ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ; ತುಂಬಿ ಹರಿಯುತ್ತಿದೆ ಕೃಷ್ಣೆಯ ಒಡಲು, ಮತ್ತೆ ಪ್ರವಾಹದ ಭೀತಿ

ಕಳೆದ 24 ಗಂಟೆಗಳಲ್ಲಿ ಕೃಷ್ಣಾ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷವೂ ಸಹ ಅಗಸ್ಟ್ ತಿಂಗಳಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಬರಿ ನಾಲ್ಕೆ ದಿನದಲ್ಲಿ 5 ಲಕ್ಷ ಕ್ಯೂಸೆಕ್ ನಷ್ಟು ನೀರು ರಾಜ್ಯಕ್ಕೆ ಹರಿದು ಬಂದಿತ್ತು. ಪರಿಣಾಮ ನೂರಾರು ಹಳ್ಳಿಗಳು ಮುಳುಗಡೆಯಾಗಿ ಪ್ರವಾಹ ಉಂಟಾಗಿತ್ತು. ಈಗ ಮತ್ತೊಮ್ಮೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮತ್ತೆ ಪ್ರವಾಹದ ಆತಂಕ ಜನರಲ್ಲಿ ಮನೆ ಮಾಡಿದೆ.

ಕಳೆದ ವರ್ಷ ಬೆಳಗಾವಿಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದ ದೃಶ್ಯ.

ಕಳೆದ ವರ್ಷ ಬೆಳಗಾವಿಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದ ದೃಶ್ಯ.

  • Share this:
ಬೆಳಗಾವಿ (ಆಗಸ್ಟ್‌ 06); ಕಳೆದ ವರ್ಷದ ಪ್ರವಾಹದಿಂದ ತತ್ತರಿಸಿದ್ದ ಬೆಳಗಾವಿ ಜನ ನಿಟ್ಟುಸಿರು ಬಿಡುವ ಮುನ್ನವೇ ಮತ್ತೆ ಪ್ರವಾಹದ ಛಾಯೆ ಆವರಿಸಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೃಷ್ಣಾ ಹಾಗೂ ಉಪ ನದಿಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕಳೆದ ವರ್ಷದ ಕೃಷ್ಣೆಯ ಪ್ರವಾಹಕ್ಕೆ ಸಿಲುಕಿ ಮನೆ ಜಾನುವಾರಗಳನ್ನ ಕಳೆದುಕೊಂಡಿದ್ದ ಸಾವಿರಾರು ಕುಟುಂಗಳು, ಪ್ರವಾಹ ತಗ್ಗಿ ಇನ್ನೇನು ನಿಟ್ಟುಸಿರು ಬಿಡುವ ಹೊತ್ತಿಗೆ ಈಗ ಮತ್ತೆ ಪ್ರವಾಹದ ಆತಂಕ ಸೃಷ್ಟಿಯಾಗಿದೆ.

ಮಹಾರಾಷ್ಟ್ರದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ರಾಜ್ಯದ ದೂದಗಂಗಾ ವೇದಗಂಗಾ ಹಾಗೂ ಕೃಷ್ಣಾ ನದಿಗಳು ಉಕ್ಕಿ ಹರಿಯುತ್ತಿವೆ. ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ  6 ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಜನ ಸುತ್ತುವರೆದು ಸಂಚಾರ ನಡೆಸುವಂತಾಗಿದೆ.

ಕಳೆದ 24 ಗಂಟೆಗಳಲ್ಲಿ ಕೃಷ್ಣಾ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷವೂ ಸಹ ಅಗಸ್ಟ್ ತಿಂಗಳಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಬರಿ ನಾಲ್ಕೆ ದಿನದಲ್ಲಿ 5 ಲಕ್ಷ ಕ್ಯೂಸೆಕ್ ನಷ್ಟು ನೀರು ರಾಜ್ಯಕ್ಕೆ ಹರಿದು ಬಂದಿತ್ತು. ಪರಿಣಾಮ ನೂರಾರು ಹಳ್ಳಿಗಳು ಮುಳುಗಡೆಯಾಗಿ ಪ್ರವಾಹ ಉಂಟಾಗಿತ್ತು. ಈಗ ಮತ್ತೊಮ್ಮೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮತ್ತೆ ಪ್ರವಾಹದ ಆತಂಕ ಜನರಲ್ಲಿ ಮನೆ ಮಾಡಿದೆ.

ಇನ್ನು  ಸಂಭಾವ್ಯ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು ಇಂದು ದೂದಗಂಗಾ, ವೇದಗಂಗಾ ಹಾಗೂ ಕೃಷ್ಣಾ ನದಿಗೆ ಬೆಳಗಾವಿ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ದೂದಗಂಗಾ ನದಿ ದಡದ ಜತ್ರಾಟ, ಬೀವಶಿ ಹಾಗೂ ಹುನ್ನರಗಿ ಗ್ರಾಮಗಳಲ್ಲಿ ತುರ್ತಾಗಿ ಗಂಜಿ ಕೇಂದ್ರಗಳನ್ನ ತೆರೆಯಲು ಸೂಚನೆ ನೀಡಿದ್ದಾರೆ. ಸದ್ಯ ರಾಜ್ಯಕ್ಕೆ ಮಳೆ ನೀರು ಹರಿದು ಬರುತ್ತಿದ್ದು, ಮಹಾರಾಷ್ಟ್ರದ ಕೊಯಿನಾ, ರಾಧಾನಗರಿ, ವಾರಣಾ, ಕಾಳಮ್ಮವಾಡಿ ಡ್ಯಾಮ್ ಗಳಿಂದ ಇನ್ನು ನೀರು ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ : ಕೊರೋನಾ ಕುರಿತು ತಪ್ಪು ಮಾಹಿತಿ; ಟ್ರಂಪ್ ಹಂಚಿಕೊಂಡ ವಿಡಿಯೋ ನಿರ್ಬಂಧಿಸಿದ ಟ್ವಿಟರ್‌-ಫೇಸ್‌ಬುಕ್

ಹೀಗಾಗಿ ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನ ಮಾಡಿಕೊಂಡಿದೆ. ಈಗಾಗಲೇ 25 ಬೋಟ್‌ಗಳನ್ನ ನಿಯೋಜನೆ ಮಾಡಲಾಗಿದ್ದು, ಒಂದು ಎನ್‌ಡಿಆರ್‌ಎಫ್ ತಂಡ ಕೂಡ ಜಿಲ್ಲೆಯಲ್ಲೆ ಇದೆ. ಅಲ್ಲದೆ, ಕೃಷ್ಣಾ ನದಿ ತಟದ ಗ್ರಾಮಗಳಿಗೆ ಹೆಚ್ಚಿನ ನೀರು ಬಂದರೆ ಇಲ್ಲಿಯೂ ಸಹ ಗಂಜಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಯಾರು ಕೂಡ ಆತಂಕ ಪಡದೆ ತಮ್ಮ ಸುರಕ್ಷಿತೆಗೆ ಆದ್ಯತೆ ನೀಡಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ತಿಳಿಸಿದ್ದಾರೆ.

ಒಟ್ಟಿನಲ್ಲಿ ವರ್ಷದ ಹಿಂದಷ್ಟೇ ಬಂದಂತಹ ಕೃಷ್ಣಾ ಪ್ರವಾಹ ಜನರ ಬದುಕನ್ನೇ ಕೊಚ್ಚಿಕೊಂಡು ಹೋಗಿತ್ತು. ಆ ಪ್ರವಾಹದಿಂದ ಈಗಲೂ ಸುಧಾರಸಿಕೊಳ್ಳದ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ಇದೀಗ ಮತ್ತೆ ಪ್ರವಾಹದ ಪರಿಸ್ಥಿತಿ ಉಂಟಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
Published by:MAshok Kumar
First published: