HOME » NEWS » District » RAINFALL SLOWLY DOWN IN MALNAD REGION MAK

ಮಲೆನಾಡು ಭಾಗದಲ್ಲಿ ತಗ್ಗಿದ ಮಳೆಯ ಆರ್ಭಟ; ಶಾಂತವಾದ ತುಂಗಾ, ಭದ್ರಾ, ಹೇಮಾವತಿ!

ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಜಿಲ್ಲಾದ್ಯಂತ ಮಳೆ ಕಡಿಮೆಯಾಗಿದ್ದು, ಮೋಡ ಕವಿದ ವಾತರವಣ ನಿರ್ಮಾಣವಾಗಿದೆ. ಮುಂದಿನ 24ಗಂಟೆಯಲ್ಲಿ ಮತ್ತೇ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

news18-kannada
Updated:September 22, 2020, 7:25 AM IST
ಮಲೆನಾಡು ಭಾಗದಲ್ಲಿ ತಗ್ಗಿದ ಮಳೆಯ ಆರ್ಭಟ; ಶಾಂತವಾದ ತುಂಗಾ, ಭದ್ರಾ, ಹೇಮಾವತಿ!
ಚಿಕ್ಕಮಗಳೂರಿನಲ್ಲಿ ಮಳೆಗೆ ಸೇತುವೆಯ ಮೇಲೆ ಹರಿದ ನೀರು.
  • Share this:
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆ ಸೋಮವಾರ ಬೆಳಿಗ್ಗೆಯಿಂದ ಇಳಿಮುಖವಾಗಿದ್ದು, ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ. ಹವಮಾನ ಇಲಾಖೆ ಮುಂದಿನ ಎರಡು ದಿನ ಬಾರೀ ಮಳೆಯಾಗುವ ಎಚ್ಚರಿಕೆ ನೀಡಿದ್ದು ಜಿಲ್ಲಾಡಳಿತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶನಿವಾರ ಸಂಜೆಯಿಂದ ಭಾನುವಾರ ಇಡೀ ದಿನ ಜಿಲ್ಲಾದ್ಯಂತ ಮಳೆಯಾಗಿದ್ದು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ವರುಣ ಅಬ್ಬರಿಸಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಸೇರಿದಂತೆ ಹಳ್ಳಕೊಳ್ಳಗಳು ತುಂಬಿ ಹರಿದ್ದವು. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟ ಮೀರಿ ಹರಿದ ಪರಿಣಾಮ ಬಾಳೆಹೊನ್ನೂರು, ಮಾಗುಂಡಿ, ಬಣಕಲ್, ಮೂಡಿಗೆರೆ, ಕಳಸ, ಶೃಂಗೇರಿ ಭಾಗದಲ್ಲಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ನಿರ್ಮಾಣವಾಗಿತ್ತು. ಎರಡುದಿನ ಅಬ್ಬರಿಸಿದ ಮರುಣ ಸೋಮವಾರ ಬೆಳಿಗ್ಗೆಯಿಂದ ಜಿಲ್ಲೆಯಲ್ಲಿ ಇಳಿಮುಖ ವಾಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ.

ಸೋಮವಾರ ಜಿಲ್ಲೆಯ ಮಲೆನಾಡು ಭಾಗದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಬಿಡುವು ನೀಡದ ಮಳೆ ಸಂಜೆ ವೇಳೆಗೆ ಸಾಧಾರಣವಾಗಿ ಮಳೆ ಸುರಿದಿದೆ. ಬಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿಲ್ಲ.ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಎರಡು ದಿನಗಳಿಂದ ಸುರಿದ ಬಾರೀ ಮಳೆಗೆ ಅಲ್ಲಲ್ಲಿ ರಸ್ತೆ ಬದಿ ಧರೆ ಕುಸಿತದಂತಹ ಘಟನೆಗಳು ವರದಿಯಾಗಿದ್ದವು.

ಇದನ್ನೂ ಓದಿ : ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತ ಹೋರಾಟ; ಹೋರಾಟಗಾರರನ್ನು ಭಯೋತ್ಪಾದಕರೆಂದ ನಟಿ ಕಂಗನಾ

ರಸ್ತೆ ಬದಿಯಲ್ಲಿ ಕೃತಕ ಜಲಪಾತಗಳು ನಿರ್ಮಾಣವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಕಳಸ ಪಟ್ಟಣ ಸಮೀಪದ ಹೆಬ್ಬಾಳೆ ಸೇತುವೆ ಬಾರೀ ಮಳೆಗೆ ಭದ್ರಾನದಿ ನೀರಿನಲ್ಲಿ ಮುಳುಗಿದ್ದು ವಾಹನ ಸಂಚಾರ ಸ್ತಬ್ಧಗೊಂಡಿತ್ತು. ಸೋಮವಾರ ಮಳೆ ಕಡಿಮೆಯಾದ ಪರಿಣಾನ ಸೇತುವೆ ಮೇಲಿನ ನೀರು ತೆರವುಗೊಂಡಿದ್ದರಿಂದ ವಾಹನ ಸಂಚಾರ ಪುರ್ನಾರಂಭಗೊಂಡಿದೆ.

ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಜಿಲ್ಲಾದ್ಯಂತ ಮಳೆ ಕಡಿಮೆಯಾಗಿದ್ದು, ಮೋಡ ಕವಿದ ವಾತರವಣ ನಿರ್ಮಾಣವಾಗಿದೆ. ಮುಂದಿನ 24ಗಂಟೆಯಲ್ಲಿ ಮತ್ತೇ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Published by: MAshok Kumar
First published: September 22, 2020, 7:24 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories