಗೌಡ ಬಯ್ಯಾಪುರ
ಮಕ್ಕಳು ವಯಸ್ಸಾದವರು ಎಂಬ ಕಾರಣಕ್ಕೆ ಸಾಂಸ್ಥಿಕ ಕ್ವಾರಂಟೈನ್ ನಿಂದ ಕೊಟ್ಟ ಸಡಿಲಿಕೆ ಜಿಲ್ಲೆಯಲ್ಲಿ ದುರ್ಬಳಕೆಯಾಗುತ್ತಿದೆ.
ಸರ್ಕಾರದ ನಿಯಮಗಳನ್ನು ಕೆಲ ವ್ಯಕ್ತಿಗಳು ಗಾಳಿಗೆ ತೂರಿದ್ದು, ಕ್ವಾರಂಟೈನ್ ನಿಯಮ ಉಲ್ಲಂಘಿಸಿದವರ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ